ಮತ್ತೆ ನವಿ ಬೆಂಗಳೂರು ನಿರ್ಮಾಣ ಪ್ರಸ್ತಾಪ
ಮೈಸೂರು

ಮತ್ತೆ ನವಿ ಬೆಂಗಳೂರು ನಿರ್ಮಾಣ ಪ್ರಸ್ತಾಪ

March 14, 2020

ವಿಧಾನಸಭೆಯಲ್ಲಿ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಇಂಗಿತ
ಕೈಗಾರಿಕಾಭಿವೃದ್ಧಿಯ ದೃಷ್ಟಿಯಿಂದ ಅನಿವಾರ್ಯತೆ ಮನವರಿಕೆ
ಬೆಂಗಳೂರು, ಮಾ.13(ಕೆಎಂಶಿ)-ನವಿ ಮುಂಬಯಿ ಮಾದರಿಯಲ್ಲಿ ನವ ಬೆಂಗಳೂರು ನಿರ್ಮಾಣ ಪ್ರಸ್ತಾಪ ಮತ್ತೆ ಮುನ್ನ ಲೆಗೆ ಬಂದಿದ್ದು, ಆ ಬಗ್ಗೆ ಚಿಂತನೆ ನಡೆಸುವ ಅಗತ್ಯವಿದೆ ಎಂದು ಕೈಗಾರಿಕೆ ಸಚಿವ ಜಗ ದೀಶ್ ಶೆಟ್ಟರ್ ವಿಧಾನ ಸಭೆಯಲ್ಲಿ ತಿಳಿಸಿದ್ದಾರೆ.

ಪ್ರಶ್ನೋತ್ತರ ವೇಳೆ ಯಲ್ಲಿ ಕಾಂಗ್ರೆಸ್‍ನ ಎನ್.ಎಸ್. ಹ್ಯಾರೀಸ್ ಅವರ ಪ್ರಸ್ತಾವಕ್ಕೆ ಉತ್ತರಿಸಿದ ಸಚಿವರು, ಬೆಂಗಳೂರಿಗೆ 50 ಕಿ.ಮೀ. ದೂರದಲ್ಲಿ ನವ ಬೆಂಗಳೂರು ನಿರ್ಮಾಣದ ಬಗ್ಗೆ ಚರ್ಚೆಗಳು ನಡೆಯ ಬೇಕಿದೆ ಎಂದರು. ಇದೀಗ ಬೆಂಗಳೂರಿಗೆ ಕೈಗಾರಿಕೆಗಳು ಬರಲು ಹಿಂದೇಟು ಹಾಕುತ್ತಿವೆ. ಇಲ್ಲಿ ಎಲ್ಲಾ ರೀತಿಯ ಒತ್ತಡ ಹೆಚ್ಚಾಗಿದೆ. ಹೀಗಾಗಿಯೇ ಸರ್ಕಾರವು ಉತ್ತರ ಕರ್ನಾಟಕ ಸೇರಿ ಇತರೆ ಪ್ರಮುಖ ನಗರಗಳಲ್ಲಿ ಕೈಗಾರಿಕೆ ಅಭಿವೃದ್ಧಿಗೆ ಮುಂದಾಗಿದೆ.

ಈಗಾಗಲೇ ಹುಬ್ಬಳ್ಳಿಯಲ್ಲಿ ಬಂಡವಾಳ ಹೂಡಿಕೆ ಸಮಾವೇಶ ನಡೆಸಿ ಯಶಸ್ವಿ ಯಾಗಿದ್ದು, ಸದ್ಯದಲ್ಲೇ ಕಲಬುರಗಿಯಲ್ಲಿ ನಡೆಸಲಾಗುವುದು. ಮಂಗಳೂರಿನಲ್ಲಿ ಎರಡು ದಿನಗಳ ಸಮಾವೇಶ ನಡೆಸಲು ಮನವಿ ಬಂದಿದೆ ಎಂದು ಹೇಳಿದರು.

ಇದಕ್ಕೂ ಮುನ್ನ ಬಿಜೆಪಿಯ ಬಸನಗೌಡ ಪಾಟೀಲ್ ಯತ್ನಾಳ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ಬೆಂಗಳೂರಿನ ಒತ್ತಡ ಕಡಿಮೆ ಮಾಡಲು ಉತ್ತರ ಕರ್ನಾಟಕ ಭಾಗದಲ್ಲಿ ಕೈಗಾರಿ ಕಾಭಿವೃದ್ಧಿಗೆ ಒತ್ತು ನೀಡಲು ಸರ್ಕಾರ ನಿರ್ಧರಿಸಿದೆ. 2 ಹಾಗೂ 3 ನೇ ಹಂತದ ನಗರಗಳಲ್ಲಿ ಬಂಡವಾಳ ಹೂಡಿಕೆ ಸಮಾವೇಶ ಸಹ ಮಾಡಲಿದೆ ಎಂದು ತಿಳಿಸಿದರು.

ಬೆಂಗಳೂರಿಗೆ ಹತ್ತಿರ ಇರುವ ಮೈಸೂರಿನಲ್ಲಿಯೂ ಕೈಗಾರಿಕಾ ಅಭಿವೃದ್ಧಿಗೆ ಹೆಚ್ಚು ಅವಕಾಶಗಳಿದ್ದು ಇತ್ತೀಚೆಗೆ ನಾನು ಭೇಟಿ ನೀಡಿದ್ದ ಸಂದರ್ಭದಲ್ಲಿ ಅಲ್ಲಿನ ಕೈಗಾರಿಕೆ ಮತ್ತು ವಾಣಿಜ್ಯ ಸಂಘದ ಜತೆ ಮಾತುಕತೆ ನಡೆಸಿದ್ದೇನೆ ಎಂದು ಹೇಳಿದರು.

2019-24 ಸಾಲಿನ ನೂತನ ಕೈಗಾರಿಕಾ ನೀತಿಯಲ್ಲಿ ಉತ್ತರ ಕರ್ನಾಟಕ ಭಾಗ ದಲ್ಲಿ ಕೈಗಾರಿಕೆ ಅಭಿವೃದ್ಧಿಪಡಿಸಲು ಪೂರಕ ಅಂಶ ಸೇರ್ಪಡೆ ಮಾಡಲಾಗು ವುದು. ಹಲವು ವಿನಾಯಿತಿಗಳನ್ನು ಘೋಷಿಸಲಾಗುವುದು ಎಂದು ತಿಳಿಸಿದರು.

ಕಾಂಗ್ರೆಸ್‍ನ ರೂಪಕಲಾ ಶಶಿಧರ್, ಜೆಡಿಎಸ್‍ನ ವೆಂಕಟರಾವ್ ನಾಡಗೌಡ ಸೇರಿದಂತೆ ಹಲವರು ನಿರುದ್ಯೋಗ ಸಮಸ್ಯೆ ಹೆಚ್ಚಾಗಿದ್ದು ಕೋಲಾರ, ರಾಯಚೂರು, ಬೀದರ್ ಭಾಗಗಳಲ್ಲಿ ಕೈಗಾರಿಕೆ ಸ್ಥಾಪಿಸಿ ಉದ್ಯೋಗ ಸೃಷ್ಟಿಗೆ ಅವಕಾಶ ಕಲ್ಪಿಸಲು ಮನವಿ ಮಾಡಿದರು.

Translate »