ರಾಜ್ಯದಲ್ಲಿ ಇನ್ನೂ 3-4 ದಿನ ಗುಡುಗು ಸಹಿತ ಗಾಳಿ ಮಳೆ
ಮೈಸೂರು

ರಾಜ್ಯದಲ್ಲಿ ಇನ್ನೂ 3-4 ದಿನ ಗುಡುಗು ಸಹಿತ ಗಾಳಿ ಮಳೆ

May 13, 2019

ಬೆಂಗಳೂರು: ಮುಂದಿನ ಮೂರ್ನಾಲ್ಕು ದಿನ ರಾಜ್ಯದ ವಿವಿಧ ಭಾಗದಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆ ಆಗಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್‍ಎನ್‍ಡಿ ಎಂಸಿ) ಮಾಹಿತಿ ನೀಡಿದೆ. ಮುಂಗಾರು ಪೂರ್ವ ಅವಧಿಯಲ್ಲಿ ವಾತಾವರಣ ದಲ್ಲಿ ಉಷ್ಣಾಂಶ ಹೆಚ್ಚಾಗಿ ಮಳೆ ಆಗ ಲಿದೆ. ದಕ್ಷಿಣ ಒಳನಾಡು, ಕರಾವಳಿ, ಮಲೆನಾಡು ಭಾಗದಲ್ಲಿ ಮುಂದಿನ 2-3 ದಿನ ಗುಡುಗು, ಮಿಂಚು, ಗಾಳಿ ಸಹಿತ ಮಳೆಯಾಗಲಿದೆ.

ಆದರೆ, ಮೊದಲ 2 ದಿನ ಉತ್ತರ ಕರ್ನಾಟಕ ಭಾಗದಲ್ಲಿ ಮಳೆಯಾಗುವ ಸಾಧ್ಯತೆಗಳಿಲ್ಲ. ತದನಂತರ ಉತ್ತರ ಕರ್ನಾಟಕ ಭಾಗದಲ್ಲಿಯೂ ಮಳೆ ಆಗುವ ಲಕ್ಷಣಗಳು ಕಂಡುಬರು ತ್ತಿವೆ ಎಂದು ಕೆಎಸ್‍ಎನ್‍ಡಿಎಂಸಿ ನಿರ್ದೇಶಕ ಶ್ರೀನಿವಾಸ್ ರೆಡ್ಡಿ ಮಾಹಿತಿ ನೀಡಿದ್ದಾರೆ. ಶನಿವಾರ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಚಾ.ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ದಾವಣಗೆರೆ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ, ರಾಮನಗರ ಹಾಗೂ ತುಮಕೂರು ಜಿಲ್ಲೆಯ ಕೆಲವು ಭಾಗದಲ್ಲಿ ಮಳೆಯಾಗಿದೆ. ಭಾನುವಾರವೂ ಈ ಭಾಗದಲ್ಲಿ ಮಳೆ ಸುರಿಯಲಿದೆ ಎಂದರು

Translate »