ನಿಖಿಲ್-ರೇವತಿ ಸರಳ ವಿವಾಹ: ಮಾಜಿ ಸಿಎಂ ಕುಮಾರಸ್ವಾಮಿ ಕೃತಜ್ಞತೆ
ಮೈಸೂರು

ನಿಖಿಲ್-ರೇವತಿ ಸರಳ ವಿವಾಹ: ಮಾಜಿ ಸಿಎಂ ಕುಮಾರಸ್ವಾಮಿ ಕೃತಜ್ಞತೆ

April 18, 2020

ಬೆಂಗಳೂರು,ಏ.17(ಕೆಎಂಶಿ)- ನನ್ನ ಪುತ್ರ ನಿಖಿಲ್ ಮತ್ತು ರೇವತಿ ಅವರ ವಿವಾಹ ಇಂದು ಅತ್ಯಂತ ಸರಳ ರೀತಿಯಲ್ಲಿ ನಡೆ ಯಲು ಸಹಕರಿಸಿದ ಲಕ್ಷಾಂತರ ಕಾರ್ಯ ಕರ್ತರು ಮತ್ತು ಕುಟುಂಬದ ಹಿತೈಷಿಗಳಿಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೃದಯಾಂತರಾಳದ ಕೃತಜ್ಞತೆ ಸಲ್ಲಿಸಿದರು.

ಇಡೀ ಜಗತ್ತು ಕೊರೊನಾ ವೈರಸ್‍ನಿಂದ ತತ್ತರಿಸುತ್ತಿರುವ ಇಂತಹ ಬಿಕ್ಕಟ್ಟಿನ ಸಂದರ್ಭ ದಲ್ಲಿ ಸರ್ಕಾರದ ಮಾರ್ಗಸೂಚಿ ಅನ್ವಯ ವ್ಯವಸ್ಥಿತವಾಗಿ ಸಾಮಾಜಿಕ ಅಂತರ ಹಾಗೂ ಮುನ್ನೆಚ್ಚರಿಕೆಯ ನಡುವೆ ವಿವಾಹ ಅಚ್ಚುಕಟ್ಟಾಗಿ ನೆರವೇರಿದೆ ಎಂದರು.

ಶಾಸಕರು, ಕಾರ್ಯಕರ್ತರು, ಮುಖಂ ಡರು, ಕುಟುಂಬದ ಹಿತೈಷಿಗಳು ಸೇರಿದಂತೆ ನಾಡಿನ ಲಕ್ಷಾಂತರ ಜನರು ನನ್ನ ಕುಟುಂ ಬದ ಕುಡಿಯ ವಿವಾಹಕ್ಕೆ ಮನೆಯಿಂದಲೇ ಹರಸಿದ್ದೀರಿ. ನಾನು ಮತ್ತು ನನ್ನ ಕುಟುಂಬ ವರ್ಗ ಮಾಡಿದ ಮನವಿಗೆ ನೀವುಗಳು ಸ್ಪಂದಿ ಸಿದ ರೀತಿ ಅನುಕರಣೀಯ ಮತ್ತು ಮಾದರಿ. ಜಗತ್ತು ಪ್ರಸಕ್ತ ಎದುರಿಸುತ್ತಿರುವ ಈ ಗಂಡಾಂ ತರ ಕಳೆದು ಪರಿಸ್ಥಿತಿ ಸಹಜವಾದಾಗ ನಾವು ಮತ್ತು ನೀವುಗಳು ಜತೆ ಸೇರಿ ಒಟ್ಟಿಗೆ ಕುಳಿತು ಊಟ ಮಾಡೋಣ. ನಿಮ್ಮ ಹೃದಯ ವೈಶಾಲ್ಯ ಮತ್ತು ಪ್ರೀತಿಗೆ ನಾವುಗಳು ಸದಾಋಣಿ. ನವ ದಂಪತಿಗೆ ಹರಸಿದ ಪ್ರತಿಯೊಬ್ಬರಿಗೂ ತುಂಬು ಹೃದಯದ ಕೃತಜ್ಞತೆಗಳು ಎಂದಿದ್ದಾರೆ.

Translate »