ಮೈಷುಗರ್ ಶೀಘ್ರ ಪುನಾರಂಭ
ಮಂಡ್ಯ

ಮೈಷುಗರ್ ಶೀಘ್ರ ಪುನಾರಂಭ

August 17, 2021

ಮಂಡ್ಯ, ಆ.16(ಮೋಹನ್‍ರಾಜ್)- ಜಿಲ್ಲೆಯ ಜೀವನಾಡಿ ಮೈಷುಗರ್ ಸಕ್ಕರೆ ಕಾರ್ಖಾನೆಯನ್ನು ಶೀಘ್ರವೇ ಪುನರಾರಂ ಭಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ರೇಷ್ಮೆ ಹಾಗೂ ತೋಟಗಾರಿಕಾ ಸಚಿವ ಕೆ.ಸಿ.ನಾರಾಯಣಗೌಡ ತಿಳಿಸಿದರು.

ನಗರದ ಸರ್‍ಎಂ.ವಿಶ್ವೇಶ್ವರಯ್ಯ ಕ್ರೀಡಾಂ ಗಣದಲ್ಲಿ ಸ್ವಾತಂತ್ರೋತ್ಸವದ ಧ್ವಜಾರೋ ಹಣ ನೆರವೇರಿಸಿ ಅವರು ಮಾತನಾಡಿ ದರು. ಜಿಲ್ಲೆಯ ಪಿ.ಎಸ್.ಎಸ್.ಕೆ.ಯನ್ನು ಪುನಾರಂಭಿಸಲಾಗಿದ್ದು, 10 ಸಾವಿರ ರೈತರಿಗೆ ನೆರವಾಗುತ್ತಿದೆ. ಮಂಡ್ಯ ತಾಲೂಕಿನ ಕೊತ್ತತ್ತಿ ಹೋಬಳಿಯ 28 ಗ್ರಾಮಗಳಿಗೆ ಕುಡಿಯುವ ನೀರು ಪೂರೈಕೆ ಹಾಗೂ 5 ಕೆರೆಗಳಿಗೆ ನೀರು ತುಂಬಿಸುವ 18.5 ಕೋಟಿ ರೂ. ವೆಚ್ಚದ ಏತ ನೀರಾವರಿ ಯೋಜನೆಗೆ ಚಾಲನೆ ನೀಡಲಾಗಿದೆ ಎಂದರು.

ಮಂಡ್ಯ ಜಿಲ್ಲೆಗೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ಇಲ್ಲಿಯವರೆಗೆ ಒಟ್ಟು 2,63,000 ರೈತ ಫಲಾನುಭವಿ ಗಳಿಗೆ ಒಟ್ಟು ರೂ. 50.43 ಕೋಟಿ ಸಹಾಯ ಧನ ಪಾವತಿಸಲಾಗಿದೆ. ಕೃಷಿ ಯಾಂತ್ರೀ ಕರಣ ಕಾರ್ಯಕ್ರಮದಡಿ ರೂ. 33.64 ಕೋಟಿ ವೆಚ್ಚದಲ್ಲಿ 19,511 ರೈತರಿಗೆ ವಿವಿಧ ಯಂತ್ರೋಪಕರಣಗಳನ್ನು ವಿತರಿಸಲಾ ಗಿದೆ. ಜಿಲ್ಲೆಗೆ ರೂ. 1781. ಕೋಟಿ ವೆಚ್ಚದ ಶಾಶ್ವತ ಕುಡಿಯುವ ನೀರು `ಜಲಧಾರೆ’ ಯೋಜನೆಯನ್ನು ಮಂಜೂರು ಮಾಡಿದ್ದು, ಜಿಲ್ಲೆಯ 7 ತಾಲೂಕಿನ 1024 ಗ್ರಾಮ ಹಾಗೂ ಪಟ್ಟಣಗಳಿಗೆ ಅನುಕೂಲವಾಗಲಿದೆ. 2023ಕ್ಕೆ ಕಾಮಗಾರಿ ಪೂರ್ಣಗೊಳಿಸುವ ಉದ್ದೇಶ ಹೊಂದಲಾಗಿದೆ ಎಂದು ವಿವರಿಸಿದರು.

ಕೋವಿಡ್-19, 1 ಮತ್ತು 2ನೇ ಅಲೆ ಯನ್ನು ಜಿಲ್ಲಾಡಳಿತ ಸಮರ್ಥವಾಗಿ ಎದುರಿಸಿದ್ದು, 3ನೇ ಅಲೆ ತಡೆಗೆ ಮುನ್ನೆಚ್ಚ ರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ರಾಜ್ಯದ ಲ್ಲಿಯೇ ಮಂಡ್ಯ ಜಿಲ್ಲೆಯ ಎಲ್ಲ ತಾಲೂಕು ಆಸ್ಪತ್ರೆಗಳು ಆಕ್ಸಿಜನ್ ಉತ್ಪಾದನಾ ಘಟಕ ಹೊಂದುವ ಮೊದಲು ಜಿಲ್ಲೆಯಾಗಲಿದೆ. ಜಿಲ್ಲೆಯಲ್ಲಿ ಇದುವರೆಗೆ…9,30,123 ಜನರಿಗೆ ಲಸಿಕೆ ನೀಡಲಾಗಿದೆ. ಕೋವಿಡ್-19 ಮೊದಲನೇ ಅಲೆ ಹಾಗೂ ಎರಡನೇ ಅಲೆಯ ಸಂಕಷ್ಟಕ್ಕೆ ಒಳಗಾದ ಒಟ್ಟು 4,040 ರೈತರಿಗೆ ರೂ. 211.87 ಲಕ್ಷ ಸಹಾಯ ಧನವನ್ನು ನೇರವಾಗಿ ಅವರ ಖಾತೆಗಳಿಗೆ ಜಮಾ ಮಾಡಲಾಗಿದೆ ಎಂದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಜಿಲ್ಲೆಯಲ್ಲಿ ರೂ. 2 ಕೋಟಿ ವೆಚ್ಚದಲ್ಲಿ ಕ್ರೀಡಾ ವಿಜ್ಞಾನ ಕೇಂದ್ರ ಸ್ಥಾಪನೆ. ಮಂಡ್ಯ ಜಿಲ್ಲಾ ಕ್ರೀಡಾಂಗಣ ಅಭಿವೃದ್ಧಿಗೆ ರೂ. 10 ಕೋಟಿ ಅನುದಾನ, ಹೆಣ್ಣುಮಕ್ಕಳ ಕ್ರೀಡಾ ಶಾಲೆ ನಿರ್ಮಾಣಕ್ಕೆ ರೂ. 2 ಕೋಟಿ, ಕೆ.ಆರ್. ಪೇಟೆ ಕ್ರೀಡಾಂಗಣ ಅಭಿವೃದ್ಧಿಗೆ 14.50 ಕೋಟಿ ಅನುದಾನ ಒದಗಿಸಲಾ ಗಿದೆ. ಎಸ್‍ಎಸ್‍ಎಲ್‍ಸಿ ಪರೀಕ್ಷೆಯ ಫಲಿ ತಾಂಶದಲ್ಲಿ ಮಂಡ್ಯ ಜಿಲ್ಲೆಗೆ ಶೇ. 100 ರಷ್ಟು ಫಲಿತಾಂಶ ಬಂದಿದೆ. ಎಂಟು ವಿದ್ಯಾರ್ಥಿಗಳು 625ಕ್ಕೆ 625 ಅಂಕ ಗಳಿಸಿದ್ದು ಹೆಮ್ಮೆಯ ವಿಷಯವಾಗಿದೆ ಎಂದು ಶ್ಲಾಘಿಸಿದರು.

ವೇದಿಕೆಯಲ್ಲಿ ಶಾಸಕ ಎಂ.ಶ್ರೀನಿವಾಸ್, ವಿಧಾನಪರಿಷತ್ ಸದಸ್ಯರಾದ ಕೆ.ಟಿ. ಶ್ರೀಕಂಠೇಗೌಡ, ಎನ್.ಅಪ್ಪಾಜಿಗೌಡ, ನಗರ ಸಭೆ ಅಧ್ಯಕ್ಷ ಮಂಜು, ಉಪಾಧ್ಯಕ್ಷೆ ಇಶ್ರತ್ ಫಾತೀಮಾ, ಮುಡಾ ಅಧ್ಯಕ್ಷ ಶ್ರೀನಿವಾಸ್, ಜಿಲ್ಲಾಧಿಕಾರಿ ಅಶ್ವಥಿ, ಎಸ್ಪಿ ಡಾ.ಅಶ್ವಿನಿ, ಎಡಿಸಿ ಶೈಲಜಾ, ಜಿ.ಪಂ. ಸಿಇಓ ದಿವ್ಯಾ ಪ್ರಭು, ಆಡಳಿತಾಧಿಕಾರಿ ರಾಮ್ ಪ್ರಸಾತ್ ಮನೋಹರ್, ಬಿಜೆಪಿ ಜಿಲ್ಲಾಧ್ಯಕ್ಷ ವಿಜಯ್‍ಕುಮಾರ್ ಉಪಸ್ಥಿತರಿದ್ದರು.

Translate »