ಚಾಮುಂಡೇಶ್ವರಿ ಕ್ಷೇತ್ರದ ಕೆರೆಕಟ್ಟೆಗಳಿಗೆ  ಮುಂದಿನ ವರ್ಷ ನೀರು : ಜಿಟಿಡಿ ಭರವಸೆ
ಮೈಸೂರು

ಚಾಮುಂಡೇಶ್ವರಿ ಕ್ಷೇತ್ರದ ಕೆರೆಕಟ್ಟೆಗಳಿಗೆ ಮುಂದಿನ ವರ್ಷ ನೀರು : ಜಿಟಿಡಿ ಭರವಸೆ

February 21, 2019

ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದ ಕೆರೆಕಟ್ಟೆಗಳಿಗೆ ಕೆಆರ್‍ಎಸ್ ಜಲಾಶಯದಿಂದ ನೀರು ಹರಿಸುವ ಉದ್ದೇಶಿತ ಯೋಜನೆ ಮುಂದಿನ ವರ್ಷ ಈಡೇರುವ ಮೂಲಕ ಕ್ಷೇತ್ರದ ಗ್ರಾಮಗಳ ನೀರಿನ ಸಮಸ್ಯೆ ಪರಿಹಾರವಾಗ ಲಿದೆ ಎಂದು ಉನ್ನತ ಶಿಕ್ಷಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಹೇಳಿದರು.

ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುವ ಸಲು ವಾಗಿ ಬುಧವಾರ ಪ್ರವಾಸ ಕೈಗೊಂಡಿದ್ದ ಅವರು, ನಾಗವಾಲದಲ್ಲಿ ಪ್ರವಾಸೋದ್ಯಮ ಇಲಾಖೆಯ 50 ಲಕ್ಷ ರೂ. ಅನುದಾನದಲ್ಲಿ ಕೈಗೆತ್ತಿಕೊಳ್ಳುತ್ತಿರುವ ಶ್ರೀ ಸೋಮೇಶ್ವರ ದೇವಸ್ಥಾನದ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು.

ಕೆಆರ್‍ಎಸ್ ಜಲಾಶಯದಿಂದ ಲಿಫ್ಟಿನೇಷನ್ (ಮೇಲೆತ್ತುವ) ಮೂಲಕ ಚಾಮುಂಡೇಶ್ವರಿ ಕ್ಷೇತ್ರದ ಕೆರೆಕಟ್ಟೆಗಳಿಗೆ ನೀರು ಹರಿಸುವ ಉದ್ದೇಶಿತ ಯೋಜನೆಯ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಿದ್ದೇನೆ. ಈ ಯೋಜನೆ ಅನುಷ್ಠಾನಗೊಳಿಸಲು ಸಂಪುಟದ ಅನು ಮೋದನೆ ಪಡೆದು ಮುಂದಿನ ವರ್ಷದ ವೇಳೆಗೆ ಕ್ಷೇತ್ರದ ಕೆರೆಕಟ್ಟೆಗಳಲ್ಲಿ ನೀರು ತುಂಬಿಸಲು ಸತತ ಪ್ರಯತ್ನದಲ್ಲಿದ್ದೇನೆ ಎಂದು ಹೇಳಿದರು.

24 ಗಂಟೆ ನೀರು: ಕ್ಷೇತ್ರದ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ನಿರಂತರ ಪ್ರಯತ್ನದ ಫಲವಾಗಿ 545 ಕೋಟಿ ರೂ. ವೆಚ್ಚದ ಹಳೇ ಉಂಡ ವಾಡಿ ಯೋಜನೆಗೆ ಸಚಿವ ಸಂಪುಟದಲ್ಲಿ ಅನುಮೋದನೆ ಸಿಕ್ಕಿದೆ. 2 ವರ್ಷಗಳಲ್ಲಿ ಈ ಯೋಜನೆಯ ಕಾಮಗಾರಿ ಪೂರ್ಣಗೊಳ್ಳ ಲಿದ್ದು, ಕ್ಷೇತ್ರದ ಎಲ್ಲಾ ಗ್ರಾಮಗಳಲ್ಲಿ 24 ಗಂಟೆಯೂ ನೀರು ಲಭ್ಯವಾಗಲಿದೆ ಎಂದು ತಿಳಿಸಿದರು.

ಋಣ ತೀರಿಸುತ್ತೇನೆ: ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಕ್ಷೇತ್ರದ ಜನತೆ ನನ್ನನ್ನು ಅಧಿಕ ಮತಗಳ ಅಂತರದಿಂದ ಗೆಲ್ಲಿಸಿದ್ದಾರೆ. ಅಭಿವೃದ್ಧಿ ಕೆಲಸಗಳ ಮೂಲಕ ಅವರ ಋಣ ತೀರಿಸಲಿದ್ದೇನೆ. ಕ್ಷೇತ್ರದ ಜನತೆಯ ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸಲು ಆದ್ಯತೆ ನೀಡ ಲಿದ್ದು, ಉಳಿದಿರುವ ನಾಲ್ಕೂವರೆ ವರ್ಷಗಳ ಅಧಿಕಾರಾವಧಿಯಲ್ಲಿ ಕ್ಷೇತ್ರದ ಸಮಗ್ರ ಅಭಿವೃದ್ಧಿ ನನ್ನ ಗುರಿಯಾಗಿದೆ ಎಂದು ಹೇಳಿದರು.

ಕ್ಷೇತ್ರದಲ್ಲಿ ಕೃಷಿ, ಶಿಕ್ಷಣ ಮತ್ತು ಆರೋಗ್ಯ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲೂ ಸೌಲಭ್ಯ ಗಳು ಸಮರ್ಪಕವಾಗಿ ದೊರೆಯಬೇಕು. ಈ ನಿಟ್ಟಿನಲ್ಲಿ ಶಾಲಾ-ಕಾಲೇಜುಗಳು ಹಾಗೂ ಆಸ್ಪತ್ರೆಗಳನ್ನು ಅಭಿವೃದ್ಧಿಪಡಿಸ ಲಾಗುವುದು. ನಾಗವಾಲ ಸೇರಿದಂತೆ ಕ್ಷೇತ್ರದ ಪ್ರತಿ ಗ್ರಾಮ ಅಭಿವೃದ್ಧಿ ಕಾಣಬೇಕು. ಗ್ರಾಮಗಳ ರಸ್ತೆ, ಚರಂಡಿ ಸುವ್ಯವಸ್ಥೆ ಯಿಂದ ಕೂಡಿರಬೇಕು. ಹೆಚ್.ಡಿ.ಕುಮಾರ ಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರ ವೃದ್ಧರು, ಗರ್ಭಿಣಿಯರ ಸಹಾಯಧನ ಹೆಚ್ಚಳ ಮಾಡಿದೆ. ರೈತರ ಸಾಲ ಮನ್ನಾ ಮೂಲಕ ಅನ್ನದಾತನ ಸಂಕಷ್ಟಕ್ಕೆ ಸ್ಪಂದಿಸಿದೆ. ಇಸ್ರೇಲ್ ಮಾದರಿಯಲ್ಲಿ ಕೃಷಿ ಕ್ಷೇತ್ರದ ಅಭಿವೃದ್ಧಿಗೆ ಒತ್ತು ನೀಡುತ್ತಿದೆ. ಆ ಮೂಲಕ ರಾಜ್ಯದ ಹಿತ ಕಾಯಲು ಬದ್ಧವಾಗಿದೆ ಎಂದು ನುಡಿದರು.

ಸಮಸ್ಯೆ ಆಲಿಸಿದ ಜಿಟಿಡಿ: ಕೆಲ ಗ್ರಾಮ ಸ್ಥರ ಅಹವಾಲು ಆಲಿಸಿದ ಜಿ.ಟಿ.ದೇವೇ ಗೌಡ, ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸಮಸ್ಯೆ ಗಳನ್ನು ಬಗೆಹರಿಸಲು ಅಗತ್ಯ ಕ್ರಮ ವಹಿಸು ವಂತೆ ನಿರ್ದೇಶನ ನೀಡಿದರು. ವೃದ್ಧಾಪ್ಯ, ಅಂಗವಿಕಲ ವೇತನ ಸೇರಿದಂತೆ ವಿವಿಧ ಸವಲತ್ತುಗಳಿಗೆ ಸಂಬಂಧಿಸಿದ ಸಣ್ಣಪುಟ್ಟ ಸಮಸ್ಯೆಗಳನ್ನು ಅಧಿಕಾರಿಗಳೇ ಬಗೆಹರಿಸಿ ಸೌಲಭ್ಯಗಳನ್ನು ಫಲಾನುಭವಿಗಳಿಗೆ ದೊರೆ ಯುವಂತೆ ಮಾಡಬೇಕೆಂದು ಅಧಿಕಾರಿ ಗಳಿಗೆ ಸೂಚನೆ ನೀಡಿದರು.

ಅಭಿಮಾನದ ಸ್ವಾಗತ: ನಾಗವಾಲ ಸೇರಿದಂತೆ ಸಚಿವರು ಭೇಟಿ ನೀಡಿದ ಗ್ರಾಮಗಳಲ್ಲಿ ಸಚಿವರನ್ನು ಗ್ರಾಮಸ್ಥರು ಅಭಿಮಾನದಿಂದ ಬರ ಮಾಡಿಕೊಂಡರು. ನಾಗವಾಲಕ್ಕೆ ಭೇಟಿ ನೀಡುತ್ತಿದ್ದಂತೆ ಪಟಾಕಿ ಸಿಡಿಸಿ ಸಂಭ್ರಮಿಸಿದ್ದಲ್ಲದೆ, ತಮಟೆ, ನಗಾರಿ ಭಾರಿಸುವ ಮೂಲಕ ಸ್ವಾಗತ ಕೋರಲಾಯಿತು. ಅಲ್ಲದೆ, ಗೃಹಿಣಿಯರು ಆರತಿ ಬೆಳಗುವ ಮೂಲಕ ಸಚಿವರನ್ನು ಬರಮಾಡಿಕೊಂಡರು.

ನಾಗವಾಲದಲ್ಲಿ ನಡೆದ ಕಾರ್ಯಕ್ರಮ ದಲ್ಲಿ ಜಿಪಂ ಮಾಜಿ ಅಧ್ಯಕ್ಷ ಬೆಳವಾಡಿ ಶಿವಮೂರ್ತಿ, ಸದಸ್ಯ ಬೀರಿಹುಂಡಿ ಬಸವಣ್ಣ, ನಾಗವಾಲ ಗ್ರಾಪಂ ಅಧ್ಯಕ್ಷೆ ಜಯಮ್ಮ, ಉಪಾಧ್ಯಕ್ಷ ಎನ್.ಎಸ್. ಪ್ರಕಾಶ್, ಸದಸ್ಯ ನರೇಂದ್ರ, ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕ ಹೆಚ್.ಪಿ.ಜನಾರ್ಧನ್, ತಹಸಿಲ್ದಾರ್ ಟಿ.ರಮೇಶ್‍ಬಾಬು, ತಾಪಂ ಇಓ ಲಿಂಗ ರಾಜಯ್ಯ ಸೇರಿದಂತೆ ಹಲವು ಮುಖಂಡರು ಹಾಗೂ ಅಧಿಕಾರಿಗಳು ಹಾಜರಿದ್ದರು.

Translate »