ಮೈಷುಗರ್ ಕಾರ್ಖಾನೆ ಖಾಸಗೀಕರಣ ಮಾಡದಂತೆ ಒತ್ತಾಯ
ಮಂಡ್ಯ

ಮೈಷುಗರ್ ಕಾರ್ಖಾನೆ ಖಾಸಗೀಕರಣ ಮಾಡದಂತೆ ಒತ್ತಾಯ

March 3, 2020

ಮಂಡ್ಯ,ಮಾ.2(ನಾಗಯ್ಯ)-ಮೈಷು ಗರ್ ಕಾರ್ಖಾನೆಯನ್ನು ಖಾಸಗೀಕರಣ ಮಾಡದೆ ಸರ್ಕಾರಿ ಸ್ವಾಮ್ಯದಲ್ಲೇ ಉಳಿಸಿ ಕೊಳ್ಳಬೇಕು ಎಂದು ಪ್ರಗತಿಪರ ಸಂಘ ಟನೆಗಳ ಮುಖಂಡರು ಒತ್ತಾಯಿಸಿದರು.

ನಗರದಲ್ಲಿಂದು ಜಂಟಿ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ರೈತನಾಯಕಿ ಸುನಂದಾ ಜಯರಾಂ, ಕಾಂಗ್ರೆಸ್ ಜಿಲ್ಲಾ ಧ್ಯಕ್ಷ ಸಿ.ಡಿ.ಗಂಗಾಧರ್, ಮೈಷುಗರ್ ಕಬ್ಬು ಒಪ್ಪಿಗೆದಾರರ ಸಂಘದ ಅಧ್ಯಕ್ಷ ಎಸ್.ಕೃಷ್ಣ ಅವರು, ಖಾಸಗೀಕರಣ ಮಾಡುತ್ತೇವೆ ಎಂಬ ಸಕ್ಕರೆ ಸಚಿವರ ಹೇಳಿಕೆಯನ್ನು ಖಂಡಿಸಿದರು.

ಮಾ.5ರಂದು 2020-21ನೇ ಸಾಲಿನ ರಾಜ್ಯ ಬಜೆಟ್‍ನಲ್ಲಿ ಕಾರ್ಖಾನೆಯನ್ನು ಸರ್ಕಾರಿ ಸ್ವಾಮ್ಯದಲ್ಲಿಯೇ ನಡೆಸಲು ಹಣ ಮೀಸಲಿಡಬೇಕು. ಕಾರ್ಖಾನೆಯ ಸಾಧÀಕ -ಬಾಧಕಗಳ ಬಗ್ಗೆ ಚರ್ಚಿಸಲು ಎಲ್ಲಾ ಸಂಘಟನೆಗಳು ಹಾಗೂ ರೈತರನ್ನು ಕೂಡಲೇ ಸಭೆ ಕರೆದು ತೀರ್ಮಾ ನಿಸಬೇಕು. ಕಾರ್ಖಾನೆಯ ಆಡಳಿತ ಮಂಡಳಿ ಕಾರ್ಖಾನೆಯ ಸ್ಥಿತಿಗತಿಗಳ ಬಗ್ಗೆ ವಾಸ್ತವ ವರದಿಯನ್ನು ನೀಡುವುದರ ಜೊತೆಗೆ ಇಲ್ಲಿಯ ತನಕ ನೀಡಿರುವ ಅನು ದಾನ ಹಾಗೂ ವಿನಿಯೋಗಿಸಿರುವ ಹಣ ದವಿವರವನ್ನು ನೀಡಬೇಕು ಎಂದು ಅವರು ಆಗ್ರಹಿಸಿದರು.

ಪಾಂಡವಪುರ ಸಹಕಾರಿ ಸಕ್ಕರೆ ಕಾರ್ಖಾನೆಯನ್ನು 40 ವರ್ಷಗಳ ಕಾಲ ಗುತ್ತಿಗೆ ನೀಡಲು ಮುಂದಾಗಿರುವುದು ಖಂಡನೀಯ. ಕೂಡಲೇ ಸರ್ಕಾರ ಕ್ರಮ ಕೈಗೊಂಡು ಮೈಷುಗರ್ ಹಾಗೂ ಪಿಎಸ್‍ಎಸ್‍ಕೆ ಕಾರ್ಖಾನೆಗಳನ್ನು ಸರ್ಕಾರಿ ಸ್ವಾಮ್ಯದಲ್ಲೇ ಮುಂದುವರೆಸ ಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟ ನಡೆಸಲಾಗುವುದು ಎಂದು ಅವರು ಎಚ್ಚರಿಸಿದರು.

ಸರ್ಕಾರಕ್ಕೆ ಕಾರ್ಖಾನೆಯ ನಡೆಸಲು ದಕ್ಷ ಅಧಿಕಾರಿಗಳು,ತಂತ್ರಜ್ಞರು ಹಾಗೂ ಕಾರ್ಮಿಕರನ್ನು ನೇಮಿಸಿ ಆರಂಭಿಸುವ ಎಲ್ಲಾ ಅರ್ಹತೆ ಇದ್ದರೂ, ಖಾಸಗೀಕರಣ ಮಾಡಲು ಹೊರಟಿದೆ. ಖಾಸಗೀಕರಣ ದಿಂದ ರೈತರಿಗೆ ನಿಜವಾದ ನ್ಯಾಯ ಸಿಗ ಲಿದೆ ಎಂಬ ನಂಬಿಕೆ ಇಲ್ಲ. ಮೈಷುಗರ್ ಕಾರ್ಖಾನೆಯಿಂದ ಸಾಕಷ್ಟು ಲಾಭ ವಿದ್ದರೂ ಅದನ್ನು ಸರಿಯಾಗಿ ನಿರ್ವ ಹಿಸದಿರುವುದೇ ಮುಖ್ಯ ಕಾರಣವಾಗಿದೆ. ಆದ್ದರಿಂದಕೂಡಲೇ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಸುದ್ದಿ ಗೋಷ್ಠಿಯಲ್ಲಿ ಮೈಷುಗರ್ ಮಾಜಿ ಅದ್ಯಕ್ಷ ಸಿದ್ದರಾಮೇಗೌಡ, ಸಿಐಟಿಯುನ ಸಿ.ಕುಮಾರಿ, ವಿಜಯಲಕ್ಷ್ಮಿ ರಘುನಂದನ್, ಕಾಂಗ್ರೆಸ್‍ಮಹಿಳಾ ಘಟಕದ ಅಧ್ಯಕ್ಷೆ ಅಂಜನಾ ಶ್ರೀಕಾಂತ್ ಇದ್ದರು.

Translate »