ಬಿಜೆಪಿ ವರಿಷ್ಠರ ವಿರುದ್ಧ ನಾಯಕ ಸಮುದಾಯದ ಆಕ್ರೋಶ
ಮೈಸೂರು

ಬಿಜೆಪಿ ವರಿಷ್ಠರ ವಿರುದ್ಧ ನಾಯಕ ಸಮುದಾಯದ ಆಕ್ರೋಶ

August 29, 2019

ಮೈಸೂರು, ಆ.28(ಆರ್‍ಕೆಬಿ)- ಸಚಿವ ಶ್ರೀರಾಮುಲು ಅವರಿಗೆ ಉಪಮುಖ್ಯ ಮಂತ್ರಿ ಸ್ಥಾನ ನೀಡಬೇಕು. ಶಾಸಕ ರಾಜೂಗೌಡರಿಗೂ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿ ಮೈಸೂರಿನಲ್ಲಿಯೂ ಪ್ರತಿಭಟನೆಗಳು ನಡೆದಿದ್ದು, ಕರ್ನಾಟಕ ರಾಜ್ಯ ನಾಯಕರ ಹಿತರಕ್ಷಣಾ ವೇದಿಕೆ ಆಶ್ರಯ ದಲ್ಲಿ ಡಿಸಿ ಕಚೇರಿ ಬಳಿ ಪ್ರತಿಭಟನೆ ನಡೆಸಲಾಯಿತು.

ಉಪಮುಖ್ಯಮಂತ್ರಿ ಸ್ಥಾನ ನೀಡುವುದಾಗಿ ಹೇಳಿ ಅಧಿ ಕಾರಕ್ಕೆ ಬಂದ ಬಳಿಕ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಬಿಜೆಪಿ ವರಿಷ್ಠರು ವಚನ ಭ್ರಷ್ಟರಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿ, ಧಿಕ್ಕಾರದ ಘೋಷಣೆಗಳನ್ನು ಕೂಗಿದರು.

ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಹಾಗೂ ರಾಜ್ಯ ವಿಧಾನಸಭೆ, ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚು ಸ್ಥಾನ ಬರಲು ಮುಖ್ಯ ಕಾರಣಕರ್ತರಾದವರು ನಾಯಕ ಸಮಾಜದ ಪ್ರಭಾವಿ ಮುಖಂಡ ಶ್ರೀರಾಮುಲು. ಅವರನ್ನು ಚುನಾವಣಾ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಮಾಡುವುದಾಗಿ ಹೇಳಿದ್ದ ಬಿಜೆಪಿ ವರಿಷ್ಠರು, ನಾಯಕ ಜನಾಂ ಗದ ಶೇ.80ರಷ್ಟು ಮತಗಳನ್ನು ಪಡೆದು ಈಗ ಅವರನ್ನು ಕಡೆಗಣಿಸಿ ವಚನ ಭ್ರಷ್ಟರಾಗಿದ್ದಾರೆ. ಬಿಜೆಪಿ ಅಧಿಕಾರಕ್ಕೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ ಶ್ರೀರಾಮುಲು ಅವರನ್ನು ಪಕ್ಷದ ನಾಯಕರು ಮರೆತಿದ್ದಾರೆ ಎಂದು ಆರೋಪಿಸಿದರು.

ಸೋತವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಿ, ಪಕ್ಷ ಅಧಿಕಾರಕ್ಕೆ ತರಲು ದುಡಿದ ಶ್ರೀರಾಮುಲು ಅವರನ್ನು ಕಡೆಗಣಿಸಿದೆ. ಅಲ್ಲದೆ ರಾಜ್ಯಾದ್ಯಂತ ಪ್ರವಾಸ ಮಾಡಿ, ಪಕ್ಷ ಸಂಘಟನೆಗೆ ನಿರಂತವಾಗಿ ತೊಡಗಿಸಿಕೊಂಡಿದ್ದ ಎಸ್‍ಟಿ ಮೋರ್ಚಾ ರಾಜ್ಯ ಘಟಕದ ಅಧ್ಯಕ್ಷ ರಾಜೂಗೌಡ ಅವರಿಗೂ ಯಾವುದೇ ಸಚಿವ ಸ್ಥಾನ ನೀಡದೇ ಇಡೀ ನಾಯಕ ಸಮುದಾಯವನ್ನು ಅವಮಾನಿಸಿದೆ. ಹಿಂದು ಳಿದ ವರ್ಗಕ್ಕೆ ಸೇರಿದ ನಾಯಕರನ್ನು ತುಳಿಯುವ ಬಿಜೆಪಿ ಷಡ್ಯಂತ್ರ ಇದರಲ್ಲಿ ಅಡಗಿದೆ ಎಂದು ಆರೋಪಿಸಿದರು.

ಮುಖ್ಯಮಂತ್ರಿಗಳು ತಕ್ಷಣ ಶ್ರೀರಾಮುಲು ಅವರಿಗೆ ಉಪಮುಖ್ಯಮಂತ್ರಿ ಸ್ಥಾನ, ರಾಜೂಗೌಡ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಕಲ್ಪಿಸದಿದ್ದಲ್ಲಿ ಮುಂದೆ ನಡೆಯಲಿ ರುವ ಉಪ ಚುನಾವಣೆಯಲ್ಲಿ ಇಡೀ ನಾಯಕ ಸಮು ದಾಯ ಬಿಜೆಪಿ ವಿರುದ್ಧ ಮತ ಚಲಾಯಿಸಲು ಕರೆ ನೀಡಬೇಕಾಗುತ್ತದೆ ಎಂದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ನಾಯಕರ ಹಿತ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ದ್ಯಾವಪ್ಪನಾಯಕ, ನಾಯ ಕರ ಯುವ ಸೇನೆ ರಾಜ್ಯಾಧ್ಯಕ್ಷ ದೇವರಾಜ್ ಟಿ.ಕಾಟೂರು, ವೇದಿಕೆ ಪ್ರಧಾನ ಕಾರ್ಯದರ್ಶಿ ಪ್ರಭಾಕರ್ ಹುಣಸೂರು, ಪದಾಧಿಕಾರಿಗಳಾದ ಶಿವಕುಮಾರಸ್ವಾಮಿ, ಪ್ರತಾಪ್, ಬೆಟ್ಟದಬೀಟು ಸ್ವಾಮಿ, ಹುಣಸೂರು ತಿಮ್ಮನಾಯಕ ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು.

 

Translate »