ಅವಧಿಗೆ ಮುನ್ನ ಚುನಾವಣೆ ಇಲ್ಲ: ಅಮಿತ್ ಶಾ
ಮೈಸೂರು

ಅವಧಿಗೆ ಮುನ್ನ ಚುನಾವಣೆ ಇಲ್ಲ: ಅಮಿತ್ ಶಾ

April 3, 2022

ಬೆಂಗಳೂರು, ಏ. ೧- ರಾಜ್ಯದ ಆಡಳಿತ ಪಕ್ಷ ಬಿಜೆಪಿ ಈಗಿನಿಂದಲೇ ಚುನಾವಣೆ ಕಾರ್ಯ ತಂತ್ರ ಆರಂಭಿಸಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯ ನಾಯಕರಿಗೆ ೨೦೨೩ ವಿಧಾನಸಭೆ ಚುನಾ ವಣೆಯಲ್ಲಿ ೧೫೦ ಸ್ಥಾನ ಗೆಲ್ಲಲು ಬೇಕಾದ ನೀಲ ನಕ್ಷೆಯನ್ನು ಏಪ್ರಿಲ್ ೧೬ ರೊಳಗೆ ಸಿದ್ಧಪಡಿ ಸುವಂತೆ ಕಟ್ಟು ನಿಟ್ಟಿನ ಸೂಚನೆ ನೀಡಿದ್ದಾರೆ.

ಶುಕ್ರವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ನಡೆದ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಮುಂಬರುವ ವಿಧಾನಸಭೆ ಚುನಾ ವಣೆಯ ಕಾರ್ಯತಂತ್ರದ ಕುರಿತು ಸುದೀರ್ಘ ಚರ್ಚೆ ನಡೆದಿದೆ. ಹಾಲಿ ಇರುವ ೧೨೦ ಶಾಸಕರ ಸಂಖ್ಯೆಯನ್ನು ಮುಂದಿನ ಚುನಾವಣೆಯಲ್ಲಿ ೧೫೦ಕ್ಕೆ ಹೆಚ್ಚಿಸಲು ಬೇಕಾದ ನೀಲ ನಕ್ಷೆಯನ್ನು ಏಪ್ರಿಲ್ ೧೬ ರೊಳಗೆ ಸಿದ್ಧಪಡಿಸಿಕೊಂಡು ಏಪ್ರಿಲ್ ೧೬ಕ್ಕೆ ರಾಜ್ಯಕ್ಕೆ ಆಗಮಿಸುತ್ತಿರುವ ಬಿಜೆಪಿ ರಾಷ್ಟಿçÃಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಕೈಗೆ ನೀಡುವಂತೆ ಅಮಿತ್ ಶಾ ರಾಜ್ಯ ನಾಯಕರಿಗೆ ಟಾರ್ಗೆಟ್ ನೀಡಿದ್ದಾರೆ.

ಈ ಹಿಂದೆ ಎರಡು ಬಾರಿ ಆದಂತೆ ಬಿಜೆಪಿ ಬಹುಮತದ ಕೊರತೆ ಎದುರಿಸದಂತೆ ನೋಡಿಕೊಳ್ಳಬೇಕು. ಟಾರ್ಗೆಟ್ ೧೫೦ ಎಂದು ಕೇವಲ ಬಾಯಿ ಮಾತಲ್ಲೇ ಹೇಳಿದರೆ ಸಾಲದು. ಅಷ್ಟು ಶಾಸಕರನ್ನು ಗೆಲ್ಲಿಸಿ ಕೊಂಡು ಬರಲು ಎಲ್ಲ ನಾಯಕರಿಗೂ ಜವಾಬ್ದಾರಿ ಹಂಚಿಕೆ ಮಾಡಿಕೊಳ್ಳಬೇಕು. ಹಳೇ ಮೈಸೂರು ಭಾಗ, ಉತ್ತರ ಕರ್ನಾಟಕ, ಕರಾವಳಿ, ಮಧ್ಯ ಕರ್ನಾಟಕ ಭಾಗಗಳಲ್ಲಿ ಪಕ್ಷ ನ್ಯೂನ್ಯತೆಗಳನ್ನು ಪತ್ತೆ ಹಚ್ಚಿ ಪಕ್ಷವನ್ನು ಬಲಗೊಳಿಸುವಂತೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

ರಾಜ್ಯ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸಲು ಈಗಿನಿಂದಲೇ ಕಾರ್ಯತಂತ್ರ ರೂಪಿಸುವಂತೆ ಸೂಚಿಸಿದ್ದಾರೆ. ಬಿಜೆಪಿ ಶಾಸಕರು ಇಲ್ಲದಿರುವ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರಲು ಬೇಕಾದ ಸಿದ್ಧತೆ ಮಾಡಿ ಕೊಳ್ಳಲು ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ. ಪಕ್ಷದವರೇ ಗೆಲ್ಲುವ ಅಭ್ಯರ್ಥಿಗಳಿದ್ದರೆ, ಅಂತಹ ಕ್ಷೇತ್ರಗಳಿಗೆ ಬೇರೆ ಪಕ್ಷಗಳಿಂದ ಕರೆದುಕೊಂಡು ಬಾರದಂತೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಪಕ್ಷದಲ್ಲಿ ಗೆಲ್ಲುವ ಸಾಮರ್ಥ್ಯ ಇರುವ ಅಭ್ಯರ್ಥಿಗಳಿಲ್ಲದ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್‌ನಿಂದ ಬಿಜೆಪಿಗೆ ಬರುವವರನ್ನು ಸೇರಿಸಿಕೊಳ್ಳುವಂತೆ ಅಮಿತ್ ಶಾ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

೨೦೨೩ಕ್ಕೆ ಯಾವುದೇ ಕಾರಣಕ್ಕೂ ಬಿಜೆಪಿ ಕರ್ನಾಟಕದಲ್ಲಿ ಅಧಿಕಾರ ಕಳೆದುಕೊಳ್ಳಬಾರದು. ಆ ನಿಟ್ಟಿನಲ್ಲಿ ಎಲ್ಲ ನಾಯಕರು ಒಗ್ಗಟ್ಟು ಪ್ರದರ್ಶನ ಮಾಡುವಂತೆ ಅಮಿತ್ ಶಾ ನಾಯಕರುಗಳಿಗೆ ಸೂಚನೆ ನೀಡಿದ್ದಾರೆ. ಸಂಘಟಿತ ಪ್ರಯತ್ನ ನಡೆಸಿದರೆ ಮಾತ್ರ ಮರಳಿ ಅಧಿಕಾರಕ್ಕೆ ಬರಲು ಸಾಧ್ಯ. ಆ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತರಾಗುವಂತೆ ಅಮಿತ್ ಶಾ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

ಅವಧಿ ಪೂರ್ವ ಚುನಾವಣೆ ಇಲ್ಲ: ಪಂಚ ರಾಜ್ಯಗಳ ಚುನಾವಣೆಯ ಗೆಲುವಿನಿಂದ ಬೀಗುತ್ತಿರುವ ಬಿಜೆಪಿ, ಡಿಸೆಂಬರ್‌ನಲ್ಲಿ ಗುಜರಾತ್ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ಅದೇ ವೇಳೆ, ಕರ್ನಾಟಕ ವಿಧಾನ ಸಭೆಗೂ ಚುನಾವಣೆ ನಡೆಸಲು ಚಿಂತನೆ ನಡೆದಿದೆ ಎಂಬ ಮಾತುಗಳು ಕೇಳಿ ಬರುತ್ತಿದೆ. ಈ ಕುರಿತಂತೆಯೂ ಸಭೆಯಲ್ಲಿ ಚರ್ಚೆ ನಡೆದಿದೆ ಎನ್ನಲಾಗಿದೆ. ಆದರೆ ಅವಧಿ ಪೂರ್ವ ಚುನಾವಣೆ ನಡೆಸದಿರಲು ಬಿಜೆಪಿ ನಾಯಕರು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.

ಸAಪುಟ ಚರ್ಚೆಯಿಲ್ಲ: ಬಹು ನಿರೀಕ್ಷಿತ ಸಂಪುಟ ಪುನಾರಚನೆ ಅಥವಾ ವಿಸ್ತರಣೆ ಕುರಿತು ಕೋರ್ ಕಮಿಟಿ ಸಭೆಯಲ್ಲಿ ಯಾವುದೇ ಪ್ರಸ್ತಾಪ ಮಾಡಿಲ್ಲ ಎಂದು ತಿಳಿದು ಬಂದಿದೆ. ಈ ಬಗ್ಗೆ ಅಮಿತ್ ಶಾ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪ್ರತ್ಯೇಕವಾಗಿ ಸೂಚನೆ ನೀಡುವ ಸಾಧ್ಯತೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ. ಅಲ್ಲದೇ ಹಾಲಿ ಇರುವ ನಿಗಮ ಮಂಡಳಿ ಅಧ್ಯಕ್ಷರ ಬದಲಾವಣೆ ಕುರಿ ತಂತೆಯೂ ರಾಜ್ಯ ಮಟ್ಟದ ನಾಯಕರುಗಳೇ ಚರ್ಚಿಸಿ ತೀರ್ಮಾನ ಕೈಗೊಳ್ಳುವಂತೆ ಅಮಿತ್ ಶಾ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

Translate »