ನಿಫಾ ಆತಂಕ: ಕೇರಳ ಗಡಿಯಲ್ಲಿ ಕಟ್ಟೆಚ್ಚರ
ಮೈಸೂರು

ನಿಫಾ ಆತಂಕ: ಕೇರಳ ಗಡಿಯಲ್ಲಿ ಕಟ್ಟೆಚ್ಚರ

September 11, 2021

ಮೈಸೂರು, ಸೆ.೯(ಎಂಟಿವೈ)- ನೆರೆ ರಾಜ್ಯಗಳಲ್ಲಿ ಕೊರೊನಾ ವೈರಸ್ ಹೆಚ್ಚಳದೊಂದಿಗೆ ನಿಫಾ ವೈರಸ್ ಪತ್ತೆಯಾಗುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ-ಕೇರಳ ಗಡಿ ಬಾವಲಿ ಚೆಕ್‌ಪೋಸ್ಟ್ನಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಅಲ್ಲದೆ ಗಡಿದಾಟುವ ಪ್ರತಿ ಯೊಬ್ಬರನ್ನು ತಪಾಸಣೆ ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಸೂಚಿಸಿದ್ದಾರೆ.

ಮೈಸೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಹೆಚ್.ಪಿ.ಪ್ರಸಾದ್ ಹಾಗೂ ಹೆಚ್.ಡಿ.ಕೋಟೆ ತಾಲೂಕು ಆರೋಗ್ಯಾಧಿಕಾರಿ ಡಾ.ರವಿಕುಮಾರ್ ಚಾಮರಾಜನಗರ ಜಿಲ್ಲಾ ಡಳಿತಕ್ಕೆ ಸೂಚನೆ ನೀಡಿದ್ದು, ಕೇರಳ ರಾಜ್ಯದಲ್ಲಿ ನಿಫಾ ವೈರಸ್ ಕಾಣ ಸಿಕೊಂಡಿರುವ ಹಾಗೂ ಕೋವಿಡ್ ಪ್ರಕರಣಗಳು ಹೆಚ್ಚುತ್ತಿ ರುವ ಹಿನ್ನೆಲೆಯಲ್ಲಿ ಮೈಸೂರು ಮತ್ತು ಚಾಮರಾಜನಗರದ ಗಡಿಭಾಗಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸುವಂತೆ ಸೂಚಿಸಿದ್ದಾರೆ.

ಕೇರಳ ಸಂಪರ್ಕಿಸುವ ಹೆಚ್.ಡಿ.ಕೋಟೆ ತಾಲೂಕಿನ ಬಾವಲಿ ಚೆಕ್‌ಪೋಸ್ಟ್, ಚಾಮರಾಜನಗರದ ಗುಂಡ್ಲುಪೇಟೆ ತಾಲೂಕಿನ ಬಂಡೀ ಪುರ ಹುಲಿ ಸಂರಕ್ಷಿತ ಪ್ರದೇಶದ ಗಡಿ ಮೂಲೆಹೊಳೆ ಚೆಕ್‌ಪೋಸ್ಟ್, ಊಟಿ ರಸ್ತೆಯಲ್ಲಿ ಕೆಕ್ಕನಹಳ್ಳ ಚೆಕ್‌ಪೋಸ್ಟ್ನಲ್ಲಿ ತಪಾಸಣಾ ಕಾರ್ಯವನ್ನು ಇನ್ನಷ್ಟು ಕಟ್ಟುನಿಟ್ಟಾಗಿ ಮುಂದುವರೆಸಬೇಕು. ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ತೆಗೆದುಕೊಂಡು ಹೆಚ್ಚಿನ ನಿಗಾ ವಹಿಸಿದರೆ ರಾಜ್ಯಕ್ಕೆ ಈ ವೈರಸ್ ಹರಡದಂತೆ ತಡೆಯಲು ಸಾಧ್ಯವಿದೆ. ಈ ಹಿನ್ನೆಲೆಯಲ್ಲಿ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾಡಳಿತಗಳು ತಮ್ಮ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಗಡಿ ಪ್ರದೇಶ ಗಳ ಮೂಲಕ ರಾಜ್ಯ ಪ್ರವೇಶಿಸುವ ಪ್ರತಿಯೊಬ್ಬರ ತಪಾಸಣೆ ನಡೆಸಿ, ಕಟ್ಟೆಚ್ಚರ ವಹಿಸಬೇಕು ಎಂದು ಸಲಹೆ ನೀಡಿದ್ದಾರೆ.

ನಿಫಾ ಸೋಂಕಿನ ಲಕ್ಷಣ ಇರುವ ಪ್ರವಾಸಿಗರು, ಪ್ರಯಾಣ ಕರಿಗೆ ರಾಜ್ಯ ಪ್ರವೇಶಕ್ಕೆ ಅವಕಾಶ ನೀಡಬಾರದು. ಜಿಲ್ಲೆಯ ಗಡಿ ಭಾಗ ಗಳ ಮೂಲಕ ರಾಜ್ಯ ಪ್ರವೇಶಿಸುವ ಪ್ರತಿಯೊಬ್ಬರಿಗೂ ೭೨ ಗಂಟೆಯೊಳಗೆ ಮಾಡಿಸಿದ ಆರ್‌ಟಿಪಿಸಿಆರ್ ನೆಗೆಟಿವ್ ವರದಿ ಇರುವುದನ್ನು ಖಾತರಿಪಡಿಸಿಕೊಳ್ಳಬೇಕು. ಸೂಕ್ತ ತಪಾಸಣೆ ಹಾಗೂ ಪರಿಶೀಲನೆಯನ್ನು ಕಟ್ಟುನಿಟ್ಟಾಗಿ ಮಾಡಬೇಕು ಎಂದು ಸೂಚಿಸಿರುವುದಾಗಿ ಸಚಿವರು ತಿಳಿಸಿದ್ದಾರೆ.

ಕೊರೊನಾ ಹಾಗೂ ನಿಫಾ ವೈರಸ್ ಹರಡುವಿಕೆ ಆತಂಕದಿAದ ಕರ್ನಾಟಕ-ಕೇರಳ ಗಡಿ ಭಾಗ ಬಾವಲಿ ಚೆಕ್‌ಪೋಸ್ಟ್ಗೆ ತಾಲೂಕು ಆರೋಗ್ಯಾಧಿಕಾರಿ ಡಾ.ರವಿಕುಮಾರ್, ಸರ್ಕಲ್ ಇನ್ಸ್ಪೆಕ್ಟರ್ ಆನಂದ, ಡಿ.ಬಿ.ಕುಪ್ಪೆ ಆರ್‌ಎಫ್‌ಓ ಮಧು, ರೇಷ್ಮೆ ಇಲಾಖೆಯ ಅಧಿಕಾರಿ ಉಮೇಶ್ ಇನ್ನಿತರರ ತಂಡ ಭೇಟಿ ನೀಡಿ ಪರಿಶೀಲಿಸಿತು.
ಈ ಕುರಿತು ತಾಲೂಕು ಆರೋಗ್ಯಾಧಿಕಾರಿ ಡಾ. ರವಿಕುಮಾರ್ ಮಾತನಾಡಿ, ಸರ್ಕಾರದ ನೂತನ ಅದೇಶದ ಮೇರೆಗೆ ಬೆಳಗ್ಗೆ ೬ರಿಂದ ಸಂಜೆ ೬ ಗಂಟೆವರೆಗೆ ಬಾವಲಿ ಚೆಕ್‌ಪೋಸ್ಟ್ನಲ್ಲಿ ತಪಾಸಣಾ ಕಾರ್ಯವನ್ನು ಮತ್ತಷ್ಟು ಕಠಿಣಗೊಳಿಸಲಾಗಿದೆ.

ಎರಡು ದಿನಗಳ ಹಿಂದೆ ಕೇರಳದ ಮಲ್ಲಪುರಂನಲ್ಲಿ ನಿಫಾ ವೈರಸ್‌ನಿಂದ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವುದರಿಂದ ಚೆಕ್ ಪೋಸ್ಟ್ನಲ್ಲಿ ಜಿಲ್ಲಾಡಳಿತದ ಮಾರ್ಗಸೂಚಿಯಂತೆ ತಾಲೂಕು ಆಡಳಿತ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಜ್ವರ ಪ್ರಕರಣ ಕಂಡು ಬಂದಿದ್ದಲ್ಲಿ ತಕ್ಷಣ ವಾಪಾಸ್ ಕಳುಹಿಸಲಾಗುತ್ತಿದೆ. ಎಲ್ಲ ಗ್ರಾಮ ಪಂಚಾಯಿತಿ, ಕಂದಾಯ ಇಲಾಖೆ ಹಾಗೂ ಇತರೆ ಇಲಾಖೆಯ ಸಹಯೋಗದಲ್ಲಿ ಗಡಿಭಾಗದ ಎಲ್ಲ ಗ್ರಾಮಗಳಲ್ಲಿ ನಿಫಾ ವೈರಸ್‌ಗೆ ಸಂಬAಧಪಟ್ಟ ಕೆಲವು ಭಿತ್ತಿಪತ್ರಗಳನ್ನು ವಿತರಿಸಿ, ಜಾಗೃತಿ ಮೂಡಿಸಲಾಗುತ್ತಿದೆ ಎಂದು ತಿಳಿಸಿದರು.

 

 

Translate »