ಸ್ಥಳೀಯ ಸಂಸ್ಥೆ ಚುನಾವಣೆಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ
ಕೊಡಗು

ಸ್ಥಳೀಯ ಸಂಸ್ಥೆ ಚುನಾವಣೆಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ

August 10, 2018

ಮಡಿಕೇರಿ: ಸೋಮವಾರಪೇಟೆ, ಕುಶಾಲನಗರ ಮತ್ತು ವಿರಾಜಪೇಟೆ ಪಟ್ಟಣ ಪಂಚಾಯತ್ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ನಾಮಪತ್ರ ಸಲ್ಲಿಕಾ ಪ್ರಕ್ರಿಯೆಯು ಆಗಸ್ಟ್ 10 ರಿಂದ ಆರಂಭವಾಗಲಿದೆ. ಆಗಸ್ಟ್ 10 ರಂದು ಜಿಲ್ಲಾಧಿಕಾರಿಯವರು ಚುನಾವಣಾ ಅಧಿ ಸೂಚನೆ ಹೊರಡಿಸಲಿದ್ದು, ಅಂದಿನಿಂದಲೇ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ನಡೆಯಲಿದೆ.

ಆಗಸ್ಟ್ 17 ರಂದು ನಾಮಪತ್ರ ಸಲ್ಲಿ ಸಲು ಕೊನೆ ದಿನವಾಗಿದೆ. ಆಗಸ್ಟ್ 18 ರಂದು ನಾಮಪತ್ರ ಪರಿಶೀಲನಾ ಕಾರ್ಯ ನಡೆಯಲಿದೆ. ಆಗಸ್ಟ್ 20 ರಂದು ಉಮೇ ದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಕೊನೆ ದಿನವಾಗಿದೆ, ಆಗಸ್ಟ್ 29 ರಂದು ಮತದಾನ ಅವಶ್ಯವಿದ್ದರೆ, ಮತದಾನವು ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯ ವರೆಗೆ ನಡೆಯಲಿದೆ. ಆಗಸ್ಟ್ 31 ರಂದು ಮರು ಮತದಾನ ಇದ್ದಲ್ಲಿ ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆ ವರೆಗೆ ನಡೆಯಲಿದೆ. ಸೆಪ್ಟೆಂಬರ್ 01 ರಂದು ಬೆಳಗ್ಗೆ 8 ಗಂಟೆಯಿಂದ ತಾಲೂಕು ಕೇಂದ್ರ ಸ್ಥಳದಲ್ಲಿ ಮತ ಎಣಿಕೆ ನಡೆಯಲಿದೆ.

Translate »