ಇಂದು ಉಪ್ಪಿಯ ಹೊಸ ಪಕ್ಷ ಘೋಷಣೆ ಸಾಧ್ಯತೆ

ಬೆಂಗಳೂರು: ನಟ, ನಿರ್ದೇಶಕ ಉಪೇಂದ್ರ ಮತ್ತೆ ರಾಜಕೀಯಕ್ಕೆ ವಾಪಸ್ ಆಗಲಿದ್ದಾರೆ. ತಮ್ಮ ಹುಟ್ಟು ಹಬ್ಬದಂದು ಅಂದರೆ ನಾಳೆ ಉಪೇಂದ್ರ ತಮ್ಮ ಹೊಸ ಪಕ್ಷವನ್ನ ಅನೌನ್ಸ್ ಮಾಡಲಿದ್ದಾರೆ ಎನ್ನಲಾಗಿದೆ.

ಕತ್ರಿಗುಪ್ಪೆಯಲ್ಲಿ ರುವ ನಿವಾಸದಲ್ಲಿ ಉಪ್ಪಿ ನಾಳೆ ಅಭಿಮಾನಿಗಳ ಜೊತೆ ಹುಟ್ಟುಹಬ್ಬ ಆಚರಿಸಿಕೊಳ್ಳುವ ಜೊತೆಗೆ ಹೊಸ ಪಕ್ಷದ ಹೆಸರನ್ನು ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ. ಜನತಂತ್ರ ವ್ಯವಸ್ಥೆಗೆ ಮಾರಕವಾಗಿರುವ ಹಣ ಬಲ, ಜಾತಿ ಬಲ, ಖ್ಯಾತಿ ಬಲಗಳನ್ನು ಅಳಿಸಿ ಹಾಕಿ, ಸಂಪೂರ್ಣ ಪಾರದರ್ಶಕ ಆಡಳಿತ ನೀಡುವುದು ಪಕ್ಷದ ಉದ್ದೇಶ. ಉತ್ತಮ ಪ್ರಜಾಕೀಯ ವ್ಯವಸ್ಥೆಯನ್ನು ರೂಪಿ ಸುವುದು ನನ್ನ ಮುಂದಿನ ಗುರಿ ಎಂದು ಉಪೇಂದ್ರ ಹೇಳಿದ್ದಾರೆ.

ಉತ್ತಮ ಪ್ರಜಾಕೀಯ ಪಾರ್ಟಿಯನ್ನು ಉಪೇಂದ್ರ ಅವರು ಈಗಾಗಲೇ ನೋಂದಣಿ ಮಾಡಿಸಿದ್ದಾರೆ. ಮೇ 10 ರಂದು ದೆಹಲಿಗೆ ಭೇಟಿ ನೀಡಿದ್ದ ಅವರು, ಚುನಾವಣಾ ಆಯೋಗದಲ್ಲಿ ಹೊಸ ಪಕ್ಷದ ಹೆಸರನ್ನು ನೋಂದಣಿ ಮಾಡಿಸಿದ್ದರು. ಈಗ ಪಕ್ಷವನ್ನು ಅಧಿಕೃತವಾಗಿ ಘೋಷಣೆ ಮಾಡುತ್ತಿದ್ದಾರೆ. 2018ರ ಕರ್ನಾಟಕ ವಿಧಾನಸಭೆ ಚುನಾವಣೆ ವೇಳೆ ಉಪೇಂದ್ರ ಕೆಪಿಜೆಪಿ ಪಕ್ಷವನ್ನು ಸ್ಥಾಪಿಸಿದ್ದರು. ಆದರೆ, ಚುನಾವಣೆ ದಿನಾಂಕ ಘೋಷಣೆಯಾಗುವ ಸಮಯದಲ್ಲಿ ಪಕ್ಷದಲ್ಲಿ ಭಿನ್ನಾಭಿಪ್ರಾಯ ಉಂಟಾಗಿದ್ದರಿಂದ ಉಪೇಂದ್ರ ಪಕ್ಷದಿಂದ ಹೊರಬಂದಿದ್ದರು. ಈಗ ಹೊಸ ಪಕ್ಷ ಸ್ಥಾಪನೆ ಮಾಡುತ್ತಿದ್ದು, ಉತ್ತಮ ಪ್ರಜಾಕೀಯ ವ್ಯವಸ್ಥೆ ರೂಪಿಸುವುದು ನನ್ನ ಮುಂದಿನ ಗುರಿ ಎಂದು ಹೇಳಿದ್ದಾರೆ. 2019ರ ಲೋಕಸಭೆ ಚುನಾವಣೆಗೆ ಮುನ್ನ ಉಪೇಂದ್ರ ‘ಉತ್ತಮ ಪ್ರಜಾಕೀಯ ಪಾರ್ಟಿ’ಯ ಕಾರ್ಯಸೂಚಿಯನ್ನು ಪ್ರಕಟಿಸುವ ಸಾಧ್ಯತೆ ಇದೆ.