ನೆರೆ ಹಾವಳಿ: ಕಂಟ್ರೋಲ್ ರೂಂ ಪ್ರಾರಂಭ
ಮೈಸೂರು

ನೆರೆ ಹಾವಳಿ: ಕಂಟ್ರೋಲ್ ರೂಂ ಪ್ರಾರಂಭ

August 11, 2019

ಮೈಸೂರು ಆ.10- ಜಿಲ್ಲೆಯಲ್ಲಿ ಪ್ರಸ್ತುತ ಉಂಟಾಗಿರುವ ನೆರೆ ಹಾವಳಿ/ಪ್ರವಾಹ ಪರಿಸ್ಥಿತಿ ಹಿನ್ನೆಲೆಯಲ್ಲಿ ತುರ್ತು ಪರಿಸ್ಥಿತಿಯಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವ ದೃಷ್ಟಿಯಿಂದ ತಾಲೂಕು ಕೇಂದ್ರಗಳಲ್ಲಿರುವ ತಾಲೂಕು ಪಂಚಾಯತ್ ಕಚೇರಿ ಹಾಗೂ ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಕಂಟ್ರೋಲ್ ರೂಂ ಪ್ರಾರಂಭಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಜ್ಯೋತಿ ತಿಳಿಸಿದ್ದಾರೆ.

ಕಂಟ್ರೋಲ್ ರೂಂನಲ್ಲಿ ದಿನದ 24 ಗಂಟೆಗಳೂ ಕಾರ್ಯ ನಿರ್ವಹಿಸುವಂತೆ ಅಗತ್ಯ ಸಿಬ್ಬಂದಿಗಳನ್ನು ನೇಮಿಸಲಾಗಿದ್ದು, ಸಾರ್ವಜನಿಕರು ನೆರೆ ಹಾವಳಿ/ ಪ್ರವಾಹ ವಿಷಯಕ್ಕೆ ಸಂಬಂಧಿಸಿದಂತೆ ಸ್ವೀಕೃತಗೊಂಡ ದೂರು ಮನವಿಗಳನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸುವಂತೆ ಕ್ರಮ ವಹಿಸಲಾಗುವುದು.

ಕಂಟ್ರೋಲ್ ರೂಂಗೆ ನೇಮಿಸಲಾಗಿರುವ ನೋಡಲ್ ಅಧಿಕಾರಿಗಳು ಹಾಗೂ ದೂರವಾಣಿ ವಿವರ ಇಂತಿದೆ.

ಮೈಸೂರು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಕುಮಾರ್-ದೂರವಾಣಿ: 0821-2414433, ನಂಜನಗೂಡು ತಾಲೂಕು ಪಂಚಾ ಯತ್ ಕಾರ್ಯನಿರ್ವಾಹಕ ಅಧಿಕಾರಿ ಕಂಠರಾಜೇ ಅರಸ್: 08221-225353, ಟಿ.ನರಸೀಪುರ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಜೆರಾಲ್ಡ್ ರಾಜೇಶ್: 08227-261223, ಹುಣಸೂರು ತಾಲೂಕು ಪಂಚಾಯತ್  ಕಾರ್ಯ ನಿರ್ವಾಹಕ ಅಧಿಕಾರಿ ಗಿರೀಶ್: 08222-252028, ಕೆ.ಆರ್.ನಗರ ತಾಲೂಕು ಪಂಚಾ ಯತ್ ಕಾರ್ಯನಿರ್ವಾಹಕ ಅಧಿಕಾರಿ ಗಿರೀಶ್: 08223-262824, ಪಿರಿಯಾ ಪಟ್ಟಣ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ  ಶೃತಿ: 08223-273456, ಹೆಚ್.ಡಿ.ಕೋಟೆ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ರಾಮಲಿಂಗಯ್ಯ: 08228-255277 ಹಾಗೂ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಡಾ.ಎಸ್.ಪ್ರೇಮ್‍ಕುಮಾರ್: 0821-2526322 ಕರೆ ಮಾಡಬಹುದಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Translate »