ಮೈಶುಗರ್ ಸರ್ಕಾರಿ ಸ್ವಾಮ್ಯದಲ್ಲೇ ಉಳಿಸಲು ಸಿದ್ದರಾಮಯ್ಯರ ಮೊರೆ ಹೋದ ರೈತ ಮುಖಂಡರು
ಮೈಸೂರು

ಮೈಶುಗರ್ ಸರ್ಕಾರಿ ಸ್ವಾಮ್ಯದಲ್ಲೇ ಉಳಿಸಲು ಸಿದ್ದರಾಮಯ್ಯರ ಮೊರೆ ಹೋದ ರೈತ ಮುಖಂಡರು

May 26, 2020

ಬೆಂಗಳೂರು, ಮೇ 25 (ಕೆಎಂಶಿ)-ಮೈಶುಗರ್ ಕಾರ್ಖಾನೆಯನ್ನು ಸರ್ಕಾರಿ ಸ್ವಾಮ್ಯದಲ್ಲೇ ಉಳಿ ಸಲು ಸರ್ಕಾರದ ಮೇಲೆ ಒತ್ತಡ ಹೇರುವಂತೆ ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಮುಖಂಡರು ಮಾಜಿ ಮುಖ್ಯ ಮಂತ್ರಿ ಹಾಗೂ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.

ರೈತ ಮುಖಂಡರಾದ ಸುನಂದಾ ಜಯರಾಂ ಮತ್ತಿತರರು ಇಂದು ಸಿದ್ದರಾಮಯ್ಯ ಅವರನ್ನು ಸರ್ಕಾರಿ ನಿವಾಸದಲ್ಲಿ ಭೇಟಿ ಮಾಡಿ, ಕಂಪನಿಯನ್ನು ಖಾಸಗೀಕರಣ ಮಾಡಲು ಸರ್ಕಾರದ ಸಿದ್ಧತೆಗಳ ಬಗ್ಗೆ ಮಾಹಿತಿ ನೀಡಿದರು. ಸರ್ಕಾರದ ಈ ನಿರ್ಧಾರಕ್ಕೆ ಜಿಲ್ಲಾ ರೈತರು ವಿರೋಧ ವ್ಯಕ್ತಪಡಿಸಿದ್ದಾರೆ. ಖಾಸಗೀಕರಣಕ್ಕೆ ಅವಕಾಶ ನೀಡುವುದಿಲ್ಲ. ನೀವು ಸರ್ಕಾರದ ತಪ್ಪಿನ ಬಗ್ಗೆ ಕಣ್ತೆರೆಸಬೇಕು. ಇದನ್ನು ಸರ್ಕಾರದ ವ್ಯಾಪ್ತಿಯಲ್ಲೇ ಉಳಿಸಬೇಕು ಎಂದು ಮನವಿ ಮಾಡಿಕೊಂಡರು.

Translate »