ನಂದಿ ಗಿರಿಧಾಮ ಅಂತಾರಾಷ್ಟ್ರೀಯ ಪ್ರವಾಸಿ ತಾಣವಾಗಿ ಅಭಿವೃದ್ಧಿ
ಮೈಸೂರು

ನಂದಿ ಗಿರಿಧಾಮ ಅಂತಾರಾಷ್ಟ್ರೀಯ ಪ್ರವಾಸಿ ತಾಣವಾಗಿ ಅಭಿವೃದ್ಧಿ

February 26, 2021

ಬೆಂಗಳೂರು, ಫೆ.25(ಕೆಎಂಶಿ)- ನಂದಿ ಗಿರಿಧಾಮವನ್ನು ಅಂತಾರಾಷ್ಟ್ರೀಯ ಪ್ರವಾಸಿ ತಾಣವಾಗಿಸಿ ಸಮಗ್ರವಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಂದಿಬೆಟ್ಟ ಹಾಗೂ ಸುತ್ತಮುತ್ತ ಲಿನ ಪ್ರದೇಶ ಆಕರ್ಷಕವಾಗಿದೆ. ಇದಕ್ಕೆ ಐತಿಹಾಸಿಕ, ಧಾರ್ಮಿಕ ಪ್ರಾಮುಖ್ಯವಿದ್ದು, ವಿಶೇಷವಾದ ಸಸ್ಯ ಸಂಪತ್ತು ಇದೆ. ಇವೆಲ್ಲ ವನ್ನೂ ಗಮನಿಸಿ ಪ್ರವಾಸೋದ್ಯಮ ಕ್ಷೇತ್ರ ವಾಗಿಸಬಹುದು. ಇದಕ್ಕಾಗಿ ನಮ್ಮ ಸರ್ಕಾರ ಈಗಾಗಲೇ 10 ಕೋಟಿ ರೂ. ಅನುದಾನ ನೀಡಿದೆ ಎಂದು ಮಾಹಿತಿ ನೀಡಿದರು.

ಕಳೆದ 15 ವರ್ಷಗಳಿಂದ ರೋಪ್ ವೇ ಬೇಕು ಎಂದು ಜನರು ಬೇಡಿಕೆ ಇಡುತ್ತಿ ದ್ದಾರೆ. ಅಂತಾರಾಷ್ಟ್ರೀಯ ಕಂಪನಿ ಯೊಂದು ಇದನ್ನು ಮಾಡಲು ಮುಂದಾಗಿ ನಂತರ ಕಾರಣಾಂತರದಿಂದ ಯೋಜನೆ ಕೈ ಬಿಟ್ಟಿತ್ತು. ಈಗ ಆ ಕನಸು ನನಸಾಗಲಿದೆ. ಇಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲು 10 ಎಕರೆಗೂ ಹೆಚ್ಚು ಜಾಗವನ್ನು ಪಡೆಯಲು ಪ್ರಯತ್ನಿಸಲಾಗಿದೆ. ಈ ರೀತಿ ಮಾಸ್ಟರ್ ಪ್ಲಾನ್ ಮಾಡಿ ಅನುಷ್ಠಾನಗೊಳಿಸಲಾಗು ವುದು. ಮೂರ್ನಾಲ್ಕು ತಿಂಗಳಲ್ಲಿ ಕಾಮ ಗಾರಿ ಮುಗಿಯಬಹುದು ಎಂದರು.

ತಕ್ಷಣದಲ್ಲಿ ಟೆಂಡರ್ ಆಗಿ ಎಲ್ಲ ಬಗೆಯ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತದೆ. ನಂದಿಬೆಟ್ಟವನ್ನು ಅಂತಾರಾಷ್ಟ್ರೀಯ ಪ್ರವಾಸಿ ತಾಣವಾಗಿ ರೂಪುಗೊಳಿಸಬೇಕಿದೆ. ಈ ತಾಣವು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸುಮಾರು 30 ಕಿ.ಮೀ. ದೂರದಲ್ಲಿದೆ. ಬೆಂಗಳೂರು ನಗರ ದಿಂದ ಒಂದು ಗಂಟೆಯಲ್ಲಿ ಬರಬಹುದು. ಈ ಪ್ರದೇಶವನ್ನು ಅಭಿವೃದ್ಧಿಪಡಿಸಿ ಪ್ರವಾಸಿ ಗರನ್ನು ಆಕರ್ಷಿಸುವ ನಿಟ್ಟಿನಲ್ಲಿ ಕ್ರಮ ವಹಿಸಲಾಗಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೂಡ ಎಲ್ಲ ಸಹಕಾರ ನೀಡಲಾಗುವುದು ಎಂದು ಉತ್ತೇಜಿಸಿದ್ದಾರೆ ಎಂದರು.

ಇದರ ಜೊತೆಗೆ ಎಕೋ-ಟೂರಿಸಂ, ಸುತ್ತಮುತ್ತಲಿನ 5 ಬೆಟ್ಟಗಳಿಗೆ ಚಾರಣ ದಾರಿಗಳು, ಪುರಾತತ್ವ ಸ್ಮಾರಕಗಳು, ನೆಲ್ಲಿ ಕಾಯಿ ಬಸವಣ್ಣ ಮತ್ತು ಮಂಟಪಗಳು ಸಂರಕ್ಷಣೆ, ಸುಂದರೀಕರಣ ಸೇರಿದಂತೆ ವಿಶ್ವದರ್ಜೆಯ ಪ್ರವಾಸಿ ಸೌಲಭ್ಯಗಳನ್ನು ಕಲ್ಪಿಸ ಲಾಗುವುದು. ಮುಖ್ಯಮಂತ್ರಿಗಳು ಮಂಡಿ ಸಲಿರುವ ಆಯವ್ಯಯದಲ್ಲಿ ಪ್ರವಾಸೋದ್ಯಮ ಕ್ಷೇತ್ರಕ್ಕೆ ವಿಶೇಷ ಒತ್ತು ನೀಡಲಿದ್ದಾರೆ. ರಾಜ್ಯ ದಲ್ಲಿ ವಿಶಿಷ್ಟವಾದ ಪ್ರವಾಸಿ ತಾಣಗಳಿವೆ ಎಂದರು. ನಂದಿಬೆಟ್ಟದಲ್ಲಿ ಪ್ಲಾಸ್ಟಿಕ್ ವಸ್ತು ಗಳ ಬಳಕೆ ಸಂಪೂರ್ಣ ನಿಷೇಧಿಸಲು ತೀರ್ಮಾನಿಸಲಾಗಿದೆ. ಯಾವುದೇ ರೀತಿಯ ಪ್ಲಾಸ್ಟಿಕ್ ಒಳಗೆ ತೆಗೆದುಕೊಂಡು ಹೋಗಲು ಅವಕಾಶ ನೀಡದಿರಲು ನಿರ್ಧರಿಸಲಾಗಿದೆ ಎಂದು ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

 

Translate »