ಮೂಲಭೂತ ಸೌಕರ್ಯವಿಲ್ಲದ ನಿವೇಶನ ಮಾರಾಟ ಮಾಡುವಂತಿಲ್ಲ
ಹಾಸನ

ಮೂಲಭೂತ ಸೌಕರ್ಯವಿಲ್ಲದ ನಿವೇಶನ ಮಾರಾಟ ಮಾಡುವಂತಿಲ್ಲ

February 26, 2019

ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್
ಹಾಸನ: ಸಂಪೂರ್ಣವಾಗಿ ಮೂಲಭೂತ ಸೌಕರ್ಯ ಇರುವಂತಹ ನಿವೇಶನಗಳನ್ನು ಮಾತ್ರವೇ ಮಾರಾಟ ಮಾಡಬೇಕು ಎಂದು ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್ ತಿಳಿಸಿದರು.

ನಗರದ ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿಂದು ಆಯೋಜಿಸಿದ್ದ ಹುಡಾ ಅದಾಲತ್ ಅರ್ಜಿ ವಿತರಣೆ ಮತ್ತು ಸ್ವೀಕೃತಿ ಸಭೆಯಲ್ಲಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ ಮಾತನಾಡಿದ ಅವರು, ಶೇ.100 ರಷ್ಟು ಮೂಲಭೂತ ಸೌಕರ್ಯವಿರುವ ನಿವೇಶನಗಳನ್ನು ಮಾತ್ರವೇ ಮಾರಾಟ ಮಾಡಿ. ಸಮಸ್ಯೆಗಳಿರುವಂತಹ ನಿವೇಶನ ಗಳನ್ನು ಮಾರಾಟ ಮಾಡಬೇಡಿ ಎಂದು ನಗರಾಭಿವೃದ್ಧಿ ಪ್ರಾಧಿಕಾರದ ಅಧಿಕಾರಿ ಗಳಿಗೆ ಸೂಚನೆ ನೀಡಿದರು.

ಸುಮಾರು 30ಕ್ಕೂ ಅಧಿಕ ಅರ್ಜಿಗಳ ಸಮಸ್ಯೆಗಳನ್ನು ಆಲಿಸಿದ ಅವರು, ಇಂದು ಸಾಕಷ್ಟು ಸಮಸ್ಯೆಗಳ ಕುರಿತು ಅರ್ಜಿ ಗಳನ್ನು ಸ್ವೀಕರಿಸಲಾಗಿದೆ. ಅದರಲ್ಲಿ ರಸ್ತೆ ನಿರ್ಮಾಣ, ಮನೆ ನಿರ್ಮಾಣದ ಜಾಗ ದಲ್ಲಿ ಪಾರ್ಕ್ ವ್ಯವಸ್ಥೆಗೆ ಮುಂದಾಗಿರು ವುದು ಸೇರಿದಂತೆ ಹಲವು ರೀತಿಯ ಕುಂದು ಕೊರತೆಗಳು ಕೇಳಿಬಂದವು. ಅಧಿಕಾರಿಗಳು ಇವುಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿ ಇತ್ಯರ್ಥ ಪಡಿಸಬೇಕು ಎಂದು ಸೂಚನೆ ನೀಡಿದರು.

ಕೆಲ ಅರ್ಜಿಗಳಲ್ಲಿ ಮೂಲ ದಾಖಲೆ ಗಳು ಸರಿಯಾಗಿ ಇರದ ಕಾರಣ ಅಂತಹ ದಾಖಲಾತಿ ಇಲ್ಲದ ಅರ್ಜಿಗಳನ್ನು ಪರಿಶೀ ಲಿಸಿ ಜಾಗಗಳ ಬಗ್ಗೆ ಯಾವುದೇ ತೀರ್ಮಾನ ಕೈಗೊಳ್ಳಲು ಸಾಧ್ಯವಿಲ್ಲ. ಅವುಗಳನ್ನು ಜಿಲ್ಲಾ ಧಿಕಾರಿಗಳ ಮೂಲಕ ಪರಿಶೀಲಿಸಿ, ತನಿಖೆ ನಡೆಸಬೇಕು. ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಿರ್ಮಾಣವಾಗುವ ನೂತನ ಬಡಾವಣೆಗಳಲ್ಲಿ ರಸ್ತೆ ನಿರ್ಮಾಣ, ಚರಂಡಿ ವ್ಯವಸ್ಥೆ, ಕುಡಿಯುವ ನೀರಿನ ಸೌಲಭ್ಯ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಬೇಕು, ನಗರಾ ಭಿವೃದ್ಧಿ ಪ್ರಾಧಿಕಾರ ಇನ್ನಷ್ಟು ಜನ ಸ್ನೇಹಿಯಾಗಿ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.

ಶಾಸಕ ಪ್ರೀತಂ ಜೆ.ಗೌಡ ಮಾತನಾಡಿ, ಅರ್ಹ ಫಲಾನುಭವಿಗಳಿಗೆ ಸರಿಯಾದ ರೀತಿಯಲ್ಲಿ ಖಾತೆಗಳನ್ನು ಮಾಡಿಕೊಡ ಬೇಕು. ನಗರಾಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಹೆಚ್ಚಿನ ವಿವೇಚನೆ ಮತ್ತು ಬದ್ಧತೆಯಿಂದ ಕೆಲಸ ನಿರ್ವಹಿಸಬೇಕು ಎಂದು ಹೇಳಿದರು.
ನಿವೇಶನಗಳನ್ನು ಖರೀದಿಸಿದ ಜನರು ಸಚಿವರ ಮುಂದೆ ತಮ್ಮ ಸಮಸ್ಯೆಗಳನ್ನು ನಿವಾರಿಸುವಂತೆ ಅಳಲು ತೋಡಿಕೊಂ ಡರು. ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶ್ವೇತಾ ದೇವರಾಜು, ನಗರಾಭಿ ವೃದ್ಧಿ ಪ್ರಾಧಿಕಾರದ ಆಯುಕ್ತ ರಮೇಶ್ ಹಾಗೂ ಇತರೆ ಅಧಿಕಾರಿಗಳು ಹಾಜರಿದ್ದರು.

ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಏಕಗವಾಕ್ಷಿ ವ್ಯವಸ್ಥೆ
ಹಾಸನ: ನಗರಾಭಿವೃದ್ಧಿ ಬಡಾವಣೆಗಳಲ್ಲಿರುವ ಮೂಲಭೂತ ಸೌಲಭ್ಯಗಳ ಕೊರತೆಯನ್ನು ಅತೀ ಶೀಘ್ರದಲ್ಲಿ ಸರಿಪಡಿಸುವ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್ ತಿಳಿಸಿದರು. ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಹುಡಾ ಅದಾಲತ್ ಕಾರ್ಯಕ್ರಮದ ನಂತರ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದಲ್ಲಿನ ಜನಸಾಮಾನ್ಯರ ಸಮಸ್ಯೆಗಳನ್ನು ತಿಳಿಯಲು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ನಗರಾಭಿವೃದ್ಧಿಗೆ ಸಂಬಂಧಿಸಿದಂತೆ ಇರುವ ಸಮಸ್ಯೆಗಳನ್ನು ಬಗೆಹರಿಸಲು ಅಧಿ ಕಾರಿಗಳಿಗೆ ಸೂಚಿಸಲಾಗಿದೆ ಹಾಗೂ ಯಾವುದಾದರೂ ಮೋಸದ ಚಟುವಟಿಕೆಗಳು ನಡೆದಿರುವುದು ಕಂಡುಬಂದಲ್ಲಿ ಜಿಲ್ಲಾಧಿಕಾರಿಗಳಿಗೆ ಅಥವಾ ಅದಕ್ಕೆ ಸಂಬಂಧಿಸಿದ ಅಧಿಕಾರಿಗಳ ಮುಖಾಂತರ ತನಿಖೆ ನಡೆಸಿ ಬಗೆಹರಿಸುವ ಭರವಸೆ ನೀಡಿದರು.

ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಶಿಸ್ತು ಬದ್ಧತೆಯನ್ನು ಕಾಪಾಡಲು ಏಕಗವಾಕ್ಷಿ ವ್ಯವಸ್ಥೆ ಯನ್ನು ಜಾರಿಗೆ ತರಲಿದ್ದೇವೆ. ಇದರಿಂದ ಅರ್ಜಿ ಸಲ್ಲಿಕೆ, ಬಿಲ್ಡಿಂಗ್ ಮಾಹಿತಿ, ಲೇಔಟ್‍ನ ಮಾಹಿತಿ, ಭೂಮಿಯ ಮತ್ತಿತರ ಮಾಹಿತಿಗಳನ್ನು ಆನ್‍ಲೈನ್ ಮೂಲಕ ಸಂಗ್ರಹಿಸ ಬಹುದಾಗಿದೆ. ಇದಲ್ಲದೆ ಅಧಿಕಾರಿಗಳು ಸಾರ್ವಜನಿಕರ ಕಡತಗಳ ವಿಲೇವಾರಿ ಮಾಡುವುದನ್ನು ತಡ ಮಾಡಿದಲ್ಲಿ ಅದರ ಮಾಹಿತಿ ನೇರವಾಗಿ ಮೇಲಧಿಕಾರಿಗಳಿಗೆ ತಲುಪುತ್ತದೆ ಎಂದು ತಿಳಿಸಿದರು.

ಮುಂಬರುವ ದಿನಗಳಲ್ಲಿ ಸಂಪೂರ್ಣ ಮೂಲಭೂತ ಸೌಲಭ್ಯಗಳು ಪೂರ್ಣ ರೀತಿಯಲ್ಲಿ ದೊರಕಿದರೆ ಮಾತ್ರ ಲೇಔಟ್‍ಗಳ ನಿರ್ಮಾಣಕ್ಕೆ ಅನುಮತಿ ನೀಡಲಾಗುವುದು. ಇಲ್ಲದಿದ್ದಲ್ಲಿ ನಿರ್ಮಾಣ ಮಾಡಿದ ನಿವೇಶನಗಳನ್ನು ಮಾರಾಟ ಮಾಡಲು ಅನುಮತಿ ನೀಡುವುದಿಲ್ಲ ಎಂದು ತಿಳಿಸಿದರು.

Translate »