ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ ಪೂರ್ವಭಾವಿ ಸಭೆ
ಮೈಸೂರು

ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ ಪೂರ್ವಭಾವಿ ಸಭೆ

June 17, 2019

ಮೈಸೂರು: ಜೂ.27ರಂದು ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ಅದ್ಧೂರಿಯಾಗಿ ಆಚರಿ ಸುವ ಸಂಬಂಧ ಮೈಸೂರಿನ ಬೋಗಾದಿ ಯಲ್ಲಿರುವ ಆದಿಚುಂಚನಗಿರಿ ಮೈಸೂರು ಶಾಖಾ ಮಠದಲ್ಲಿ ಭಾನುವಾರ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಪೂರ್ವಭಾವಿ ಸಭೆ ನಡೆಯಿತು.

ಸರ್ಕಾರದ ವತಿಯಿಂದ ಜೂ.27 ರಂದು ಕಲಾಮಂದಿರದಲ್ಲಿ ನಡೆಯಲಿ ರುವ ಕೆಂಪೇಗೌಡ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸುವ ಸಂಬಂಧ ಜೂ.21ರಂದು ಮೈಸೂರಿನ ಬಂದಂತಮ್ಮ ಕಾಳಮ್ಮ ಕಲ್ಯಾಣ ಮಂಟಪದಲ್ಲಿ ವಿವಿಧ ಒಕ್ಕಲಿಗರ ಸಂಘಗಳನ್ನು ಒಳಗೊಂಡಂತೆ ಮತ್ತೊಂದು ಪೂರ್ವಭಾವಿ ಸಭೆ ನಡೆಸಲು ತೀರ್ಮಾನಿಸಲಾಯಿತು.
ಅಂದಿನ ಸಭೆಯಲ್ಲಿ ಕೆಂಪೇಗೌಡ ಜಯಂತಿಯ ಅದ್ಧೂರಿ ಆಚರಣೆಗೆ ಕೈಗೊಳ್ಳಬೇಕಾದ ರೂಪುರೇಷೆಗಳ ಕುರಿತು ಚರ್ಚಿಸಿ ಅಂತಿಮಗೊಳಿಸಲು ಸಭೆ ನಿರ್ಧರಿಸಿತು.

ಇಂದಿನ ಸಭೆಯಲ್ಲಿ ಆದಿಚುಂಚನಗಿರಿ ಮೈಸೂರು ಶಾಖಾ ಮಠದ ಶ್ರೀ ಸೋಮನಾಥ ಸ್ವಾಮೀಜಿ, ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ, ಸಚಿವ ಸಾ.ರಾ.ಮಹೇಶ್, ಶಾಸಕ ಎಲ್.ನಾಗೇಂದ್ರ, ಮೇಯರ್ ಪುಷ್ಪಲತಾ ಜಗನ್ನಾಥ್, ಮೈಸೂರು-ಚಾಮರಾಜ ನಗರ ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಮಹಾಲಿಂಗಂ, ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ವೆಂಕಟೇಶ್ ಪಾಪಣ್ಣ, ಮಾಜಿ ನಿರ್ದೇಶಕರಾದ ರಮೇಶ್, ರವಿ, ಮೈಸೂರು-ಮಂಡ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಎಂ.ಜೆ. ಸುರೇಶ್‍ಗೌಡ, ಪಾಲಿಕೆ ಸದಸ್ಯ ಶಿವಕು ಮಾರ್, ಪಾಲಿಕೆ ಮಾಜಿ ಸದಸ್ಯ ಪ್ರಶಾಂತ್‍ಗೌಡ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ವೈ.ಡಿ.ರಾಜಣ್ಣ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Translate »