ನ್ಯಾಷನಲ್ ಹೆರಾಲ್ಡ್ ಪ್ರಕರಣ: ತನಿಖೆ ನೆಪದಲ್ಲಿ ರಾಹುಲ್ ಗಾಂಧಿಗೆ ಕಿರುಕುಳ ಖಂಡಿಸಿ ಮೈಸೂರಲ್ಲಿ ಕಾಂಗ್ರೆಸ್ ಆಕ್ರೋಶ
ಮೈಸೂರು

ನ್ಯಾಷನಲ್ ಹೆರಾಲ್ಡ್ ಪ್ರಕರಣ: ತನಿಖೆ ನೆಪದಲ್ಲಿ ರಾಹುಲ್ ಗಾಂಧಿಗೆ ಕಿರುಕುಳ ಖಂಡಿಸಿ ಮೈಸೂರಲ್ಲಿ ಕಾಂಗ್ರೆಸ್ ಆಕ್ರೋಶ

June 18, 2022

ಮೆರವಣ ಗೆ ವಿಷಯದಲ್ಲಿ ಪೊಲೀಸರೊಂದಿಗೆ ಜಟಾಪಟಿ

ಮೂವರಿಗೆ ಗಾಯ

ಪೊಲೀಸರು ಪ್ರತಿಭಟನಾನಿರತರನ್ನು ಬಂಧಿಸುವುದಕ್ಕೆ ಮುಂದಾದಾಗ ಪರಿಸ್ಪರ ತಳ್ಳಾಟ ನೂಕಾಟ ನಡೆಯಿತು. ಈ ವೇಳೆ ೫-೬ ಮಂದಿ ನೆಲಕ್ಕೆ ಬಿದ್ದರು. ಅದರಲ್ಲಿ ಓರ್ವ ಮಹಿಳೆ ಸೇರಿ ದಂತೆ ಮೂವರಿಗೆ ತಲೆಗೆ ಗಾಯ ವಾಯಿತು. ಬಳಿಕ ಅವರು ಸ್ಥಳೀಯ ಕ್ಲಿನಿಕ್‌ಗೆ ತೆರಳಿ ಚಿಕಿತ್ಸೆ ಪಡೆದರು.

ಪ್ರತಿಭಟನಾಕಾರರ ವಶಕ್ಕೆ ಪಡೆಯಲು ಪೊಲೀಸರ ಹರಸಾಹಸ.

ಮೈಸೂರು,ಜೂ.೧೭(ಎಂಟಿವೈ)- ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬAಧಿಸಿ ದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಪದೇ ಪದೆ ಜಾರಿ ನಿರ್ದೇಶನಾಲಯ (ಇಡಿ) ವಿಚಾರಣೆ ನೆಪದಲ್ಲಿ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿ, ಕಾಂಗ್ರೆಸ್ ಕಾರ್ಯಕರ್ತರು ಇಂದು ಪ್ರತಿಭಟನಾ ಮೆರವಣ ಗೆ ನಡೆಸಲು ಮುಂದಾದಾಗ ಪೊಲೀಸರು ಹಾಗೂ ಪ್ರತಿಭಟನಾನಿರತ ಕಾಂಗ್ರೆಸ್ ಕಾರ್ಯ ಕರ್ತರ ನಡುವೆ ಮಾತಿನ ಚಕಮಕಿ ಉಂಟಾದ ಹಿನ್ನೆಲೆಯಲ್ಲಿ ಕೆಲಕಾಲ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು.

ಪೊಲೀಸರ ತಡೆಗೋಡೆ ಭೇದಿಸಿ ಮೆರವಣ ಗೆ ನಡೆಸಲು ಮುಂದಾದ ಹಿನ್ನೆಲೆ ಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವ ನಾರಾಯಣ್, ಮಾಜಿ ಸಚಿವ ಡಾ.ಹೆಚ್.ಸಿ. ಮಹದೇವಪ್ಪ, ಶಾಸಕರಾದ ಡಾ.ಯತೀಂದ್ರ ಸಿದ್ದರಾಮಯ್ಯ, ತನ್ವೀರ್ ಸೇಠ್, ಅನಿಲ್ ಚಿಕ್ಕಮಾದು, ವಿಧಾನ ಪರಿಷತ್ ಸದಸ್ಯ ಡಾ.ಡಿ.ತಿಮ್ಮಯ್ಯ, ಮಾಜಿ ಶಾಸಕರಾದ ಎಂ.ಕೆ.ಸೋಮಶೇಖರ್, ವಾಸು, ಕಳಲೆ ಕೇಶವಮೂರ್ತಿ, ಆರ್.ಧರ್ಮಸೇನಾ, ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಡಾ.ಪುಷ್ಪಾ ಅಮರನಾಥ್, ಕಾಂಗ್ರೆಸ್ ನಗರಾಧ್ಯಕ್ಷ ಆರ್. ಮೂರ್ತಿ, ಗ್ರಾಮಾಂತರ ಅಧ್ಯಕ್ಷ ಡಾ.ಬಿ.ಜೆ. ವಿಜಯ್ ಕುಮಾರ್ ಸೇರಿದಂತೆ ೧೦೦ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಿ, ಚಾಮುಂಡಿ ಬೆಟ್ಟದ ತಪ್ಪಲಿನ ಸಿಎಆರ್ ಮೈದಾನಕ್ಕೆ ಕರೆದೊಯ್ದರು. ನಂತರ ಪರಿಸ್ಥಿತಿ ತಿಳಿಯಾಗಿ, ಉಳಿದವರು ವಾಪಸ್ಸಾದರು.

ಪುರಭವನದ ಆವರಣದಲ್ಲಿ ಧರಣ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಮೂರು ದಿನಗಳ ಕಾಲ ಇಡಿ ವಿಚಾರಣೆ ನಡೆಸುತ್ತಿರುವುದನ್ನು ಖಂಡಿಸಿ, ಮೈಸೂರು ನಗರ ಹಾಗೂ ಗ್ರಾಮಾಂತರ ಕಾಂಗ್ರೆಸ್ ಸಮಿತಿ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಕಾಂಗ್ರೆಸ್ ಕಾರ್ಯ ಕರ್ತರು ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ, ಆಕ್ರೋಶ ವ್ಯಕ್ತಪಡಿಸಿದರು.

ಇದೇ ವೇಳೆ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ್, ನ್ಯಾಷನಲ್ ಹೆರಾಲ್ಡ್ ಪತ್ರಿಕೆಯನ್ನು ಸ್ವಾತಂತ್ರö್ಯ ಸಂಗ್ರಾಮದ ಜನಜಾಗೃತಿಗೆ ೧೯೩೭ರಲ್ಲಿ ಜವಾಹರಲಾಲ್ ನೆಹರು, ಸರ್ದಾರ್ ವಲ್ಲಭಬಾಯಿ ಪಟೇಲ್ ಸೇರಿದಂತೆ ಹಲವರು ಸೇರಿ ಪ್ರಾರಂಭಿಸಿದರು. ಬ್ರಿಟಿಷರು ೧೯೪೫ರವರೆಗೆ ಪತ್ರಿಕೆಯನ್ನು ಬ್ಯಾನ್ ಮಾಡಿದ್ದರು. ಬಳಿಕ ಪತ್ರಿಕೆ ನಷ್ಟದ ಸುಳಿಗೆ ಸಿಲುಕಿತು. ಪತ್ರಿಕೆಯನ್ನು ನಡೆಸುವ ಸಲುವಾಗಿ ಅಖಿಲ ಭಾರತ ಕಾಂಗ್ರೆಸ್ ೯೦ ಕೋಟಿ ನೆರವು ನೀಡಿತು. ಇದರ ಲೆಕ್ಕವನ್ನು ಚುನಾವಣಾ ಆಯೋಗಕ್ಕೆ ನೀಡಿ ಕ್ಲೀನ್‌ಚಿಟ್ ಪಡೆಯಲಾಗಿದೆ. ಇಲ್ಲಿ ಯಾವುದೇ ಆಸ್ತಿಪಾಸ್ತಿ, ಹಣಕಾಸಿನ ಪರಭಾರೆ ಆಗಿಲ್ಲ. ಆದರೂ ಕೇಂದ್ರ ಸರ್ಕಾರ ದ್ವೇಷದ ರಾಜಕಾರಣದ ಮೂಲಕ ಕಿರುಕುಳ ನೀಡುತ್ತಿದೆ ಎಂದು ಕಿಡಿ ಕಾರಿದರು.
ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ವಿರೋಧಪಕ್ಷಗಳನ್ನು ದಮನ ಮಾಡುವ ಕೆಲಸ ಮಾಡುತ್ತಿದೆ. ಅಧಿಕಾರ ದುರ್ಬಳಕೆ ಮಾಡಿಕೊಂಡು, ಸರ್ಕಾರಿ ಸ್ವಾಯತ್ತ ಸಂಸ್ಥೆಗಳ ಮೂಲಕ ವಿರೋಧಿ ಗಳನ್ನು ಸದೆಬಡಿಯಲು ಯತ್ನಿಸುತ್ತಿದೆ. ಸರ್ಕಾರದ ಕೈಗೊಂಬೆ ಯಾಗಿರುವ ಇಡಿ ವಿಚಾರಣೆ ನೆಪದಲ್ಲಿ ರಾಹುಲ್ ಗಾಂಧಿ ಯವರಿಗೆ ಕಿರುಕುಳ ನೀಡುತ್ತಿದೆ. ಇದನ್ನು ರಾಷ್ಟçಪತಿಗಳ ಗಮನಕ್ಕೆ ತರಲಾಗುವುದು. ಇದೇ ರೀತಿ ಕಿರುಕುಳ ಮುಂದುವರಿಸಿ ದರೆ ಉಗ್ರ ಹೋರಾಟ ಮಾಡಲಾಗು ವುದು ಎಂದು ಎಚ್ಚರಿಸಿದರು.

ಮಾಜಿ ಸಚಿವ ಹೆಚ್.ಸಿ.ಮಹದೇವಪ್ಪ ಮಾತನಾಡಿ, ದೇಶದಲ್ಲಿ ಕಂಡರಿಯದ ರೀತಿಯಲ್ಲಿ ಸಂವಿಧಾನ ವಿರೋಧಿ ಚಟುವಟಿಕೆಗಳು ನಡೆಯುತ್ತಿವೆ. ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ರಾಜಕೀಯ ದಾಳ ಮಾಡಿಕೊಂಡು ಎದುರಾಳಿಗಳ ಧ್ವ್ವನಿ ಅಡಗಿಸುವ ಕೆಲಸ ಮಾಡುತ್ತಿದೆ. ತನಿಖಾ ಸಂಸ್ಥೆಗಳು ನಿಷ್ಪಕ್ಷಪಾತವಾಗಿ, ಸ್ವತಂತ್ರವಾಗಿ ಕೆಲಸ
ಮಾಡಲು ನಮ್ಮ ಯಾವುದೇ ಅಭ್ಯಂತರ ಇಲ್ಲ. ಪಕ್ಷ ಇದುವರೆಗೆ ನ್ಯಾಯ ಯುತ ತನಿಖೆಗೆ ಎಂದೂ ಅಡ್ಡ ಬಂದಿಲ್ಲ. ಆದರೆ, ಇಂದು ತನಿಖಾ ಸಂಸ್ಥೆಗಳು ಬಿಜೆಪಿಯ ಕೈಗೊಂಬೆಯಾಗಿ ಕೆಲಸ ಮಾಡು ತ್ತಿವೆ ಎಂದು ಆಕ್ರೋಶ ಹೊರಹಾಕಿದರು.

ಯಂಗ್ ಇಂಡಿಯಾ ೨೦೦೦ ಕೋಟಿ ಬೆಲೆಬಾಳುವ ಆಸ್ತಿಯನ್ನು ೫೦ ಲಕ್ಷಕ್ಕೆ ಕೊಂಡುಕೊAಡಿದೆ. ಇದರಲ್ಲಿ ಹಣದ ಅವ್ಯವಹಾರ ಆಗಿದೆ ಎಂಬುದು ಬಿಜೆಪಿ ಆರೋಪ. ಆದರೆ, ಪತ್ರಿಕೆಯನ್ನು ಕೊಂಡು ಕೊಂಡಾಗ ಹಣಕಾಸು ಲೇವಾದೇವಿ ಕಾಯಿದೆ ಅಸ್ತಿತ್ವದಲ್ಲಿ ಇರಲೇ ಇಲ್ಲ. ಅಲ್ಲದೆ ಇದು ಲಾಭದಾಯಕ ಸಂಸ್ಥೆಯಲ್ಲ. ಯಾರಿಗೂ ವರ್ಗಾವಣೆ ಮಾಡುವಂತಿಲ್ಲ. ಇದು ಬಿಜೆಪಿಗೆ ಗೊತ್ತಿದ್ದರೂ ಪದೇ ಪದೆ ಕಿರುಕುಳ ನೀಡುತ್ತಿದೆ. ಸರ್ವಾಧಿಕಾರಿ ಧೋರಣೆಯ ಮೂಲಕ ಕಾಂಗ್ರೆಸ್ ಸರ್ವನಾಶ ಮಾಡಲು ಹುನ್ನಾರ ನಡೆಸಿದೆ ಎಂದು ದೂರಿದರು.

ಮುತ್ತಿಗೆಗೆ ಯತ್ನ: ರಾಹುಲ್‌ಗಾಂಧಿ ವಿಚಾರಣೆ ನೆಪದಲ್ಲಿ ಅವರಿಗೆ ಕಿರುಕುಳ ಖಂಡಿಸಿ ದೇಶಾದ್ಯಂತ ಕಾಂಗ್ರೆಸ್ ವತಿಯಿಂದ ನಡೆಯುತ್ತಿರುವ ಪ್ರತಿಭಟನೆಯ ಅಂಗವಾಗಿ ಮೈಸೂರಲ್ಲೂ ಪ್ರತಿಭಟನೆ ನಡೆಸಿದ ಬಳಿಕ ಮೆರವಣ ಗೆ ಮೂಲಕ ಪೀಪಲ್ಸ್ ಪಾರ್ಕ್ ಬಳಿಯ ಆದಾಯ ತೆರಿಗೆ ಕಚೇರಿಗೆ ಮುತ್ತಿಗೆ ಹಾಕಲು ಕಾಂಗ್ರೆಸ್ ಕಾರ್ಯಕರ್ತರು ನಿರ್ಧ ರಿಸಿದ್ದರು. ಆದರೆ ಮೆರವಣ ಗೆ ನಡೆಸದಂತೆ ಪೊಲೀಸರು ಮನವಿ ಮಾಡಿದರು. ಆದರೂ ಪೊಲೀಸರ ತಡೆಗೋಡೆಯನ್ನು ಭೇದಿಸಿ ದೊಡ್ಡಗಡಿಯಾರದ ಬಳಿ ಆಗಮಿಸಿದ ಕಾಂಗ್ರೆಸ್ ಕಾರ್ಯಕರ್ತ ರಿಗೆ ಪೊಲೀಸರು ಮತ್ತೊಮ್ಮೆ ತಡೆಯೊಡ್ಡಿದರು. ಪ್ರತಿಭಟನೆ ಕೈಬಿಡುವಂತೆ ಮನವಿ ಮಾಡಿದರು. ಆದರೆ ಪ್ರತಿಭಟನಾನಿರತರು ದೊಡ್ಡಗಡಿಯಾರ ವೃತ್ತದಲ್ಲಿ ಪೊಲೀಸರ ನಡೆ ಖಂಡಿಸಿ ರಸ್ತೆಯಲ್ಲಿ ಧರಣ ಕುಳಿತರು. ಅಂತಿಮವಾಗಿ ಪೊಲೀಸರು ೧೦೦ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಿ, ಸಿಎಆರ್ ಮೈದಾನಕ್ಕೆ ಕರೆದೊಯ್ದು ಮಧ್ಯಾಹ್ನದ ನಂತರ ಬಿಡುಗಡೆ ಮಾಡಿದರು.ಪ್ರತಿಭಟನಾಕಾರರನ್ನು ವಶಕ್ಕೆ ಪಡೆದ ಪೊಲೀಸರು.

Translate »