ಜಾಗಟೆ ಬಾರಿಸಿ ವಿನೂತನ ಪ್ರತಿಭಟನೆ
ಮೈಸೂರು

ಜಾಗಟೆ ಬಾರಿಸಿ ವಿನೂತನ ಪ್ರತಿಭಟನೆ

October 21, 2021

ಮೈಸೂರು,ಅ.20(ಪಿಎಂ)-ತೈಲ ಬೆಲೆ, ಅಡುಗೆ ಅನಿಲ ಬೆಲೆ ಹಾಗೂ ಅಗತ್ಯ ವಸ್ತುಗಳ ಬೆಲೆ ಇಳಿಕೆಗೆ ಒತ್ತಾಯಿಸಿ ಕನ್ನಡ ಚಳ ವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗಾರಾಜ್ ಜಾಗಟೆ ಬಾರಿಸುವ ಮೂಲಕ ವಿನೂತನವಾಗಿ ಪ್ರತಿಭಟಿಸಿದರು.

ಮೈಸೂರಿನ ಜಯಚಾಮರಾಜ ಒಡೆಯರ್ ವೃತ್ತದಲ್ಲಿ ವಾಟಾಳ್ ನಾಗರಾಜ್ ಜಾಗಟೆ ಬಾರಿಸುವ ಮೂಲಕ ಬೆಲೆ ಏರಿಕೆಯನ್ನು ಖಂಡಿಸಿದರು. ಇದೇ ವೇಳೆ ಮಾಧ್ಯಮದವರೊಂದಿಗೆ ಮಾತ ನಾಡಿದ ಅವರು, ಗ್ಯಾಸ್ ಸಿಲಿಂಡರ್, ಪೆಟ್ರೋಲ್-ಡೀಸೆಲ್ ಮತ್ತು ಅಗತ್ಯ ವಸ್ತುಗಳ ಬೆಲೆ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರ ಬಡವರ ಮೇಲೆ ದಾಳಿ ನಡೆಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಜಕೀಯ ನಾಯಕರ ವಾಕ್ಸಮರ ಕುರಿತು ಪ್ರತಿಕ್ರಿಯಿಸಿದ ವಾಟಾಳ್ ನಾಗರಾಜ್, ಇವರಿಗೆ ಮಾನ, ಮರ್ಯಾದೆ ಇಲ್ಲ. ಸಂವಿಧಾನಬದ್ಧ ವಿರೋಧ ಪಕ್ಷದ ಸ್ಥಾನವನ್ನು `ಪುಟಗೋಸಿ’ಗೆ ಹೋಲಿಸಿರುವುದು ಸರಿಯಲ್ಲ. ಮುಖ್ಯಮಂತ್ರಿ ಸ್ಥಾನದಷ್ಟೆ ಜವಾಬ್ದಾರಿ ವಿರೋಧಪಕ್ಷದ ನಾಯಕರ ಹುದ್ದೆಗಿದೆ. ಎಲ್ಲಾ ರಾಜಕಾರಣಿಗಳು ಹದ್ದುಬಸ್ತಿನಲ್ಲಿ ಮಾತನಾಡಬೇಕು ಎಂದು ಕಿಡಿಕಾರಿದರು.

ಸ್ಥಳೀಯ ಸಂಸ್ಥೆಗಳಿಂದ ಮೇಲ್ಮನೆಗೆ ನಡೆಯುವ ಮೈಸೂರು-ಚಾಮರಾಜನಗರ ದ್ವಿಸದಸ್ಯ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧಿಸಲಿ ದ್ದೇನೆ. ಎರಡು ಮತ ಚಲಾವಣೆಗೆ ಅವಕಾಶವಿದೆ. ನನಗೊಂದು ಮತ ಕೊಡಿ, ಉಳಿದೊಂದು ಮತವನ್ನು ಬೇರೆ ಯಾರಿಗೆ ಬೇಕಾದರೂ ಚಲಾಯಿಸಿ. ನಿಮ್ಮ ಒಂದು ಮತವನ್ನು ನನಗೆ ಚಲಾಯಿಸಿ. ನನ್ನಂತಹವನು ಸದನದಲ್ಲಿ ಇರಬೇಕು ಎಂದು ಸ್ಥಳೀಯ ಸಂಸ್ಥೆಗಳ ಸದಸ್ಯರಲ್ಲಿ ಕೋರಿದರು. ಕನ್ನಡಪರ ಹೋರಾಟಗಾರ ತಾಯೂರು ವಿಠಲಮೂರ್ತಿ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Translate »