ಗುರುತಿನ ಚೀಟಿ ಇದ್ದರೂ ಮತದಾರರ ಪಟ್ಟಿಯಲ್ಲಿ ಹೆಸರಿಲ್ಲ: ಶಾಸಕ ನಾಗೇಂದ್ರ ಅಸಮಾಧಾನ
ಮೈಸೂರು

ಗುರುತಿನ ಚೀಟಿ ಇದ್ದರೂ ಮತದಾರರ ಪಟ್ಟಿಯಲ್ಲಿ ಹೆಸರಿಲ್ಲ: ಶಾಸಕ ನಾಗೇಂದ್ರ ಅಸಮಾಧಾನ

April 19, 2019

ಮೈಸೂರು: ಮತದಾನ ಗುರುತಿನ ಚೀಟಿ ಇದ್ದರೂ ಸಾಕಷ್ಟು ಮತದಾರರನ್ನು ಪಟ್ಟಿಯಲ್ಲಿ ಕೈ ಬಿಡಲಾಗಿದೆ. ಇದಕ್ಕೆ ಚುನಾವಣಾ ಅಧಿಕಾರಿಗಳ ಲೋಪವೇ ಕಾರಣ ಎಂದು ಶಾಸಕ ಎಲ್.ನಾಗೇಂದ್ರ ಹೇಳಿದರು.

ಚುನಾವಣೆ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ‘ಮೈಸೂರು ಮಿತ್ರ’ನಿಗೆ ಪ್ರತಿಕ್ರಿಯಿ ಸಿದ ಅವರು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮತದಾನ ಮಾಡಿದವರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗಿದೆ. ಸಾಕಷ್ಟು ಮತದಾರರು ಈ ಸಂಬಂಧ ನನಗೆ ಕರೆ ಮಾಡಿ ತಿಳಿಸಿದ್ದಾರೆ. ಅಲ್ಲದೆ ವಿದೇಶದಿಂದ ನನ್ನ ಸ್ನೇಹಿತರು ಮತದಾನ ಮಾಡಲು ಬಂದಿದ್ದರು. ಅವರ ಹೆಸರನ್ನು ತೆಗೆದು ಹಾಕಿದ್ದಾರೆ ಎಂದರು.

ಬಿಜೆಪಿಗೆ ಎಲ್ಲೆಲ್ಲಿ ಹೆಚ್ಚು ಮತಗಳು ಬರುವ ಸಾಧ್ಯತೆ ಇದೆಯೋ ಅಲ್ಲೆಲ್ಲಾ ಈ ರೀತಿಯಾಗಿದೆ. ಇದನ್ನು ನೋಡಿದರೆ ಬಿಜೆಪಿ ಅಭ್ಯರ್ಥಿಯನ್ನು ಸೋಲಿಸಲು ಮಾಡಿರುವ ಷಡ್ಯಂತ್ರ ಎಂಬಂತೆ ಕಾಣುತ್ತಿದೆ. ಆದರೂ ಮೋದಿಯವರನ್ನು ಬೆಂಬಲಿ ಸಲು ದೊಡ್ಡ ಸಂಖ್ಯೆಯಲ್ಲಿ ಜನರು ಮತದಾನ ಮಾಡಿದ್ದಾರೆ ಎಂದು ತಿಳಿಸಿದರು.

ಬೆಳಿಗ್ಗೆಯಿಂದಲೂ ಚಾಮರಾಜ ವಿಧಾನಸಭಾ ಕ್ಷೇತ್ರದ ಹಲವಾರು ಮತಗಟ್ಟೆ ಗಳಿಗೆ ಭೇಟಿ ನೀಡಿದ್ದೇನೆ. ಮತದಾರರು ಹಣ ಮತ್ತು ಆಮಿಷಕ್ಕೆ ಒಳಗಾಗದೆ ಮತದಾನ ಮಾಡಿದ್ದಾರೆ. ಬಿಜೆಪಿ ಅಭ್ಯರ್ಥಿ ಪ್ರತಾಪ್ ಸಿಂಹ ಅವರು ಗೆದ್ದೆ ಗೆಲ್ಲುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Translate »