ಎಲ್ಲಾ ಪಕ್ಷದ ಅಭ್ಯರ್ಥಿಗಳಿಗೂ ಶುಭ ಕೋರಿದ ಮೋದಿ
ಮೈಸೂರು

ಎಲ್ಲಾ ಪಕ್ಷದ ಅಭ್ಯರ್ಥಿಗಳಿಗೂ ಶುಭ ಕೋರಿದ ಮೋದಿ

March 11, 2019

ನವದೆಹಲಿ: ಕೇಂದ್ರ ಚುನಾವಣಾ ಆಯೋಗವು 17ನೇ ಲೋಕಸಭಾ ಚುನಾವಣೆಗೆ ದಿನಾಂಕ ಘೋಷಿಸುತ್ತಿದ್ದಂತೆಯೇ ಪ್ರಧಾನಿ ನರೇಂದ್ರ ಮೋದಿಯವರು ಟ್ವೀಟ್ ಮಾಡಿ ಎಲ್ಲಾ ಪಕ್ಷಗಳ ಅಭ್ಯರ್ಥಿಗಳಿಗೂ ಶುಭ ಕೋರಿದ್ದಾರೆ.

ಚುನಾವಣಾ ದಿನಾಂಕ ಘೋಷಣೆಯಾಗುತ್ತಿದ್ದಂತೆಯೇ 9 ಬಾರಿ ಟ್ವೀಟ್ ಮಾಡಿರುವ ಮೋದಿ, ಪ್ರಜಾಪ್ರಭುತ್ವದ ಹಬ್ಬ ಚುನಾವಣೆ ಬಂದಿದೆ. 2019ರ ಲೋಕಸಭಾ ಚುನಾವಣೆ ಯಲ್ಲಿ ಮತದಾರರು ಸಕ್ರಿಯವಾಗಿ ಪಾಲ್ಗೊಳ್ಳುವಂತೆ ನಾನು ಒತ್ತಾಯಿಸುತ್ತೇನೆ. ಈ ಚುನಾವಣೆ ಐತಿಹಾಸಿಕ ಬದಲಾವ ಣೆಗೆ ಸಾಕ್ಷಿಯಾಗಲಿದೆ ಎಂದು ಭಾವಿಸುತ್ತೇನೆ. ಮೊದಲ ಬಾರಿಗೆ ಮತ ಚಲಾಯಿಸುವವರು ದಾಖಲೆ ಪ್ರಮಾಣದಲ್ಲಿ ಮತ ಚಲಾಯಿಸಿ ಎಂದು ಅವರು ಮನವಿ ಮಾಡಿದ್ದಾರೆ. ಚುನಾವಣಾ ಆಯೋಗ ಮತ್ತು ಸಿಬ್ಬಂದಿ ಹಾಗೂ ಭದ್ರತಾ ಸಿಬ್ಬಂದಿ ಚುನಾವಣೆಯನ್ನು ಸರಾಗವಾಗಿ ನಡೆಸುವಂತೆ ಶುಭವಾಗಲಿ. ಹಲವಾರು ವರ್ಷಗಳಿಂದ ಚುನಾವಣಾ ಆಯೋಗ ವ್ಯವಸ್ಥಿತವಾಗಿ ಚುನಾವಣೆಗಳನ್ನು ನಡೆಸುತ್ತಾ ಬಂದಿರುವುದು ಭಾರತ ಹೆಮ್ಮೆ ಪಡುವಂತಾಗಿದೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

Translate »