ಮಡಿಕೇರಿ: ಜಿಲ್ಲೆಯಲ್ಲಿ ಸಾಧಾರಣ ಮಳೆ ಮುಂದುವರೆದಿದ್ದು, ಕೃಷಿ ಚಟುವಟಿಕೆ ಗರಿಗೆದರಿದೆ. ಭತ್ತ ಕೃಷಿಗೆ ನಾಟಿ ಪ್ರಕ್ರಿಯೆ ನಡೆಯುತ್ತಿದ್ದು, ಈಗಾಗಲೇ ಹಲವು ಕಡೆ ನಾಟಿ ಪ್ರಾರಂಭವಾಗಿದೆ.
ಜಿಲ್ಲೆಯಾದ್ಯಂತ ಸುಮಾರು 9,800 ಹೆಕ್ಟೇರ್ ಪ್ರದೇಶದಲ್ಲಿ ಭತ್ತ ನಾಟಿ ಆಗಿದೆ. ಹಾಗೆಯೇ ಮುಸುಕಿನ ಜೋಳ 1800 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಯಾಗಿದೆ. ಮಡಿಕೇರಿ ತಾಲೂಕಿ ನಲ್ಲಿ 6500 ಹೆಕ್ಟೇರ್ ಪ್ರದೇಶದ ಗುರಿಗೆ 850 ಹೆಕ್ಟೇರ್ ಪ್ರದೇಶದಲ್ಲಿ ಭತ್ತ ನಾಟಿಯಾಗಿದೆ. ಸೋಮವಾರಪೇಟೆ ತಾಲ್ಲೂಕಿನಲ್ಲಿ 10000 ಹೆಕ್ಟೇರ್ ಪ್ರದೇಶದ ಗುರಿಯಲ್ಲಿ 1,103 ಹೆಕ್ಟೇರ್ ಪ್ರದೇಶದಲ್ಲಿ ನಾಟಿಯಾಗಿದೆ. ವಿರಾಜಪೇಟೆ ತಾಲ್ಲೂಕಿನಲ್ಲಿ 14,000 ಗುರಿಯಲ್ಲಿ 7,820 ಹೆಕ್ಟೇರ್ ಪ್ರದೇಶದಲ್ಲಿ ನಾಟಿ ಕಾರ್ಯ ಪೂರ್ಣಗೊಂಡಿದೆ.
ಒಟ್ಟಾರೆ ಭತ್ತ ನಾಟಿಗೆ ಸಂಬಂಧಿಸಿದಂತೆ 30,500 ಗುರಿಯಲ್ಲಿ ಈಗಾಗಲೇ 9,800 ಹೆಕ್ಟೇರ್ ಪ್ರದೇಶದಲ್ಲಿ ನಾಟಿ ಕಾರ್ಯ ಪೂರ್ಣಗೊಂಡಿದೆ. ಹಾಗೆಯೇ ಸೋಮವಾರಪೇಟೆ ತಾಲ್ಲೂಕಿನಲ್ಲಿ ಮುಸುಕಿನ ಜೋಳ ಸಾವಿರ ಗುರಿಯಲ್ಲಿ ಈಗಾಗಲೇ 1,800 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಕಾರ್ಯ ಪೂರ್ಣಗೊಂಡಿದೆ ಎಂದು ಕೃಷಿ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ರಸಗೊಬ್ಬರ ಸಾಕಷ್ಟು ದಾಸ್ತಾನು ಇದ್ದು, ರೈತರು ತಮಗೆ ಬೇಕಾದ ರಸಗೊಬ್ಬರವನ್ನು ಸಹಕಾರ ಸಂಘಗಳಲ್ಲಿ ಪಡೆದುಕೊಳ್ಳಬಹುದಾಗಿದೆ.