ಇರ್ವಿನ್ ರಸ್ತೆಯಲ್ಲಿ ಸಂಚಾರ ನಿರ್ಬಂಧ 10 ದಿನ ಜಾರಿ ಇಲ್ಲ
ಮೈಸೂರು

ಇರ್ವಿನ್ ರಸ್ತೆಯಲ್ಲಿ ಸಂಚಾರ ನಿರ್ಬಂಧ 10 ದಿನ ಜಾರಿ ಇಲ್ಲ

March 17, 2020

ಮೈಸೂರು,ಮಾ.16(ಎಂಟಿವೈ)- ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಲಿ ರುವ ಹಿನ್ನೆಲೆಯಲ್ಲಿ ಮೈಸೂರಿನ ಇರ್ವಿನ್ ರಸ್ತೆಯಲ್ಲಿ ಮುಂದಿನ ಮೂರು ತಿಂಗಳವರೆಗೆ ವಾಹನ ಸಂಚಾರ ನಿರ್ಬಂಧಿಸಲು ಉದ್ದೇಶಿಸಿದ್ದನ್ನು 10 ದಿನಗಳ ಕಾಲ ಮುಂದೂಡಲಾಗಿದೆ ಎಂದು ಪಾಲಿಕೆ ಆಯುಕ್ತ ಗುರುದತ್ತ ಹೆಗಡೆ ತಿಳಿಸಿದ್ದಾರೆ.

ನಗರ ಪೊಲೀಸ್ ಇಲಾಖೆ ಹೊರಡಿಸಿದ್ದ ಆದೇಶದಂತೆ ಭಾನುವಾರ(ಮಾ.15) ದಿಂದ ಇರ್ವಿನ್ ರಸ್ತೆಯಲ್ಲಿ ಎರಡೂ ಕಡೆಯಿಂದಲೂ ವಾಹನ ಸಂಚಾರ ನಿರ್ಬಂಧಿಸ ಲಾಗಿತ್ತು. ಆದರೆ ರಸ್ತೆ ಅಗಲೀಕರಣ ಕಾಮಗಾರಿ ದೊಡ್ಡ ಪ್ರಮಾಣದಲ್ಲಿ ಆರಂಭವಾಗದ ಕಾರಣ ವಾಹನ ಸಂಚಾರ ನಿರ್ಬಂಧ ಇನ್ನೂ 10 ದಿನ ಮುಂದೂಡಲಾಗಿದೆ. ಸಣ್ಣ ಪುಟ್ಟ ಕಾಮಗಾರಿ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಅಡಚಣೆಯಾಗು ವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಂಚಾರ ನಿರ್ಬಂಧಿಸುವ ವಿಷಯದಲ್ಲಿ ಸಣ್ಣ ಬದಲಾವಣೆ ಮಾಡಲಾಗಿದೆ ಎಂದು ಅವರು `ಮೈಸೂರು ಮಿತ್ರ’ನಿಗೆ ಸ್ಪಷ್ಟಪಡಿಸಿದ್ದಾರೆ.

Translate »