ಜು.13ರಂದು ಮೈಸೂರು ನ್ಯಾಯಾಲಯದಲ್ಲಿ ರಾಷ್ಟ್ರೀಯ ಲೋಕ್ ಅದಾಲತ್

ಮೈಸೂರು: ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಗಂಭೀರ ಸ್ವರೂಪವಲ್ಲದ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿ ಸುವ ನಿಟ್ಟಿನಲ್ಲಿ ಜು.13ರಂದು ಮೈಸೂರು ಜಿಲ್ಲೆಯ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ್ ಅದಾಲತ್ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಹಾಗೂ ಜಿಲ್ಲಾ  ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಎಸ್.ಕೆ.ವಂಟಿಗೋಡಿ ತಿಳಿಸಿದ್ದಾರೆ.

ಮೈಸೂರಿನ ಮಳಲವಾಡಿಯಲ್ಲಿರುವ ನ್ಯಾಯಾಲಯ ಕಟ್ಟಡದ ಎಡಿಆರ್ ಸಭಾಂಗಣದಲ್ಲಿ ಗುರುವಾರ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು, ಕರ್ನಾ ಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿ ಕಾರ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ  ಈ ಅದಾಲತ್ ಆಯೋಜಿಸಲಾಗಿದ್ದು, ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾ ಲಯಗಳಲ್ಲಿ ಬಾಕಿ ಇರುವ ಪ್ರಕರಣ ಗಳಿಗೆ ಅತೀ ಶೀಘ್ರವಾಗಿ ಪರಿಹಾರ ಕಂಡುಕೊಳ್ಳುವಂತೆ ಸಲಹೆ ನೀಡಿದರು.

ಜು.13ರಂದು ಬೆಳಿಗ್ಗೆ 11ರಿಂದ ಮಧ್ಯಾಹ್ನ ದವರೆಗೂ ನಡೆಯಲಿರುವ ಲೋಕ್ ಅದಾ ಲತ್‍ಗೆ ಮೈಸೂರು ನ್ಯಾಯಾಲಯದಲ್ಲಿ 10ರಿಂದ 15 ಬೆಂಚ್‍ಗಳನ್ನು ಸ್ಥಾಪಿಸಲಾಗು ತ್ತದೆ. ತಾಲೂಕು ಕೇಂದ್ರಗಳಲ್ಲಿ ಅಗತ್ಯಕ್ಕೆ ಅನುಗುಣವಾಗಿ 1 ಅಥವಾ 2 ಬೆಂಚ್ ಗಳನ್ನು ಸ್ಥಾಪಿಸಲಾಗಿದೆ. ರಾಜೀ ಸಂಧಾ ನಕ್ಕೆ ಒಪ್ಪುವ ಪ್ರಕರಣಗಳನ್ನು ಮಾತ್ರ  ಕಕ್ಷಿ ದಾರರು ಹಾಗೂ ಎದುರುದಾರರಿಗೂ ನೋಟಿಸ್ ಜಾರಿಗೊಳಿಸಿ, ಅದಾಲತ್‍ಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ. ಈ ಅದಾಲತ್ ಮೂಲಕ ರಾಜೀ ಮಾಡಿ ಕೊಂಡ ಪ್ರಕರಣಗಳಿಗೂ ನ್ಯಾಯಾಲಯ ದಲ್ಲಿ ತೀರ್ಪಾದ ಪ್ರಕರಣಗಳÀಷ್ಟೇ ಮಾನ್ಯತೆ ಇರುತ್ತದೆ. ಇದರಿಂದ ಹಣ, ಸಮಯ, ಎರಡೂ ಕಡೆಯವರ ನಡುವಿನ ದ್ವೇಷದ ಭಾವನೆ ಕಡಿಮೆಗೊಂಡು, ಸಾಮರಸ್ಯ ಮೂಡುತ್ತದೆ. ಅಲ್ಲದೆ, ಇದರಿಂದ ನ್ಯಾಯಾಲಯಕ್ಕೆ ದಾಖಲಾಗುವ ಪ್ರಕರಣ ಗಳ ಸಂಖ್ಯೆ ಕಡಿಮೆಯಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಅರ್ಹ ಪ್ರಕರಣಗಳು: ವ್ಯಾಜ್ಯ ಪೂರ್ವ ಪ್ರಕರಣಗಳಾದ ಚೆಕ್ ಬೌನ್ಸ್, ಬ್ಯಾಂಕ್ ವಸೂಲಾತಿ, ಉದ್ಯೋಗದಲ್ಲಿ ಪುನರ್ ಸ್ಥಾಪಿ ಸಲ್ಪಡುವ ಪ್ರಕರಣ, ಕಾರ್ಮಿಕ ವಿವಾದ ಗಳು ಹಾಗೂ ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಲೇಮುಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ರಾಜಿ ಯಾಗಬಲ್ಲ ಅಪರಾಧಿಕ, ವೈವಾಹಿಕ, ಕುಟುಂಬ ನ್ಯಾಯಾಲಯ ಹಾಗೂ ಇತರೆ ಸಿವಿಲ್ ಪ್ರಕರಣಗಳು ಅದಾಲತ್‍ನಲ್ಲಿ ಪರಿ ಹರಿಸಬಹುದಾಗಿದೆ. ನ್ಯಾಯಾಲಯದಲ್ಲಿ ರುವ ರಾಜೀಯಾಗಬಲ್ಲ ಅಪರಾಧಿಕ ಪ್ರಕ ರಣಗಳು, ಚೆಕ್ ಅಮಾನ್ಯ ಪ್ರಕರಣಗಳು, ಬ್ಯಾಂಕ್ ಪ್ರಕರಣಗಳು, ಮೋಟಾರು ಅಪ ಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು, ಕಾರ್ಮಿಕ ವಿವಾದಗಳು ಹಾಗೂ ಕೈಗಾರಿಕಾ ಕಾರ್ಮಿ ಕರ ವೇತನಕ್ಕೆ ಸಂಬಂಧಿಸಿದ ಕ್ಲೇಮುಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ವೈವಾ ಹಿಕ, ಕುಟುಂಬ ನ್ಯಾಯಾಲಯ ಪ್ರಕರಣ ಗಳು, ಭೂಸ್ವಾಧೀನ ಪ್ರಕರಣಗಳು, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣಗಳು ಹಾಗೂ ಪಿಂಚಣಿ ಪ್ರಕರಣ ಗಳು, ಕಂದಾಯ ಪ್ರಕರಣಗಳು, ಸಿವಿಲ್ ಪ್ರಕರಣಗಳನ್ನು ಎರಡೂ ಕಡೆಯವರ ಸಮ್ಮುಖದಲ್ಲಿ ರಾಜಿ ಸಂಧಾನದ ಮೂಲಕ ಬಗೆಹರಿಸುವುದಕ್ಕೆ ಅವಕಾಶವಿದೆ ಎಂದರು.

ಕಳೆದ ಅದಾಲತ್‍ನಲ್ಲಿ 1400 ಇತ್ಯರ್ಥ:  ರಾಷ್ಟ್ರೀಯ ಲೋಕ್ ಅದಾಲತ್‍ಗೆ ಸಾರ್ವ ಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗು ತ್ತಿದೆ. ಮಾ.9ರಂದು ನಡೆದ ಲೋಕ್ ಅದಾ ಲತ್‍ನಲ್ಲಿ 1400 ಪ್ರಕರಣಗಳು ಇತ್ಯರ್ಥ ಗೊಂಡಿದ್ದವು. ಈ ಬಾರಿ 2714 ಪ್ರಕರಣಗಳು ರಾಜೀ ಸಂಧಾನಕ್ಕೆ ಗುರುತಿಸಲಾಗಿದೆ. ಅದಾಲತ್‍ಗೆ ಅರ್ಜಿ ಸಲ್ಲಿಸಲು ಇನ್ನೂ 1 ತಿಂಗಳ ಕಾಲಾವಕಾಶ ಇರುವುದರಿಂದ ರಾಜೀ ಪ್ರಕರಣಗಳ ಸಂಖ್ಯೆ ಹೆಚ್ಚಾಗುವ ನಿರೀಕ್ಷೆ ಇದೆ ಎಂದರು. ಲೋಕ್ ಅದಾ ಲತ್ ಸಂಬಂಧ ಹೆಚ್ಚಿನ ಮಾಹಿತಿಗಾಗಿ ದೂ. 0821-2330130, 2330040 ಸಂಪ ರ್ಕಿಸಬಹುದು. ಗೋಷ್ಠಿಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಬಿ.ಪಿ.ದೇವಮಾನೆ ಇದ್ದರು.