ರಾಜ್ಯ ಬಿಜೆಪಿ ಸರ್ಕಾರಕ್ಕೆ ಮಹಿಳಾ ಸಮುದಾಯದ ಬಗೆಗೆ ನಿರ್ಲಕ್ಷ್ಯ ಧೋರಣೆ

ಮೈಸೂರು, ಮೇ 18 (ಪಿಎಂ)- ಕೊರೊನಾ ಲಾಕ್‍ಡೌನ್ ನೆಪದಲ್ಲಿ ಮಹಿಳಾ ಸಾಂತ್ವನ ಕೇಂದ್ರ ಹಾಗೂ ಮಾತೃಶ್ರೀ ಯೋಜನೆ ಸ್ಥಗಿತಗೊಳಿಸಲು ರಾಜ್ಯ ಬಿಜೆಪಿ ಸರ್ಕಾರ ಮುಂದಾಗಿದ್ದು, ಇದು ಮಹಿಳಾ ಸಮು ದಾಯ ಮತ್ತು ಮಕ್ಕಳ ಬಗ್ಗೆ ಸರ್ಕಾರ ಹೊಂದಿರುವ ನಿರ್ಲಕ್ಷ್ಯ ಧೋರಣೆಯ ಪ್ರತಿಬಿಂಬವಾಗಿದೆ ಎಂದು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಡಾ.ಬಿ.ಪುಷ್ಪಾ ಅಮರನಾಥ್ ಖಂಡಿಸಿದರು.

ಮೈಸೂರಿನ ಕಾಂಗ್ರೆಸ್ ಭವನದಲ್ಲಿ ಸೋಮ ವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾ ಡಿದ ಅವರು, ಮಹಿಳಾ ಸಾಂತ್ವನ ಕೇಂದ್ರ ಮತ್ತು ಮಾತೃಶ್ರೀ ಯೋಜನೆ ಸ್ಥಗಿತಗೊಳಿ ಸಲು ರಾಜ್ಯ ಸರ್ಕಾರ ಮುಂದಾಗಿದೆ. ಸಿದ್ದ ರಾಮಯ್ಯನವರು ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಸಾಂತ್ವನ ಕೇಂದ್ರಗಳ ಸಶಕ್ತೀ ಕರಣಕ್ಕೆ ಹೆಚ್ಚು ಒತು ್ತಕೊಟ್ಟಿದ್ದರು. ಆದರೆ ಈಗ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಕಾರ್ಯ ನಿರ್ವಹಿಸುವ ಸಾಂತ್ವಾನ ಕೇಂದ್ರ ಗಳನ್ನು ರಾಜ್ಯ ಸರ್ಕಾರ ಸ್ಥಗಿತಗೊಳಿಸಲು ಹೊರಟಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಸಾಂತ್ವನ ಕೇಂದ್ರಗಳು ಮಹಿಳಾ ದೌರ್ಜನ್ಯ ತಡೆಯುವಲ್ಲಿ ಪ್ರಮುಖ ಪಾತ್ರ ವಹಿಸು ತ್ತಿವೆ. ಇವುಗಳಿಗೆ ಹೆಚ್ಚು ಬಜೆಟ್ ಸಹ ಇಲ್ಲ. ಎಲ್ಲಾ ಜಾತಿಯ ಮಹಿಳೆಯರಿಗೆ ರಕ್ಷಣೆ ನೀಡುವ ಸಾಂತ್ವನ ಕೇಂದ್ರಗಳನ್ನು ಮುಚ್ಚಲು ಮುಂದಾಗಿರುವ ಸರ್ಕಾರಕ್ಕೆ ಮಹಿಳಾ ಪರವಾದ ಕಾಳಜಿಯೇ ಇಲ್ಲ. ಮಾತೃಶ್ರೀ ಯೋಜನೆ ಗರ್ಭಿಣಿ ಮತ್ತು ಬಾಣಂತಿ ಯರಿಗೆ ಅನುಕೂಲ ಕಲ್ಪಿಸಲಿದೆ. ಇಂತಹ ಯೋಜನೆ ಸ್ಥಗಿತಗೊಳಿಸುವುದು ಸರಿಯಲ್ಲ. ಈ ಯೋಜನೆಗಳನ್ನು ಕೈಬಿಡದಂತೆ ಮಾಜಿ ಸಿಎಂ ಸಿದ್ದರಾಮಯ್ಯ, ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರ ಸಹ ಬರೆದಿದ್ದಾರೆ ಎಂದರು.

ಜನಾದೇಶ ಇಲ್ಲದೆ ಸಾವಿರಾರು ಕೋಟಿ ರೂ. ವ್ಯಯಿಸುವ ಮೂಲಕ ಅಪರೇಷನ್ ಕಮಲ ಮಾಡಿ ಅಧಿಕಾರಕ್ಕೆ ಬಂದವ ರಿಂದ ಇನ್ನೇನು ನಿರೀಕ್ಷೆ ಮಾಡಲು ಸಾಧ್ಯ. ರೈತರಿಂದ ತರಕಾರಿ ಖರೀದಿ ಮಾಡಲು ಸರ್ಕಾರ ಹಿಂದೇಟು ಹಾಕಿದಾಗ ನಮ್ಮ ಕಾಂಗ್ರೆಸ್ ನಾಯಕರು ಖರೀದಿ ಮಾಡಿದ್ದಾರೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪೌಷ್ಟಿಕ ಆಹಾರ ಯೋಜ ನೆಯ ದಿನಸಿ ಪದಾರ್ಥಗಳನ್ನು ಬಿಜೆಪಿ ನಾಯಕರು ತಮ್ಮದೆಂದು ಹಂಚಿದ್ದಾರೆ. ಈ ಬಗ್ಗೆ ಕೆಪಿಸಿಸಿ ದೂರು ನೀಡಿದ್ದರೂ ಪ್ರಯೋಜನವಾಗಿಲ್ಲ ಎಂದು ಆರೋಪಿಸಿದರು.

20 ಲಕ್ಷ ಕೋಟಿ ಅಪ್ಪಟ ಸುಳ್ಳು: ಪ್ರಧಾನಿ ನರೇಂದ್ರ ಮೋದಿಯವರು ಘೋಷಣೆ ಮಾಡಿರುವ 20 ಲಕ್ಷ ಕೋಟಿ ರೂ. ವಿಶೇಷ ಪ್ಯಾಕೇಜ್‍ನಲ್ಲಿ ನೇರವಾಗಿ ಹಣ ಬಿಡುಗಡೆ ಮಾಡುತ್ತಿರುವುದು ಕೇವಲ 60 ಸಾವಿರ ಕೋಟಿ ರೂ. ಮಾತ್ರ. ಉಳಿದಂತೆ ವಿವಿಧ ಯೋಜನೆಗಳು ಹಾಗೂ ಬ್ಯಾಂಕುಗಳ ಮೂಲಕ ಈ ಹಿಂದಿನಿಂದಲೂ ಪ್ರತಿ ವರ್ಷ ನಡೆದು ಕೊಂಡು ಬರುತ್ತಿರುವ ಯೋಜನೆಗಳನ್ನೇ ಇದರೊಳಗೆ ಸೇರ್ಪಡೆ ಗೊಳಿಸಲಾಗಿದೆ. 20 ಲಕ್ಷ ಕೋಟಿ ರೂ. ಪ್ಯಾಕೇಜ್ ಎಂಬುದು ಅಪ್ಪಟ ಸುಳ್ಳು ಎಂದು ಟೀಕಿಸಿದರು.

ಪ್ಯಾಕೇಜ್ ಘೋಷಿಸಿ ಕೇವಲ ಸಾಲ ಕೊಟ್ಟರೇ ಪ್ರಯೋಜನವಿಲ್ಲ. ಸ್ತ್ರೀ ಶಕ್ತಿ ಗುಂಪು ಗಳ ಮಹಿಳೆಯರ ಕಿರು ಸಾಲ ಹಾಗೂ ರೈತರ ಸಾಲಮನ್ನಾ ಮಾಡಬೇಕು. ಕೂಲಿ ಕಾರ್ಮಿಕ ಹೆಣ್ಣು ಮಕ್ಕಳಿಗೆ ಸಹಾಯಧನ ನೀಡಬೇಕು. ಸಹಾಯಧನ ನೀಡಲು ಅತಿ ಯಾದ ಷರತ್ತುಗಳನ್ನು ವಿಧಿಸುವ ಬದಲು ಬಿಪಿಎಲ್ ಕಾರ್ಡ್ ಮೂಲಕ ಅಂಕಿ-ಅಂಶ ಪಡೆದು ಸಂಕಷ್ಟದಲ್ಲಿರುವ ಜನತೆಗೆ ಆರ್ಥಿಕ ಸಹಾಯ ಮಾಡಲು ಕೇಂದ್ರ ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿದರು.

ಗೋಷ್ಠಿಯಲ್ಲಿ ಮಾಜಿ ಮೇಯರ್ ಪುಷ್ಪಲತಾ ಚಿಕ್ಕಣ್ಣ, ಮಾಜಿ ಉಪ ಮೇಯರ್ ಪುಷ್ಪವಲ್ಲಿ, ಗ್ರಾಮಾಂತರ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಲತಾ ಸಿದ್ದಶೆಟ್ಟಿ ಮತ್ತಿತರರು ಹಾಜರಿದ್ದರು.