ಮಸೀದಿಯಲ್ಲಿ ನಿಖಿಲ್ ಪ್ರಾರ್ಥನೆ
ಮೈಸೂರು

ಮಸೀದಿಯಲ್ಲಿ ನಿಖಿಲ್ ಪ್ರಾರ್ಥನೆ

April 6, 2019

ಮಂಡ್ಯ: ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರಿಂದು ಮಂಡ್ಯ ಗಾಂಧಿನಗರದ ಮಸೀದಿಗೆ ಭೇಟಿ ನೀಡಿ ಮತಯಾಚನೆ ಮಾಡಿದರು.

ಮುಸ್ಲಿಂ ಟೋಪಿ ಧರಿಸಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ನಿಖಿಲ್‍ಗೆ ಶಾಸಕ ಎಂ.ಶ್ರೀನಿವಾಸ್ ಸೇರಿದಂತೆ ಮುಸ್ಲಿಂ ಮುಖಂಡರು ಸಾಥ್ ನೀಡಿದರು. ಇದೇ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯದಲ್ಲಿ ವಾತಾವರಣ ತುಂಬಾ ಚೆನ್ನಾಗಿದೆ. ಶುಕ್ರವಾರ ಮುಸ್ಲಿಮರಿಗೆ ಪವಿತ್ರ ದಿನವಾಗಿದೆ. ಹಾಗಾಗಿ ಮಸೀದಿಗೆ ಬಂದೆ. ಏಪ್ರಿಲ್ 8 ರಿಂದ ಮಂಡ್ಯದಲ್ಲಿ ಸಿಎಂ ಕುಮಾರಸ್ವಾಮಿ, ಡಿಕೆಶಿ ಪ್ರಚಾರ ಮಾಡುತ್ತಾರೆ.ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಸೇರಿ ಅನೇಕರು ಸಹ ಪ್ರಚಾರಕ್ಕೆ ಬರ್ತಾರೆ ಎಂದರು. ಹಣ ಸಾಗಾಟದ ಬಗ್ಗೆ ಸುಮಲತಾ ಆರೋಪ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಆರೋಪ ಮಾಡೋದು ಬಿಟ್ಟರೆ ಅವರ ಕೈಲಿ ಬೇರೇನೂ ಮಾಡೋಕೆ ಆಗ್ತಿಲ್ಲ. ಇದಕ್ಕೆಲ್ಲಾ ನಾವಾ ಗಲೀ, ಕಾರ್ಯಕರ್ತರಾಗಲೀ ಹೆದರೋದೂ ಇಲ್ಲ, ಬಗ್ಗೋದೂ ಇಲ್ಲ ಎಂದರು.

ನೀತಿ ಸಂಹಿತೆ ಉಲ್ಲಂಘನೆ: ಚುನಾ ವಣಾ ನೀತಿ ಸಂಹಿತೆ ಉಲ್ಲಂಘನೆ ಆರೋ ಪದ ಮೇಲೆ ಪಕ್ಷೇತರ ಅಭ್ಯರ್ಥಿ ಸುಮ ಲತಾ ಅಂಬರೀಶ್ ಅವರ ವಿರುದ್ದ ಜೆಡಿಎಸ್ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದೆ. ಜೆಡಿಎಸ್ ಕಾನೂನು ವಿಭಾಗದ ಪ್ರಧಾನ ಕಾರ್ಯದರ್ಶಿ ಪ್ರದೀಪ್‍ಕುಮಾರ್ ಅವರು ಸುಮಲತಾ ವಿರುದ್ಧ ದೂರು ನೀಡಿದ್ದಾರೆ. ಸುಮಲತಾ ನಟಿಸಿರುವ ಜಾಹೀರಾತು ಟಿವಿಗಳಲ್ಲಿ ಪ್ರಸಾರವಾಗುತ್ತಿದೆ. ಇದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗಿದೆ. ಹೀಗಾಗಿ ಅವರ ವಿರುದ್ಧ ತಕ್ಷಣವೇ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯ ಚುನಾವಣಾಧಿಕಾರಿಗಳ ಬಳಿ ಮನವಿ ಮಾಡಿಕೊಂಡಿದ್ದಾರೆ.

Translate »