ರಾಗಿಣಿ, ಸಂಜನಾಗೆ ಸದ್ಯ ಜೈಲೇ ಗತಿ
ಮೈಸೂರು

ರಾಗಿಣಿ, ಸಂಜನಾಗೆ ಸದ್ಯ ಜೈಲೇ ಗತಿ

September 29, 2020

ಬೆಂಗಳೂರು: ಸ್ಯಾಂಡಲ್‍ವುಡ್‍ನಲ್ಲಿ ಡ್ರಗ್ಸ್ ನಂಟಿನ ಆರೋಪ ಪ್ರಕರಣಕ್ಕೆ ಸಂಬಂಧಿಸಿ, ಎನ್‍ಡಿಪಿಎಸ್ ವಿಶೇಷ ನ್ಯಾಯಾ ಲಯವು ನಟಿಯರಾದ ರಾಗಿಣಿ ಮತ್ತು ಸಂಜನಾರ ಜಾಮೀನು ಅರ್ಜಿ ವಜಾ ಗೊಳಿಸಿದೆ. ಹೀಗಾಗಿ ನಟಿಯರಿಬ್ಬರಿಗೂ ಮತ್ತಷ್ಟು ದಿನ ಜೈಲೇ ಗತಿಯಾಗಿದೆ. ಎನ್‍ಡಿಪಿಎಸ್ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಜಿ.ಎಂ.ಸೀನಪ್ಪ ಅವರು ಜಾಮೀನು ಅರ್ಜಿ ವಜಾಗೊಳಿಸಿ ಆದೇಶ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ರಾಗಿಣಿ ಮತ್ತು ಸಂಜನಾ ಹೈಕೋರ್ಟ್ ಮೊರೆ ಹೋಗುವ ನಿರೀಕ್ಷೆಯಿದೆ. ಮುಂದಿನ 2 ದಿನಗಳಲ್ಲಿ ನಟಿಯರ ಪರ ವಕೀಲರು ಹೈಕೋರ್ಟ್‍ಗೆ ಅರ್ಜಿ ಸಲ್ಲಿಸುವ ಸಾಧ್ಯತೆ ಯಿದೆ. ರವಿಶಂಕರ್, ಪ್ರಶಾಂತ್ ರಂಕಾ, ಅಭಿಸ್ವಾಮಿ, ವೈಭವ್ ಚೈನ್, ಪ್ರಶಾಂತ್ ರಾಜು ಜಾಮೀನು ಅರ್ಜಿ ವಿಚಾರಣೆ ಯನ್ನು ಸೆ.30 ಹಾಗೂ ವಿರೇನ್ ಖನ್ನ ಅರ್ಜಿ ವಿಚಾರಣೆ ಅ.1ಕ್ಕೆ ಮುಂದೂಡಲಾಗಿದೆ.

Translate »