ಯಾರೊಂದಿಗೂ ಮೈತ್ರಿ ಇಲ್ಲ
News

ಯಾರೊಂದಿಗೂ ಮೈತ್ರಿ ಇಲ್ಲ

December 8, 2021

ಬೆಂಗಳೂರು,ಡಿ.7(ಕೆಎಂಶಿ)-ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್‍ಗೆ ನಡೆಯುತ್ತಿರುವ ಚುನಾವಣೆಯಲ್ಲಿ ಬಿಜೆಪಿ ಸೇರಿದಂತೆ ಯಾವ ಪಕ್ಷದ ಜತೆಯೂ ಜೆಡಿಎಸ್ ಮೈತ್ರಿ ಇಲ್ಲ ಎಂದು ಪಕ್ಷದ ವರಿಷ್ಠ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತ ನಾಡಿದ ಅವರು, ನಾವು ಕಣಕ್ಕಿಳಿದಿರುವೆಡೆ ಯಾವ ಪಕ್ಷದೊಂದಿಗೂ ಮೈತ್ರಿ ಇಲ್ಲ. ನಾವು ಸ್ಪರ್ಧೆ ಮಾಡದ ಕ್ಷೇತ್ರ ಗಳಲ್ಲಿ ಸ್ಥಳೀಯ ಮುಖಂಡರು ಬಿಜೆಪಿ ಇಲ್ಲವೇ ಕಾಂಗ್ರೆಸ್ ಅಭ್ಯರ್ಥಿಗಳನ್ನು ಬೆಂಬಲಿಸಿಕೊಳ್ಳಬಹುದು. 2023ರ ವಿಧಾನಸಭೆ ಚುನಾವಣೆಯಲ್ಲಿ ನಿಗದಿತ ಗುರಿ ತಲುಪಲು ಅನುಕೂಲ ಆಗುವಂತೆ ಪಕ್ಷವು ಸ್ಪರ್ಧೆ ಮಾಡದಿರುವ 19 ಕ್ಷೇತ್ರಗಳಿಗೆ ಸ್ಥಳೀಯ ಮಟ್ಟದಲ್ಲಿಯೇ ನಿರ್ಧಾರ ಕೈಗೊಳ್ಳು ವಂತೆ ಮತದಾರರಿಗೆ ನಿರ್ದೇಶನ ನೀಡಲಾಗಿದೆ ಎಂದರು.

ಪರಿಷತ್ ಚುನಾವಣೆ ಘೋಷಣೆ ಆದಾಗಿನಿಂದ ಜೆಡಿಎಸ್ ಬಗ್ಗೆ ಒಂದಲ್ಲ ಒಂದು ಊಹೆಯ ಸುದ್ದಿಗಳು ಹರಿದಾಡುತ್ತಿವೆ. ಮಾಜಿ ಸಿಎಂ ಯಡಿಯೂರಪ್ಪ ಅವರು ನಮ್ಮ ಪಕ್ಷದ ಬೆಂಬಲ ಕೇಳಿದ ಮೇಲೆ ಮತ್ತಷ್ಟು ಊಹಾ ಪೆÇೀಹಗಳಿಗೆ ದಾರಿ ಆಯಿತು. ಅದಕ್ಕೆಲ್ಲ ತೆರೆ ಎಳೆಯುವ ನಿಟ್ಟಿನಲ್ಲಿ ಪಕ್ಷವು ತನ್ನ ಮತದಾರರಿಗೆ ಇಂದು ಸ್ಪಷ್ಟ ಸಂದೇಶ ನೀಡಿದೆ ಎಂದರು. ಪರಿಷತ್ ಚುನಾವಣಾ ಪ್ರಚಾರದ ಅಂತಿಮ ಹಂತಕ್ಕೆ ಬಂದಿದ್ದೇವೆ. ಈ ಚುನಾವಣೆಯಲ್ಲಿ ಜೆಡಿಎಸ್ ನಿಲುವಿನ ಬಗ್ಗೆ ಸಾಕಷ್ಟು ಕುತೂಹಲ ಮೂಡಿತ್ತು. ಬಿಜೆಪಿ ಜತೆ ಜೆಡಿಎಸ್ ಮೈತ್ರಿ ಮಾಡಿಕೊಳ್ಳುತ್ತದೆ ಎಂದು ಊಹಾಪೋಹದ ಸುದ್ದಿಗಳು ಭಾರೀ ಪ್ರಮಾಣದಲ್ಲಿ ಹರ ಡಿವೆ. ಕೆಲವರು ಇಂಥ ಸುದ್ದಿಗಳನ್ನು ಹರಡುವಂತೆ ಮಾಡಿದ್ದರು. ಎಂದಿನಂತೆ ಈ ಚುನಾವಣೆ ಘೋಷಣೆ ಆದ ಮೇಲೆಯೂ ಕಾಂಗ್ರೆಸ್ ನಾಯಕರು; ಜೆಡಿಎಸ್ ಪಕ್ಷವು ಬಿಜೆಪಿ ಬಿ ಟೀಮ್ ಎಂದು ಹೇಳುತ್ತಿದ್ದಾರೆ. ಅಲ್ಲದೆ, ಜೆಡಿಎಸ್ ಆರು ಕ್ಷೇತ್ರದಲ್ಲಿ ಚುನಾವಣೆಗೆ ನಿಲ್ಲಿಸಿ ಬೇರೆ ಕಡೆ ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ಕಾಂಗ್ರೆಸ್ ನಡೆಸುತ್ತಿ ರುವ ಅಪಪ್ರಚಾರ ಒಂದು ಕಡೆಯಾದರೆ, ಇನ್ನೊಂದೆಡೆ ಬಿಜೆಪಿ ಪಕ್ಷದಿಂದ ನಮಗೆ ಯಾವುದೇ ಬೆಂಬಲದ ಕೋರಿಕೆ ಬಂದಿಲ್ಲ. ಆದರೆ, ಯಡಿಯೂರಪ್ಪ ಅವರು ಜೆಡಿಎಸ್ ಅಭ್ಯರ್ಥಿಗಳು ಇಲ್ಲದ ಕಡೆ ನಮಗೆ ಬೆಂಬಲ ನೀಡಿ ಎಂದು ನನ್ನನ್ನು ಸಂಪರ್ಕಿಸಿ, ದೂರವಾಣಿ ಮೂಲಕ ಕೋರಿದ್ದರು. ಆದರೆ ಬಿಜೆಪಿ ಬೆಂಬಲ ಕೇಳಿಲ್ಲ. ಗೌರವ ಯುತವಾಗಿ ಬೆಂಬಲ ಕೇಳಿದ ಯಡಿಯೂರಪ್ಪ ಅವರಿಗೆ ನಾವೂ ಅಷ್ಟೇ ಗೌರವದಿಂದ ಸ್ವತಂತ್ರ ಸ್ಪರ್ಧೆ ಬಗ್ಗೆ ಹೇಳುತ್ತಿದ್ದೇನೆ. ನಾವು ಅಭ್ಯರ್ಥಿ ಹಾಕಿರುವ ಜಾಗದಲ್ಲಿ ಯಾರ ಜೊತೆ ಹೊಂದಾ ಣಿಕೆ ಮಾಡಿಕೊಂಡಿಲ್ಲ. ಹಾಸನ, ಮಂಡ್ಯ, ಬೆಂಗಳೂರು ಗ್ರಾಮಾಂತರ, ಕೋಲಾರ, ಮೈಸೂರು, ತುಮಕೂರು ಕ್ಷೇತ್ರಗಳಲ್ಲಿ ಮೂರು ಪಕ್ಷಗಳು ಸ್ಪರ್ಧೆ ಮಾಡಿವೆ. ಅಲ್ಲಿ ತ್ರಿಕೋನ ಸ್ಪರ್ಧೆ ಇದೆ. ಬಿಜೆಪಿ ಅಲ್ಲೆಲ್ಲಾ ನಮ್ಮ ಪಕ್ಷದ ವಿರುದ್ಧವೂ ಹೋರಾಟ ಮಾಡುತ್ತಿದೆ. ಹೀಗಾಗಿ ಹೊಂದಾಣಿಕೆ ಪ್ರಶ್ನೆ ಎಲ್ಲಿ ಬಂತು. ಎಲ್ಲರಿಗೂ ಕುತೂಹಲ ಇರುವುದು ಜೆಡಿಎಸ್ ಉಳಿದ 19 ಕ್ಷೇತ್ರಗಳಲ್ಲಿ ಏನು ಮಾಡುತ್ತದೆ ಎಂದು. ಆದರೆ, ನಾನು ಸ್ಥಳೀಯ ಮುಖಂಡರ ಜತೆ ಚರ್ಚೆ ಮಾಡಿದ್ದೇನೆ. ಅವರಿಗೆ ಸ್ಪಷ್ಟ ಆದೇಶ ಕೊಟ್ಟಿದ್ದೇನೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ 123 ಕ್ಷೇತ್ರಗಳನ್ನು ಗೆಲ್ಲುವುದಕ್ಕೆ ಏನು ಮಾಡಬೇಕು ಎನ್ನುವ ನಿಟ್ಟಿನಲ್ಲಿ ನಿಲುವು ತೆಗೆದುಕೊಳ್ಳುವಂತೆ ಹೇಳಿದ್ದೇನೆ ಎಂದರು.

Translate »