ಮೈಸೂರು

ಮೈಸೂರಲ್ಲಿ ಹೊಸದಾಗಿ 2 ಕೊರೊನಾ ಚಿಕಿತ್ಸಾ ಕೇಂದ್ರ ಆರಂಭಕ್ಕೆ ಅನುಮತಿ ಕೋರಿ ಸರ್ಕಾರಕ್ಕೆ ಡಿಸಿ ಪತ್ರ

April 26, 2021
  • ಟ್ರಾಮಾ ಕೇರ್ ಸೆಂಟರ್‍ನ 300 ಸೇರಿ ಹೊಸದಾಗಿ ಒಟ್ಟು 700 ಹಾಸಿಗೆ ಸೌಲಭ್ಯಕ್ಕೆ ಸಿದ್ಧತೆ
  • ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 300 ಹಾಸಿಗೆ ಮತ್ತು 20 ಸಾವಿರ ಲೀ. ಆಮ್ಲಜನಕ ಘಟಕ
  • ಒಟ್ಟು ಆಮ್ಲಜನಕ ಸೌಲಭ್ಯದ 600, ಆಮ್ಲಜನಕ ಸಹಿತ ಐಸಿಯು ಘಟಕದಲ್ಲಿ 100 ಹಾಸಿಗೆ
  • ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಡಿಸಿ ರೋಹಿಣಿ ಸಿಂಧೂರಿ ಪ್ರಸ್ತಾವನೆ

ಕೃತಕವಾಗಿ ಹಾಸಿಗೆ ಅಭಾವ ಸೃಷ್ಟಿಸುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ: ಡಿಸಿ ಎಚ್ಚರಿಕೆ

ಮೈಸೂರು,ಏ.25-ಕೋವಿಡ್-19 ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗಳಲ್ಲಿ ಹಾಸಿಗೆಗಳಿ ದ್ದರೂ, ಕೃತಕವಾಗಿ ಹಾಸಿಗೆ ಅಭಾವ ಸೃಷ್ಟಿಸುವ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಎಚ್ಚರಿಕೆ ನೀಡಿದರು.

ಭಾನುವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಖಾಸಗಿ ಆಸ್ಪತ್ರೆಗಳ ಆಡಳಿತಾ ಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಸರ್ಕಾರದ ಮಾರ್ಗಸೂಚಿ ಯಂತೆ ಖಾಸಗಿ ಆಸ್ಪತ್ರೆಗಳು ಶೇ.50ರಷ್ಟು ಹಾಸಿಗೆಗಳನ್ನು ಮೀಸಲಿಡಬೇಕು. ಈ ಬಗ್ಗೆ ಪ್ರತಿದಿನ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಬೇಕು ಎಂದು ಸೂಚಿಸಿದರು.

ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿಗೆ ಒಳಪಟ್ಟವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹೀಗಾಗಿ ಆಸ್ಪತ್ರೆಗಳಲ್ಲಿ ಹಾಸಿಗೆ ಕೊರತೆಯಿಂದಾಗಿ ಸಾಮಾನ್ಯ ಜನರು ಅಲೆದಾಡುವಂಥ ಪರಿಸ್ಥಿತಿ ನಿರ್ಮಾಣವಾಗಬಾರದು. ಆಸ್ಪತ್ರೆಗಳಲ್ಲಿ ಖಾಲಿ ಇರುವ ವೆಂಟಿಲೇಟರ್, ಆಕ್ಸಿಜನ್ ವ್ಯವಸ್ಥೆವುಳ್ಳ ಹಾಸಿಗೆಗಳ ಮಾಹಿತಿ ಕುರಿತು ‘ಆರೋಗ್ಯ ಮಿತ್ರ’ ಹಾಗೂ ಜಿಲ್ಲಾಡಳಿತ ನಿಯೋಜಿಸಿರುವ ನೋಡಲ್ ಅಧಿಕಾರಿ ಗಳಿಗೆ ಮಾಹಿತಿ ನೀಡಬೇಕು ಎಂದು ಡಿಸಿ ಹೇಳಿದರು.

ಕೋವಿಡ್-19 ಎರಡನೇ ಅಲೆ ಅತ್ಯಂತ ಪರಿಣಾಮಕಾರಿಯಾಗಿದ್ದು, ಸೋಂಕಿಗೆ ಒಳಪಟ್ಟವರಿಗೆ ಚಿಕಿತ್ಸೆ ದೊರಕುವುದು ತಡವಾಗಬಾರದು. ಮೈಸೂರು ಜಿಲ್ಲೆಯು ಆರೋಗ್ಯ ವ್ಯವಸ್ಥೆಯಲ್ಲಿ ಉತ್ತಮವಾಗಿದ್ದು, ಯಾವುದೇ ಕಾರಣಕ್ಕೂ ಸರಿಯಾದ ಚಿಕಿತ್ಸೆ ದೊರಕದೆ ರೋಗಿ ಸಾವನ್ನಪ್ಪಿದ ಅಪಖ್ಯಾತಿಗೆ ಒಳಗಾಗಬಾರದು. ಆದ್ದರಿಂದ ಖಾಸಗಿ ಆಸ್ಪತ್ರೆಗಳು ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು ಎಂದು ಹೇಳಿದರು.

ಸಾವು ಸಂಭವಿಸಿದ ದಿನದಂದೇ ಡೆತ್ ಆಡಿಟ್ ಆಗಬೇಕು. ಆಸ್ಪತ್ರೆಗಳು ಈ ನಿಯಮವನ್ನು ಕಡಾಯವಾಗಿ ಪಾಲಿಸಬೇಕು. ಯಾವುದೇ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆ ಉಂಟಾಗದಂತೆ ಜಿಲ್ಲಾಡಳಿತ ಕ್ರಮ ವಹಿಸುತ್ತಿದೆ. ಆಕ್ಸಿಜನ್ ಸಂಬಂದಿಸಿದಂತೆ ಮುಂಚಿತವಾಗಿ ಮಾಹಿತಿ ನೀಡಬೇಕು. ಆಸ್ಪತ್ರೆಗಳಲ್ಲಿ ದಾಖಾಲಾಗುವ ರೋಗಿಗಳಿಗೆ ಉತ್ತಮವಾಗಿ ಚಿಕಿತ್ಸೆ ನೀಡಿ ಗುಣಪಡಿಸಬೇಕು ಎಂದು ತಿಳಿಸಿದರು. ಸಭೆಯಲ್ಲಿ ಎಡಿಸಿ ಡಾ.ಬಿ.ಎಸ್.ಮಂಜುನಾಥಸ್ವಾಮಿ, ಜಿಪಂ ಉಪ ಕಾರ್ಯದರ್ಶಿ ಪ್ರೇಮ್‍ಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಟಿ.ಅಮರನಾಥ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಶಿವಪ್ರಸಾದ್, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಪಿ.ರವಿ, ಜಿಲ್ಲಾ ಆಯುಷ್ ಅಧಿಕಾರಿ ಡಾ.ಸೀತಾಲಕ್ಷ್ಮಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಮೈಸೂರು, ಏ.25- ಮೈಸೂರು ನಗರ ದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ದಿನೇದಿನೆ ಹೆಚ್ಚುತ್ತಿದ್ದು, ಈಗಿರುವ ಚಿಕಿತ್ಸಾ ಕೇಂದ್ರಗಳ ಮೇಲೆ ಬಹಳ ಒತ್ತಡ ಬೀಳು ತ್ತಿದೆ. ಹಾಗಾಗಿ, ನಗರದಲ್ಲಿನ `ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ’ ಮತ್ತು ಪಿಕೆಟಿಬಿ ಆಸ್ಪತ್ರೆ’ ಗಳಲ್ಲಿ ತಕ್ಷಣವೇ ಕೋವಿಡ್ ಚಿಕಿತ್ಸಾ ಸೌಲಭ್ಯ ವನ್ನು ಆರಂಭಿಸಬೇಕಿದ್ದು, ಅದಕ್ಕೆ ಸರ್ಕಾರ ಅನುಮತಿ ನೀಡಬೇಕು ಎಂದು ಜಿಲ್ಲಾಧಿ ಕಾರಿ ರೋಹಿಣಿ ಸಿಂಧೂರಿ ಅವರು ರಾಜ್ಯ ಸರ್ಕಾರಕ್ಕೆ ಭಾನುವಾರ ಪತ್ರ ಬರೆದು ಮನವಿ ಮಾಡಿದ್ದಾರೆ.

ಸದ್ಯ ಮೈಸೂರಲ್ಲಿ ಕೋವಿಡ್-19 ಸೋಂಕಿನ 5040 ಸಕ್ರಿಯ ಪ್ರಕರಣಗಳಿವೆ. ನಗರದಲ್ಲಿ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡುವ ಕೇಂದ್ರಗಳಿಗೆ ಸ್ಥಳೀಯರಷ್ಟೇ ದಾಖಲಾಗು ತ್ತಿಲ್ಲ. ಬೆಂಗಳೂರು ಮತ್ತು ನೆರೆಯ ಜಿಲ್ಲೆ ಗಳಿಂದಲೂ ಕೊರೊನಾ ಸೋಂಕಿತರು ಚಿಕಿತ್ಸೆಗಾಗಿ ಮೈಸೂರು ನಗರಕ್ಕೆ ಧಾವಿಸುತ್ತಿ ದ್ದಾರೆ. ಇದರಿಂದಾಗಿ ಮೈಸೂರು ಜಿಲ್ಲೆಯ ಲ್ಲಿನ ಕೋವಿಡ್-19 ರೋಗಿಗಳ ಸಂಖ್ಯೆ ಯಲ್ಲಿ ದಿನೇ ದಿನೆ ಭಾರೀ ಹೆಚ್ಚಳವಾಗು ತ್ತಿದೆ. ಹಾಗಾಗಿ ಮೈಸೂರು ನಗರದಲ್ಲಿನ ಆಸ್ಪತ್ರೆಗಳಲ್ಲಿ ಆಮ್ಲಜನಕ ಸೌಲಭ್ಯವಿರುವ ಹಾಸಿಗೆಗಳ ಸಂಖ್ಯೆಯನ್ನು ತಕ್ಷಣ ಹೆಚ್ಚಿಸ ಬೇಕಿದೆ. ಜತೆಗೆ ಹೊಸ
ಚಿಕಿತ್ಸಾ ಕೇಂದ್ರಗಳನ್ನೂ ಆರಂಭಿಸಬೇಕಿದೆ. ವೈದ್ಯಕೀಯ ಸಿಬ್ಬಂದಿಗಳ ಸಂಖ್ಯೆಯಲ್ಲೂ ಹೆಚ್ಚಳವಾಗಬೇಕಿದೆ ಎಂದು ಸರ್ಕಾರದ ಗಮನ ಸೆಳೆದಿದ್ದಾರೆ. ರಾಜ್ಯ ಸರ್ಕಾರದ ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಟಿ.ಕೆ.ಅನಿಲ್‍ಕುಮಾರ್ ಅವರಿಗೆ ಬರೆದಿ ರುವ ಪತ್ರದಲ್ಲಿ ಮೈಸೂರು ಜಿಲ್ಲೆಯಲ್ಲಿನ ಸದ್ಯದ ಪರಿಸ್ಥಿತಿ, ಪ್ರಸ್ತುತ ಲಭ್ಯವಿರುವ ಚಿಕಿತ್ಸಾ ಸೌಲಭ್ಯಗಳು, ತಕ್ಷಣಕ್ಕೆ ಬೇಕಿರುವ ಅಂಶಗಳ ಬಗ್ಗೆ ಜಿಲ್ಲಾಧಿಕಾರಿ ವಿವರಿಸಿದ್ದಾರೆ.
ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿತರ ಚಿಕಿತ್ಸೆಗೆ ವ್ಯವಸ್ಥೆ ಮಾಡಿದರೆ 20 ಸಾವಿರ ಲೀ. ಸಾಮಥ್ರ್ಯದ ಆಮ್ಲಜನಕ ಉತ್ಪಾದನಾ ಘಟಕ ಆರಂ ಭಿಸಬೇಕು. ಅಷ್ಟರವರೆಗೆ ಗಂಭೀರ ಸ್ವರೂಪದ ರೋಗಿಗಳಿಗೆ ಆಮ್ಲಜನಕ ಪೂರೈಸಲು 20 ಡ್ಯೂರಾ ಆಕ್ಸಿಜನ್ ಸಿಲಿಂಡರ್‍ಗಳನ್ನು ವ್ಯವಸ್ಥೆ ಮಾಡಿಕೊಳ್ಳಲು ಜಿಲ್ಲಾಡಳಿತಕ್ಕೆ ಸರ್ಕಾರ ಅವಕಾಶ ನೀಡಬೇಕು ಎಂದು ಮನವಿ ಮಾಡಿದ್ದಾರೆ.

Translate »