ಮೈಸೂರಿಗೆ ಸ್ಮಾರ್ಟ್ ಸಿಟಿ ಭಾಗ್ಯವಿಲ್ಲ
ಮೈಸೂರು

ಮೈಸೂರಿಗೆ ಸ್ಮಾರ್ಟ್ ಸಿಟಿ ಭಾಗ್ಯವಿಲ್ಲ

April 29, 2022

ಬೆಂಗಳೂರು, ಏ.೨೮(ಕೆಎಂಶಿ)-ಮೈಸೂರು ಕೇಂದ್ರವನ್ನು ಸ್ಮಾರ್ಟ್ ಸಿಟಿಗೆ ಸೇರಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ರಾಜ್ಯ ಸರ್ಕಾರಕ್ಕೆ ಸ್ಪಷ್ಟಪಡಿಸಿದೆ.

ಸದ್ಯಕ್ಕೆ ರಾಷ್ಟçದಲ್ಲಿ ಯಾವುದೇ ನಗರ ಗಳನ್ನು ಸ್ಮಾರ್ಟ್ ಸಿಟಿ ಯೋಜನೆಯಡಿ ಕೈಗೆತ್ತಿಕೊಳ್ಳುವುದಿಲ್ಲ, ಅದರ ಬದಲು ಪ್ರಮುಖ ನಗರಗಳಿಗೆ ವಿವಿಧ ಯೋಜನೆ ಯಡಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಆರ್ಥಿಕ ನೆರವು ನೀಡುವುದಾಗಿ ಕೇಂದ್ರ ನಗರಾಭಿವೃದ್ಧಿ ಸಚಿವಾಲಯ ತಿಳಿಸಿದೆ.

ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ನಗರಾಭಿವೃದ್ಧಿ ಸಚಿವ ಭೈರತಿ ಬಸವ ರಾಜ್, ಹಾಲಿ ಕೈಗೆತ್ತಿಕೊಂಡಿರುವ ಸ್ಮಾರ್ಟ್ ಸಿಟಿಗಳ ಕಾಮಗಾರಿ ಶೇ.೭೦ರಿಂದ ೮೦ರಷ್ಟು ಪೂರ್ಣಗೊಂಡಿದೆ. ಮುಂದಿನ ೨೦೨೩ರ ಮಾರ್ಚ್ ವೇಳೆಗೆ ಸ್ಮಾರ್ಟ್ ಸಿಟಿ ಕಾರ್ಯ ಪೂರ್ಣಗೊಂಡು ರಾಷ್ಟçಕ್ಕೆ ಸಮರ್ಪಣೆ ಮಾಡಲಾಗುವುದು ಎಂದರು.

Translate »