ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾ, ರಾಹುಲ್‌ಗೆ ಇಡಿ ನೋಟಿಸ್ ಖಂಡಿಸಿ ಕಾಂಗ್ರೆಸ್ ಭಾರೀ ಪ್ರತಿಭಟನೆ

ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವ
ಬೆಂಗಳೂರು, ಜೂ.೧೩(ಕೆಎಂಶಿ)- ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರಿಗೆ ಇಡಿ ನೋಟಿಸ್ ಜಾರಿ ಮಾಡಿರುವುದನ್ನು ಖಂಡಿಸಿ ಪ್ರದೇಶ ಕಾಂಗ್ರೆಸ್ ಇಂದು ನಗರದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿತ್ತು.ನಗರದ ಕೆಂಗಲ್ ಹನುಮಂತಯ್ಯ ರಸ್ತೆ ಯಲ್ಲಿರುವ ಇಡಿ ಕಚೇರಿಗೆ ಸಾವಿರಾರು ಕಾರ್ಯಕರ್ತರು ಮುತ್ತಿಗೆ ಹಾಕಿ ತಮ್ಮ ಪ್ರತಿಭಟನೆ ವ್ಯಕ್ತಪಡಿಸಿದರು. ವಿಧಾನಸಭೆ ಯ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿ ದಂತೆ ಹಲವು ಮುಖಂಡರು ಪ್ರತಿಭಟನೆ ಯಲ್ಲಿ ಭಾಗವಹಿಸಿ, ಕೇಂದ್ರ ಸರ್ಕಾರ ತಮ್ಮ ವಿರೋಧಿಗಳನ್ನು ಮಣ ಸಲು ಇಡಿ ಮತ್ತು ಸಿಬಿಐ ಅನ್ನು ದುರ್ಬಳಕೆ ಮಾಡಿ ಕೊಳ್ಳುತ್ತಿದೆ ಎಂದು ಆರೋಪ ಮಾಡಿದರು.

ಸಭೆಯಲ್ಲಿ ಭಾಗವಹಿಸಿದ್ದ ಸಿದ್ದರಾಮಯ್ಯ ಹಾಗೂ ಶಿವಕುಮಾರ್ ಕಾರ್ಯಕರ್ತರನ್ನು ದ್ದೇಶಿಸಿ ಮಾತನಾಡಿ, ನರೇಂದ್ರ ಮೋದಿ ಅವರು ಪ್ರಧಾನಿಯಾದ ಮೇಲೆ ಸರ್ಕಾರದ ಎಲ್ಲ ಸ್ವತಂತ್ರ ಸಂಸ್ಥೆಗಳನ್ನು ಅವರ ಕೈಗೊಂಬೆಗಳಾಗಿ ಮಾಡಿಕೊಳ್ಳುತ್ತಿದ್ದಾರೆ.

ಅದು ರಿಸರ್ವ್ ಬ್ಯಾಂಕ್, ಸಿಎಜಿ, ಸಿಬಿಐ, ಇಡಿ, ಎನ್‌ಎಸ್‌ಎಸ್‌ಒ ಇವು ಯಾವುದೇ ಇರಬಹುದು. ಈ ಎಲ್ಲಾ ಸಂಸ್ಥೆಗಳು ತಮ್ಮ ತಾಳಕ್ಕೆ ತಕ್ಕಂತೆ ಕುಣ ಯುವಂತೆ ಮಾಡಿ ಕೊಂಡಿದ್ದಾರೆ. ಇ.ಡಿ ಹಾಗೂ ಆದಾಯ ತೆರಿಗೆ ಇಲಾಖೆಗಳನ್ನು ವಿರೋಧ ಪಕ್ಷದವರ ಮೇಲೆ ಛೂ ಬಿಡುವ ಕೆಲಸ ಮಾಡುತ್ತಿದ್ದಾರೆ. ಸ್ವತಂತ್ರ ಭಾರತದ ಇತಿಹಾಸದಲ್ಲಿ ಯಾವತ್ತೂ ಕೂಡ ಸ್ವಾಯತ್ತ ಸಂಸ್ಥೆಗಳನ್ನು ಈ ರೀತಿ ದುರುಪಯೋಗ ಮಾಡಿಕೊಂಡ ಉದಾಹರಣೆಗಳಿಲ್ಲ.
ಇಡಿ, ಸಿಬಿಐ, ಐ.ಟಿ ಈ ಎಲ್ಲಾ ಸಂಸ್ಥೆ ಗಳು ಮೋದಿ ಅವರಿಗೆ ವಿರುದ್ಧವಾಗಿ ರುವವರ ಮೇಲೆ ದಾಳಿ ಮಾಡಬೇಕು, ಅವರ ಮೇಲೆ ಮೊಕದ್ದಮೆಗಳನ್ನು ಹಾಕಬೇಕಿದೆ. ಇಂದು ದೇಶದ ಪ್ರಗತಿಯ ಅಂಕಿ ಅಂಶಗಳು ಯಾರಿಗೂ ಸಿಗಬಾ ರದು ಎಂದು ಎನ್‌ಎಸ್‌ಎಸ್‌ಒ ಅನ್ನು ನಿಷ್ಕಿç ಯಗೊಳಿಸಿದ್ದಾರೆ ಎಂದು ದೂರಿದರು.

ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿ ಅವರ ಮೇಲೆ ಇ.ಡಿ ಯನ್ನು ಛೂ ಬಿಟ್ಟು, ಅದರ ಮೂಲಕ ಸಮನ್ಸ್ ನೀಡಿ, ಸುಳ್ಳು ಮೊಕದ್ದಮೆಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಅವರನ್ನು ಹೆದರಿಸುವ ಕೆಲಸವನ್ನು ಮೋದಿ ಅವರು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ದೇಶಕ್ಕೆ ಸ್ವಾತಂತ್ರö್ಯ ತಂದು ಕೊಡಲು ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಜೊತೆ ಯಾಗಿ ಕಾಂಗ್ರೆಸ್‌ನ ಅನೇಕ ನಾಯಕರು ತ್ಯಾಗ, ಬಲಿದಾನ ಮಾಡಿದ್ದಾರೆ. ಬಿಜೆಪಿಗೆ ತ್ಯಾಗದ ಅರ್ಥ ಗೊತ್ತಾ? ಬಿಜೆಪಿ, ಆರ್‌ಎಸ್ ಎಸ್ ನೀವು ಎಂದಾದರೂ ತ್ಯಾಗ ಮಾಡಿದ್ದೀರಾ? ನೀವು ನಮಗೆ ದೇಶಭಕ್ತಿ ಹೇಳಿಕೊಡಲು ಬರ್ತೀರಾ? ನಿಮಗೆ ನಾಚಿಕೆಯಾಗಲ್ವ ಎಂದು ಪ್ರಶ್ನಿಸಿದರು.

ಇಂದು ಸಾಂಕೇತಿಕವಾಗಿ ಮುಷ್ಕರ ಆರಂಭವಾಗಿದೆ. ಕಾಂಗ್ರೆಸ್‌ನ ಕೋಟ್ಯಾಂ ತರ ಕಾರ್ಯಕರ್ತರು ಬೀದಿಗೆ ಇಳಿದು ಸರ್ಕಾರ ನಡೆಯದಂತೆ ಹೋರಾಟ ಮಾಡುತ್ತಾರೆ, ಎಲ್ಲ ಸರ್ಕಾರಿ ಕಚೇರಿ ಗಳನ್ನು ಬಂದ್ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರು ಒಬ್ಬಂಟಿಗ ರಲ್ಲ, ಅವರ ಜೊತೆ ಪಕ್ಷದ ಕೋಟ್ಯಾಂತರ ಕಾರ್ಯಕರ್ತರು ಇದ್ದಾರೆ. ಎಲ್ಲರ ಹಕ್ಕುಗ ಳನ್ನು ಕಿತ್ತುಕೊಳ್ಳಲು ಅಥವಾ ಹತ್ತಿಕ್ಕಲು ನಿಮ್ಮಿಂದ ಸಾಧ್ಯವಿಲ್ಲ. ನರೇಂದ್ರ ಮೋದಿ ಅವರೇ, ನಿಮ್ಮ ಸಂವಿಧಾನ ವಿರೋಧಿ ನಡೆಯನ್ನು ಬಿಡಿ. ೨೦೧೫ರಲ್ಲಿ ಮುಕ್ತಾಯ ವಾದ ಕೇಸಿಗೆ ಮರು ಚಾಲನೆ ನೀಡಿದ ನಿಮ್ಮ ದ್ವೇಷ ರಾಜಕಾರಣಕ್ಕೆ ನಮ್ಮ ಧಿಕ್ಕಾರವಿದೆ. ನಾವೆಲ್ಲ ಕಲ್ಲು ಬಂಡೆಗಳAತೆ ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿ ಅವರ ಜೊತೆ ನಿಲ್ಲೋಣ. ಈ ಅನ್ಯಾಯವನ್ನು ಖಂಡಿಸೋಣ ಎಂದು ಗುಡುಗಿದರು.