ಪರೀಕ್ಷೆ ಮುಂದೂಡುವಂತೆ ಒತ್ತಾಯಿಸಿ ಎನ್‍ಐಇ ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ
ಮೈಸೂರು

ಪರೀಕ್ಷೆ ಮುಂದೂಡುವಂತೆ ಒತ್ತಾಯಿಸಿ ಎನ್‍ಐಇ ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ

January 6, 2021

ಮೈಸೂರು, ಜ.5(ಎಂಕೆ)- ಪರೀಕ್ಷೆ ಮುಂದೂಡುವಂತೆ ಒತ್ತಾಯಿಸಿ ಎನ್‍ಐಇ (ದಿ ನ್ಯಾಷನಲ್ ಇನ್ ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್) ಕಾಲೇಜಿನ ವಿದ್ಯಾರ್ಥಿ ಗಳು ದಿಢೀರ್ ಪ್ರತಿಭಟನೆ ನಡೆಸಿದರು.

ಮೈಸೂರು ಮಾನಂದವಾಡಿ ರಸ್ತೆಯಲ್ಲಿ ರುವ ಎನ್‍ಐಇ ಕಾಲೇಜು ಎದುರು ಮಂಗಳವಾರ ಬೆಳಗ್ಗೆ ಜಮಾವಣೆಗೊಂಡ ನೂರಾರು ಇಂಜಿನಿಯರಿಂಗ್ ವಿದ್ಯಾರ್ಥಿ ಗಳು, 3 ಮತ್ತು ಅಂತಿಮ ವರ್ಷದ ಇಂಜಿ ನಿಯರಿಂಗ್ ಪರೀಕ್ಷೆಗಳನ್ನು ಜ.18ರಿಂದ ನಡೆಸಲು ನಿರ್ಧರಿಸಲಾಗಿದೆ. ಕಾಲೇಜಿನ ಶೇ.50ರಷ್ಟು ವಿದ್ಯಾರ್ಥಿಗಳು ಬೇರೆ ಬೇರೆ ರಾಜ್ಯಗಳವರಾಗಿದ್ದಾರೆ. ಅವರೆಲ್ಲರೂ ಇಲ್ಲಿಗೆ ಬಂದು ಪರೀಕ್ಷೆ ಬರೆಯಬೇಕಾಗಿದೆ. ಆದರೆ 2ನೇ ಬಾರೀ ಕೊರೊನಾ ಹೆಚ್ಚಾಗಿ ಹರಡುವ ಆತಂಕ ಹೆಚ್ಚಾಗಿದ್ದು, ಈ ಸಂದರ್ಭದಲ್ಲಿ ಪರೀಕ್ಷೆ ನಡೆಸಬಾರದು ಎಂದು ಒತ್ತಾಯಿಸಿದರು. ಬೇರೆ ರಾಜ್ಯ ದಿಂದ ಬರುವವರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡು ಇಲ್ಲಿನವರಿಗೂ ಸೋಂಕು ತಗುಲಿದರೆ ಯಾರು ಜವಾಬ್ದಾರಿ? ನೂರಾರು ವಿದ್ಯಾರ್ಥಿಗಳು ಇಲ್ಲಿ ವಿದ್ಯಾ ಭ್ಯಾಸ ಮಾಡುತ್ತಿದ್ದೇವೆ. ಕೊರೊನಾ ಹರಡ ದಂತೆ ಮಾಸ್ಕ್, ಸ್ಯಾನಿಟೈಸರ್ ಬಳಸಿ ದರೂ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಿರು ವುದರಿಂದ ಸಾಮಾಜಿಕ ಅಂತರ ಕಾಯ್ದು ಕೊಳ್ಳಲು ಸಾಧ್ಯವಾಗಬಹುದು. ಈ ನಿಟ್ಟಿನಲ್ಲಿ ಪರೀಕ್ಷೆಯನ್ನು ಇನ್ನಷ್ಟು ದಿನಗಳ ಕಾಲ ಮುಂದೂಡುವುದು ಸರಿ. ಸಾಧ್ಯ ವಾಗದಿದ್ದರೆ ಆನ್‍ಲೈನ್ ಮೂಲಕ ಪರೀಕ್ಷೆ ನಡೆಸಲಿ. ಈ ಕುರಿತು ಕಾಲೇಜು ಮುಖ್ಯ ಸ್ಥರಿಗೆ ಐದಾರು ಬಾರಿ ಮನವಿ ಮಾಡಿ ದ್ದರೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

Translate »