ರಾಷ್ಟ್ರ ಪ್ರಶಸ್ತಿ ಅರ್ಜಿ ಆಹ್ವಾನ
ಮೈಸೂರು

ರಾಷ್ಟ್ರ ಪ್ರಶಸ್ತಿ ಅರ್ಜಿ ಆಹ್ವಾನ

June 12, 2018

ಮೈಸೂರು: ಭಾರತ ಸರ್ಕಾರವು ಮಕ್ಕಳ ಅಭಿವೃದ್ಧಿ, ಮಕ್ಕಳ ರಕ್ಷಣೆ ಹಾಗೂ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ 10 ವರ್ಷಕ್ಕಿಂತ ಹೆಚ್ಚಿನ ಸೇವೆಯನ್ನು ಸಲ್ಲಿಸಿ ರುವಂತಹ ವ್ಯಕ್ತಿಗಳನ್ನು ಗುರುತಿಸಿ 2018ನೇ ಸಾಲಿಗೆ ರಾಜೀವ್‍ಗಾಂಧಿ ಮಾನವ ಸೇವಾ ಪ್ರಶಸ್ತಿಯನ್ನು 3 ವ್ಯಕ್ತಿಗಳಿಗೆ ನೀಡಿ ಗೌರವಿಸಲು ಅರ್ಜಿ ಆಹ್ವಾನಿಸಿದೆ. ಅದೇ ರೀತಿಯಲ್ಲಿ 2018ನೇ ಸಾಲಿಗೆ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಹಲವು ವರ್ಷ ಉತ್ತಮ ಸೇವೆ ಸಲ್ಲಿಸಿದ 3 ವ್ಯಕ್ತಿಗಳು ಹಾಗೂ 5 ಸಂಸ್ಥೆಗಳ ಸೇವೆಯನ್ನು ಗುರುತಿಸಿ ಪ್ರಶಸ್ತಿ ನೀಡುವ ಯೋಜನೆಯನ್ನು ಕೇಂದ್ರ ಸರ್ಕಾರವು ಜಾರಿಗೆ ತಂದಿರುತ್ತದೆ. ರಾಜೀವ್ ಗಾಂಧಿ ಮಾನವ ಸೇವಾ ಪ್ರಶಸ್ತಿಗೆ ಅರ್ಜಿ ಸಲ್ಲಿಸುವ ವ್ಯಕ್ತಿಗಳು 10 ವರ್ಷಗಳಿಗಿಂ ತಲೂ ಮೇಲ್ಪಟ್ಟು ಮಕ್ಕಳ ಅಭಿವೃದ್ಧಿ, ಮಕ್ಕಳ ರಕ್ಷಣೆ ಹಾಗೂ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ನಿರಂತರವಾಗಿ ಉತ್ತಮ ಸೇವೆಯನ್ನು ಸಲ್ಲಿಸಿರಬೇಕು.

ಪ್ರಶಸ್ತಿಯು ರೂ. 1 ಲಕ್ಷ ನಗದು ಬಹುಮಾನ, ಬೆಳ್ಳಿ ಫಲಕ ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಂಡಿರುತ್ತದೆ. ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ವ್ಯಕ್ತಿ ಹಾಗೂ ಸಂಸ್ಥೆಗಳಿಗೆ ನೀಡುವ ರಾಷ್ಟ್ರ ಪ್ರಶಸ್ತಿಗಾಗಿ ಅರ್ಜಿ ಸಲ್ಲಿಸುವ ವ್ಯಕ್ತಿಗಳು ಹಾಗೂ ಸಂಸ್ಥೆಗಳು ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಹಲವು ವರ್ಷ ಉತ್ತಮ ಸೇವೆ ಸಲ್ಲಿಸಿರಬೇಕು ವ್ಯಕ್ತಿಗೆ ನೀಡುವ ಪ್ರಶಸ್ತಿಯು ರೂ. 1 ಲಕ್ಷ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಂಡಿರುತ್ತದೆ. ಪ್ರತಿ ಸಂಸ್ಥೆಗೆ ನೀಡುವ ಪ್ರಶಸ್ತಿಯು ರೂ. 3 ಲಕ್ಷ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಂಡಿರುತ್ತದೆ. ನಿಗದಿತ ಅರ್ಜಿ ನಮೂನೆಗಳನ್ನು ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪಿ.ಎಸ್-1, ಹೈಟೆನ್ಷನ್ ಲೈನ್ ರಸ್ತೆ, ಕೃಷ್ಣ ದೇವರಾಯ ಸರ್ಕಲ್, ವಿಜಯನಗರ, 2ನೇ ಹಂತ, ಮೈಸೂರು ಇವರಿಂದ ಪಡೆದು ಕೊಂಡು ಆಂಗ್ಲ ಭಾಷೆಯಲ್ಲಿ ಭರ್ತಿ ಮಾಡಿದ ಅರ್ಜಿಯನ್ನು ಜೂ.20ರೊಳಗೆ ಸಲ್ಲಿಸು ವುದು. ಮಾಹಿತಿಗೆ ದೂ.ಸಂಖ್ಯೆ:2498031, 2495432 ಅನ್ನು ಸಂಪರ್ಕಿಸುವುದು.

Translate »