ನೂತನ ಎಸ್ಪಿ, ಡಿಸಿಪಿ ಅಧಿಕಾರ ಸ್ವೀಕಾರ
ಮೈಸೂರು

ನೂತನ ಎಸ್ಪಿ, ಡಿಸಿಪಿ ಅಧಿಕಾರ ಸ್ವೀಕಾರ

June 11, 2021

ಮೈಸೂರು, ಜೂ.10(ಆರ್‍ಕೆ)-ಮೈಸೂರು ಜಿಲ್ಲಾ ನೂತನ ಎಸ್ಪಿ ಆರ್.ಚೇತನ್ ಹಾಗೂ ಮೈಸೂರು ನಗರ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಪ್ರದೀಪ್ ಗುಂಟಿ ಅವರು ಗುರುವಾರ ಅಧಿಕಾರ ವಹಿಸಿಕೊಂಡರು.

ಮೈಸೂರಿನ ನಜರ್‍ಬಾದ್‍ನಲ್ಲಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ನಿರ್ಗಮಿತ ಎಸ್ಪಿ ಸಿ.ಬಿ.ರಿಷ್ಯಂತ್ ಅವರು ಚೇತನ್ ಅವರಿಗೆ ಅಧಿಕಾರ ಹಸ್ತಾಂತರಿಸಿ, ಶುಭ ಕೋರಿದರು. ಅದೇ ರೀತಿ ನಗರ ಪೊಲೀಸ್ ಆಯುಕ್ತರ ಕಚೇರಿ ಯಲ್ಲಿ ನಿರ್ಗಮಿತ ಡಿಸಿಪಿ ಡಾ. ಎ.ಎನ್.ಪ್ರಕಾಶ್‍ಗೌಡ, ಪ್ರದೀಪ್ ಗುಂಟಿ ಅವರಿಗೆ ಅಧಿಕಾರ ವಹಿಸಿಕೊಟ್ಟು ಪುಷ್ಪಗುಚ್ಛ ನೀಡಿ, ಶುಭ ಹಾರೈಸಿದರು. ಈ ಸಂದರ್ಭ ಮಾತನಾಡಿದ ನೂತನ ಎಸ್ಪಿ ಚೇತನ್ ಅವರು, ಅಧೀನಾಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ವಿಶ್ವಾಸಕ್ಕೆ ಪಡೆದು ಸಮರ್ಥವಾಗಿ ಕರ್ತವ್ಯ ನಿರ್ವಹಿಸುವುದಾಗಿ ಹೇಳಿದರು. ಡಿಸಿಪಿ ಪ್ರದೀಪ್ ಗುಂಟಿ ಅವರು ಪ್ರತಿಕ್ರಿಯೆ ನೀಡಿ, ಮೈಸೂರು ನಗರದ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ಆದ್ಯತೆಯನುಸಾರ ಕೆಲಸ ಮಾಡುವುದಾಗಿ ತಿಳಿಸಿದರು.

Translate »