ಕುಂಬಾರಕೊಪ್ಪಲಿನಲ್ಲಿ ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ, ಜಾಥಾ
ಮೈಸೂರು

ಕುಂಬಾರಕೊಪ್ಪಲಿನಲ್ಲಿ ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ, ಜಾಥಾ

May 26, 2018

ಮೈಸೂರು: ಸೊಳ್ಳೆ ಕಡಿತದಿಂದ ರಕ್ಷಿಸಿಕೊಳ್ಳಿ, ಡೆಂಗ್ಯೂ, ಚಿಕುನ್‍ಗುನ್ಯಾ ಜ್ವರದಿಂದ ದೂರವಿರಿ. ಡೆಂಗ್ಯೂ ಜ್ವರಕ್ಕೆ ನಿರ್ಧಿಷ್ಟ ಚಿಕಿತ್ಸೆ ಇಲ್ಲ ಎಂಬಿತ್ಯಾದಿ ಘೋಷ ವಾಕ್ಯಗಳಿರುವ ಭಿತ್ತಿಪತ್ರಗಳನ್ನು ಹಿಡಿದಿದ್ದ ಆರೋಗ್ಯ ಇಲಾಖೆ ಕಾರ್ಯಕರ್ತರು ಶುಕ್ರವಾರ ಮೈಸೂರಿನ ಕುಂಬಾರಕೊಪ್ಪಲಿನ ವಿವಿಧ ಬೀದಿಗಳಲ್ಲಿ ಜಾಥಾ ನಡೆಸಿದರು.

ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ ಅಂಗವಾಗಿ ಮೈಸೂರು ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಕಚೇರಿಯಿಂದ ಆಯೋಜಿಸಲಾಗಿದ್ದ ಜಾಥಾಗೆ ಕುಂಬಾರಕೊಪ್ಪಲು ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಎದುರು ಮಾಜಿ ಎಂಎಲ್‍ಸಿ ಡಿ.ಮಾದೇಗೌಡ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಚಿದಂಬರ, ಡೆಂಗ್ಯೂ ಮತ್ತು ಚಿಕುನ್‍ಗುನ್ಯಾ ಜ್ವರದ ಬಗ್ಗೆ ಉದಾಸೀನ ಬೇಡ. ಇದರ ನಿಯಂತ್ರಣದಲ್ಲಿ ಆರೋಗ್ಯ ಇಲಾಖೆಯೊಂದಿಗೆ ಜನರ ಪಾತ್ರವೂ ಹೆಚ್ಚಾಗಿದೆ. ಎಲ್ಲರೂ ಒಟ್ಟಾಗಿ ಕೈಜೋಡಿಸಿದರೆ ಡೆಂಗ್ಯೂ, ಚಿಕೂನ್‍ಗುನ್ಯಾ ಹರಡದಂತೆ ನಿಯಂತ್ರಿಸಬಹುದು ಎಂದರು.

ಕಾರ್ಪೊರೇಟರ್ ಕೆ.ಟಿ.ಚೆಲುವೇಗೌಡ, ಶಿವಮಾದು, ಪ್ರಭಾರ ಡಿಹೆಚ್‍ಓ ಡಾ.ಪಶುಪತಿ, ತಾಲೂಕು ಆರೋಗ್ಯಾಧಿಕಾರಿ ರವಿಕುಮಾರ್, ಕುಟುಂಬ ಕಲ್ಯಾಣಾಧಿಕಾರಿ ಸಿರಾಜ್ ಅಹಮದ್, ಕಾಲರಾ ಅಧಿಕಾರಿ ಸೋಮಶೇಖರ್, ಆರೋಗ್ಯ ನಿರೀಕ್ಷಕ ಮಧುಶಂಕರ್, ಜಿಲ್ಲಾ ಆರೋಗ್ಯ ಮೇಲ್ವಿಚಾರಕ ಭೀಮಣ್ಣ, ಹಿರಿಯ ಆರೋಗ್ಯ ನಿರೀಕ್ಷಕ ರಾಜೇಂದ್ರಪ್ಪ ಮತ್ತು ಇತರೆ ಆರೋಗ್ಯ ಸಿಬ್ಬಂದಿ ಭಾಗವಹಿಸಿದ್ದರು.

Translate »