ನಲಪಾಡ್ ಜಾಮೀನು ಭವಿಷ್ಯ ಇಂದು ನಿರ್ಧಾರ
ಮೈಸೂರು

ನಲಪಾಡ್ ಜಾಮೀನು ಭವಿಷ್ಯ ಇಂದು ನಿರ್ಧಾರ

May 30, 2018

ಬೆಂಗಳೂರು: ಉದ್ಯಮಿ ಪುತ್ರ ವಿದ್ವತ್ ಮೇಲೆ ಗಂಭೀರ ಹಲ್ಲೆ ಮಾಡಿ ಜೈಲು ಪಾಲಾಗಿರುವ ಶಾಸಕ ಎನ್.ಎ. ಹ್ಯಾರಿಸ್ ಪುತ್ರ ಮಹಮದ್ ನಲ ಪಾಡ್ ಪ್ರಕರಣದ ಜಾಮೀನು ಅರ್ಜಿಯ ತೀರ್ಪು ಪ್ರಕಟವನ್ನು ನ್ಯಾಯಾಲಯ ಬುಧವಾರಕ್ಕೆ ಕಾಯ್ದಿರಿಸಿದೆ. ಉದ್ಯಮಿ ಪುತ್ರ ವಿದ್ವತ್ ಮೇಲೆ ಹಲ್ಲೆ ಮಾಡಿ ಜೈಲು ಪಾಲಾಗಿರುವ ಶಾಸಕ ಎನ್.ಎ.ಹ್ಯಾರಿಸ್ ಪುತ್ರ ನಲಪಾಡ್ ಹ್ಯಾರಿಸ್‍ಗೆ ಜಾಮೀನು ಅರ್ಜಿಯ ಭವಿಷ್ಯ ನಾಳೆ ಪ್ರಕಟವಾಗ ಲಿದ್ದು, ಜಾಮೀನು ಅರ್ಜಿಯ ತೀರ್ಪನ್ನು 63ನೇ ಎಸಿಎಂಎಂ ನ್ಯಾಯಾಲಯ ನಾಳೆಗೆ ಕಾಯ್ದಿರಿಸಿದೆ. ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂಟರ್ ಹಾಗೂ ನಲಪಾಡ್ ಪರ ವಕೀಲರ ವಾದ ಆಲಿಸಿದ 63ನೇ ಎಸಿಎಂಎಂ ನ್ಯಾಯಾಲಯದ ಜಡ್ಜ್ ಪರಮೇಶ್ವರ್, ಜಾಮೀನು ಅರ್ಜಿ ತೀರ್ಪನ್ನು ನಾಳೆಗೆ ಕಾಯ್ದಿರಿಸಿದ್ದಾರೆ.

Translate »