ವಿಜಯನಗರ ಸರ್ಕಾರಿ ಪದವಿ ಕಾಲೇಜಿಗೆ ನ್ಯಾಕ್ ಮಾನ್ಯತೆ
ಮೈಸೂರು

ವಿಜಯನಗರ ಸರ್ಕಾರಿ ಪದವಿ ಕಾಲೇಜಿಗೆ ನ್ಯಾಕ್ ಮಾನ್ಯತೆ

July 27, 2018

ಮೈಸೂರು:  ಮೈಸೂರಿನ ವಿಜಯನಗರದಲ್ಲಿರುವ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿಗೆ 2014-15ನೇ ನ್ಯಾಕ್ `ಬಿ’ ಶ್ರೇಣಿ ಮಾನ್ಯತೆ ಪಡೆದಿದೆ. ಮೈಸೂರು ಹಾಗೂ ಸುತ್ತಮುತ್ತಲಿನ ಹೆಣ್ಣು ಮಕ್ಕಳ ಉನ್ನತ ಶಿಕ್ಷಣಕ್ಕಾಗಿ ಕಾಲೇಜು ಶಿಕ್ಷಣ ಇಲಾಖೆಯ ಮಹತ್ವಾಕಾಂಕ್ಷಿ ಕಾಲೇಜಾಗಿದ್ದು ಫಲಿತಾಂಶದಲ್ಲಿ ವರ್ಷದಿಂದ ವರ್ಷಕ್ಕೆ ಏರಿಕೆಯಾಗಿದ್ದು, ಕಾಲೇಜು ಶಿಕ್ಷಣ ಇಲಾಖೆಯ ಮೆಚ್ಚುಗೆಗೆ ಪಾತ್ರವಾಗಿದೆ.

ಕಾಲೇಜಿನಲ್ಲಿ 2018-19ನೇ ಸಾಲಿನ ಬಿ.ಎ., ಬಿ.ಎಸ್ಸಿ, ಬಿ.ಕಾಂ, ಬಿಬಿಎ ಪದವಿಗಳಿಗೆ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ಇದರ ಸದುಪಯೋಗಪಡಿಸಿಕೊಳ್ಳಲು ಕೋರಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Translate »