ನಿಫಾ ವೈರಸ್ ಸಂಬಂಧ ಮೈಸೂರು ಜಿಲ್ಲೆಯಲ್ಲಿ ಕಟ್ಟೆಚ್ಚರ
ಮೈಸೂರು

ನಿಫಾ ವೈರಸ್ ಸಂಬಂಧ ಮೈಸೂರು ಜಿಲ್ಲೆಯಲ್ಲಿ ಕಟ್ಟೆಚ್ಚರ

June 7, 2019

ಮೈಸೂರು: ಬಾವಲಿ ಜ್ವರ (ನಿಫಾ ವೈರಸ್) ಹರಡದಂತೆ ಮುಂಜಾಗ್ರತಾ ಕ್ರಮ ವಾಗಿ ಮೈಸೂರು ಜಿಲ್ಲೆಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

ಕೇರಳದಲ್ಲಿ ನಿಫಾ ವೈರಸ್ ಪ್ರಕರಣ ಕಾಣಿಸಿ ಕೊಂಡಿರುವ ಹಿನ್ನೆಲೆಯಲ್ಲಿ ಚಾಮರಾಜನಗರ, ಮೈಸೂರು, ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ನಿಫಾ ವೈರಸ್ ಹರಡಬಹುದೆಂದು ಶಂಕಿಸಲಾಗಿದ್ದು, ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜೂನ್ 4ರಂದು ಸುತ್ತೋಲೆ ಹೊರಡಿಸಿದೆ.

ಈ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲಾ ಆರೋಗ್ಯಾ ಧಿಕಾರಿಗಳು ಹೆಚ್.ಡಿ.ಕೋಟೆ ತಾಲೂಕಿನ ಬಾವಲಿ, ಕೇರಳ ಗಡಿ ಭಾಗಗಳ ಹಲವು ಗ್ರಾಮಗಳು ಮತ್ತು ಬುಡಕಟ್ಟು ಸ್ಥಳಗಳಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಗಳಿಂದ ಅಲ್ಲಿನ ನಿವಾಸಿಗಳ ಆರೋಗ್ಯ ತಪಾಸಣೆ ಮತ್ತು ಮುಂಜಾಗ್ರತಾ ಕ್ರಮ ವಹಿಸಿದ್ದಾರೆ.

ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ (IMA), ಐಎಪಿ, ಪಶುಪಾಲನಾ ಇಲಾಖೆ ಸೇರಿ ದಂತೆ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಸಮ ನ್ವಯ ಸಾಧಿಸಿ ಆಗಿಂದಾಗ್ಯೆ ಸಭೆಗಳನ್ನು ನಡೆಸಿ ಸಮಾ ಲೋಚನೆ ನಡೆಸಬೇಕು, ಎಲ್ಲಾ ಆಸ್ಪತ್ರೆಗಳಲ್ಲಿ ಔಷಧಿ ಗಳು ಲಭ್ಯವಾಗುವಂತೆ ನೋಡಿಕೊಳ್ಳಬೇಕು, ವಲಸೆ ಬರುವವರು, ಪ್ರವಾಸಿಗರು ಹಾಗೂ ಪ್ರಯಾಣಿಕರ ಮೇಲೆ ನಿಗಾ ಇರಿಸಿ ಅವರ ಆರೋಗ್ಯ ತಪಾಸಣೆ ಮಾಡುತ್ತಿರಬೇಕೆಂದು ಆದೇಶದಲ್ಲಿ ತಿಳಿಸಿದೆ.

ಆಸ್ಪತ್ರೆಗಳಲ್ಲಿ ಐಸಿಯು, ವೆಂಟಿಲೇಟರ್‍ಗಳನ್ನು ಮೀಸಲಿರಿಸಬೇಕು, ನಿಫಾ ವೈರಸ್‍ಗೆ ಸಂಬಂಧಿಸಿ ದಂತೆ ಪ್ರತಿನಿತ್ಯ ಸರ್ಕಾರಕ್ಕೆ ಮಾಹಿತಿ ನೀಡಬೇಕು, ನಾಗರಿಕ ಆರೋಗ್ಯ ಸಹಾಯಕರು ಮತ್ತು ಆಶಾ ಕಾರ್ಯಕರ್ತೆಯರ ನೆರವು ಪಡೆಯಬೇಕು, ಶಂಕಿತ ನಿಫಾ ವೈರಸ್ ಸಂತ್ರಸ್ತರಿಗೆ ಸೂಕ್ತ ಚಿಕಿತ್ಸೆ, ಮುಂಜಾ ಗ್ರತಾ ಕ್ರಮ ವಹಿಸಬೇಕು. ಈ ರೋಗ ಲಕ್ಷಣಗಳು ಕಂಡು ಬಂದಲ್ಲಿ ತಕ್ಷಣ ಹತ್ತಿರದ ಆಸ್ಪತ್ರೆ ಅಥವಾ ಕ್ಲಿನಿಕ್‍ಗೆ ತೆರಳಿ ವೈದ್ಯರಿಂದ ತಪಾಸಣೆ ಮಾಡಿಸು ವಂತೆ ಜನರಿಗೆ ತಿಳುವಳಿಕೆ ನೀಡಬೇಕೆಂದು ಆದೇಶ ದಲ್ಲಿ ಸೂಚಿಸಲಾಗಿದೆ. ಬುಧವಾರದಿಂದಲೇ ಕೇರಳ ಗಡಿ ಭಾಗದ ಹೆಚ್.ಡಿ.ಕೋಟೆ ತಾಲೂಕಿನ ಹಾಡಿ ಗಳು, ಅರಣ್ಯ ನಿವಾಸಿಗಳಿರುವ ಸ್ಥಳಗಳಲ್ಲಿ ಆರೋಗ್ಯ ಇಲಾಖೆ ವೈದ್ಯರು ಮತ್ತು ನರ್ಸಿಂಗ್ ಸಿಬ್ಬಂದಿ ಮುಂಜಾಗ್ರತಾ ಕ್ರಮವಾಗಿ ಜನರಿಂದ ರಕ್ತದ ಮಾದರಿ ಕಲೆ ಹಾಕುವುದು, ನಿಫಾ ವೈರಸ್ ಲಕ್ಷಣಗಳ ಬಗ್ಗೆ ನಿಗಾ ವಹಿಸುವ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ವೈದ್ಯರು ಹಾಗೂ ಸಿಬ್ಬಂದಿಗಳ ತಂಡವು ಈಗಾ ಗಲೇ ಬಸ್ಸುಗಳಲ್ಲಿ ಕೇರಳದಿಂದ ಬರುವ ಪ್ರಯಾಣಿಕರ ಆರೋಗ್ಯ ತಪಾಸಣೆ ಮಾಡುತ್ತಿದ್ದು, ಹೆಚ್.ಡಿ.ಕೋಟೆ ತಾಲೂಕಿನ ಬಾವಲಿ ಎಂಬ ಗ್ರಾಮದಲ್ಲಿ ಜನರಿಗೆ ಜಾಗೃತಿ ಮಾಡಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.

ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಮೈಸೂರು ಜಿಲ್ಲಾ ಆರೋಗ್ಯಾಧಿಕಾರಿ ಡಾ.ವೆಂಕಟೇಶ ಅವರು, ಮೈಸೂರು ಜಿಲ್ಲೆಯಲ್ಲಿ ನಿಫಾ ವೈರಸ್ ಬಗ್ಗೆ ಮಾಹಿತಿ ಇಲ್ಲ. ಆದರೂ ನಾವು ಅಗತ್ಯ ಎಲ್ಲಾ ಮುಂಜಾಗ್ರತಾ ಕ್ರಮ ಕೈಗೊಂಡಿದ್ದೇವೆ ಎಂದರು.

Translate »