ಮೋದಿ ಮತ್ತೆ ಪ್ರಧಾನಿಯಾಗ್ತಾರೆ: ಮಾಜಿ ಸಿಎಂ ಎಸ್.ಎಂ.ಕೃಷ್ಣ ಭವಿಷ್ಯ
ಮೈಸೂರು

ಮೋದಿ ಮತ್ತೆ ಪ್ರಧಾನಿಯಾಗ್ತಾರೆ: ಮಾಜಿ ಸಿಎಂ ಎಸ್.ಎಂ.ಕೃಷ್ಣ ಭವಿಷ್ಯ

March 12, 2019

ಬೆಂಗಳೂರು: ಪ್ರಧಾನಿ ಮೋದಿ ಮತ್ತೆ ಪ್ರಧಾನಿ ಆಗ್ತಾರೆ. ಇದು ಮಾಜಿ ಸಿಎಂ ಎಸ್.ಎಂ.ಕೃಷ್ಣ ವಿಶ್ವಾಸ. ಲೋಕಸಭಾ ಚುನಾವಣಾ ಪ್ರಚಾರಕ್ಕೆ ಆಗಮಿಸ ಬೇಕೆಂದು ಬಿಜೆಪಿ ಮುಖಂಡ ಆರ್.ಅಶೋಕ್ ಅವರು ಮಾಜಿ ಕೇಂದ್ರ ಸಚಿವ, ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರಲ್ಲಿ ವಿನಂತಿಸಿಕೊಂಡಿದ್ದು, ಅದಕ್ಕೆ ಸಮ್ಮತಿಸಿದ್ದಾರೆ.

ಸೋಮವಾರ ಆರ್.ಅಶೋಕ್ ಅವರು ಎಸ್.ಎಂ. ಕೃಷ್ಣ ಅವರ ನಿವಾಸಕ್ಕೆ ತೆರಳಿ ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ ಹಾಗೂ ಮಂಡ್ಯ, ತುಮ ಕೂರು, ಮೈಸೂರು ಲೋಕಸಭಾ ಕ್ಷೇತ್ರಗಳಲ್ಲಿ ಚುನಾವಣಾ ಪ್ರಚಾರದಲ್ಲಿ ಪಕ್ಷದ ಪರ ಪಾಲ್ಗೊಳ್ಳಬೇಕೆಂದು ಮನವಿ ಮಾಡಿಕೊಂಡರು. ಮಾತುಕತೆ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಎಸ್.ಎಂ.ಕೃಷ್ಣ, ನಮ್ಮ ಸಂಸದರು ಬೆಂಗ ಳೂರಿಗೆ ನೀಡಿರುವ ಕೊಡುಗೆಗಳನ್ನು ಜನ ಮರೆಯು ವುದಿಲ್ಲ. ಯಾರು ಸ್ಪರ್ಧಿಸುತ್ತಾರೆ ಎಂಬುದು ಮುಖ್ಯವಲ್ಲ. ಸೈದ್ಧಾಂತಿಕ ನೆಲೆಯ ಮೇಲೆ ತುಲನೆ ಮಾಡಿ ಜನ ಬೆಂಬಲಿ ಸುತ್ತಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದಲ್ಲಿ ದೇಶ ಸಾಕಷ್ಟು ಬದಲಾವಣೆ ಕಂಡಿದೆ. ಹಲವಾರು ಕ್ಷೇತ್ರಗಳಲ್ಲಿ ಸಾಕಷ್ಟು ಸಾಧಿಸಲಾಗಿದೆ. ಇವೆಲ್ಲವನ್ನು ಗಮನದಲ್ಲಿಟ್ಟು ಕೊಂಡು ಪ್ರಜ್ಞಾವಂತ ಮತದಾರರು ಬೆಂಬಲಿಸುವ ವಿಶ್ವಾಸವಿದೆ. ಮತ್ತೆ ಮೋದಿ ಪ್ರಧಾನಿಯಾಗುತ್ತಾರೆ ಎಂಬ ನಂಬಿಕೆ ನನಗಿದೆ. ನಾನು ಮುಖ್ಯಮಂತ್ರಿಯಾಗಿದ್ದಾಗ ಬೆಂಗಳೂರಿಗೆ ಕೊಡುಗೆ ಏನು ನೀಡಿದ್ದೇನೆ ಎಂದು ಯಾರೂ ಮರೆಯುವುದಿಲ್ಲ. ನಮ್ಮ ಪಕ್ಷದ ಅಭ್ಯರ್ಥಿಗಳ ಪರವಾಗಿ ನಾನು ಪ್ರಚಾರ ನಡೆಸುತ್ತೇನೆ ಎಂದರು. ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಮಾಜಿ ಪ್ರಧಾನಿ
ದೇವೇಗೌಡರು, ಸ್ಪರ್ಧಿಸುವ ಸಂಬಂಧ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಚುನಾವಣೆಯಲ್ಲಿ ವ್ಯಕ್ತಿಗಿಂತ ಸಿದ್ಧಾಂತಗಳನ್ನು ನೋಡಿ ಜನ ಮತ ಹಾಕಲಿದ್ದಾರೆ.

ಒಕ್ಕಲಿಗರ ಪ್ರಾಬಲ್ಯವಿರುವ ಮಂಡ್ಯ, ಮೈಸೂರು, ತುಮಕೂರು ಲೋಕಸಭಾ ಕ್ಷೇತ್ರಗಳಲ್ಲಿ ಎಸ್.ಎಂ.ಕೃಷ್ಣ ಅವರನ್ನು ಚುನಾವಣಾ ಪ್ರಚಾರದಲ್ಲಿ ತೊಡಗಿಸಿಕೊಳ್ಳುವಂತೆ ಬಿಜೆಪಿ ತಂತ್ರ ರೂಪಿಸಿದ್ದು, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ದೇವೇಗೌಡರು ಸ್ಪರ್ಧಿಸುತ್ತಾರೆ ಎಂಬ ಊಹಾಪೆÇೀಹದ ಹಿನ್ನೆಲೆಯಲ್ಲಿ ಬಿಜೆಪಿ ಸೆಡ್ಡು ಹೊಡೆಯಲು ಮುಂದಾಗಿದೆ ಎಂದು ವರದಿ ವಿವರಿಸಿದೆ.

Translate »