ಕೋಟ್ಪಾ ಕಾಯ್ದೆ ಪರಿಣಾಮಕಾರಿ ಅನುಷ್ಠಾನಕ್ಕೆ ಸೂಚನೆ ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಎಲ್.ಆನಂದ್
ಚಾಮರಾಜನಗರ

ಕೋಟ್ಪಾ ಕಾಯ್ದೆ ಪರಿಣಾಮಕಾರಿ ಅನುಷ್ಠಾನಕ್ಕೆ ಸೂಚನೆ ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಎಲ್.ಆನಂದ್

December 17, 2019

ಚಾಮರಾಜನಗರ, ಡಿ.16- ತಂಬಾಕು ಉತ್ಪನ್ನಗಳ ಉತ್ಪಾದನೆ, ಸರಬರಾಜು, ಮಾರಾಟದ ಮೇಲಿನ ನಿಯಂತ್ರಣಕ್ಕಾಗಿ ಜಾರಿಗೆ ತರಲಾಗಿರುವ ಕೋಟ್ಪಾ-2003 ಕಾಯ್ದೆಯನ್ನು ಜಿಲ್ಲೆಯಲ್ಲಿ ಪರಿಣಾಮ ಕಾರಿಯಾಗಿ ಅನುಷ್ಠಾನಗೊಳಿಸಲು ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಎಲ್. ಆನಂದ್ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣ ದಲ್ಲಿಂದು ನಡೆದ ಜಿಲ್ಲಾ ತಂಬಾಕು ನಿಯಂ ತ್ರಣ ಘಟಕದ ಜಿಲ್ಲಾ ಮಟ್ಟದ ತ್ರೈಮಾಸಿಕ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ತಂಬಾಕು ನಿಯಂತ್ರಣ ಕಾನೂನು ಕೋಟ್ಪಾ-2003ರ ಸೆಕ್ಷನ್ 4ರ ಪ್ರಕಾರ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವುದನ್ನು ನಿಷೇಧಿಸಿಲಾಗಿದೆ. ಕಚೇರಿ, ಆಸ್ಪತ್ರೆ, ರೆಸ್ಟೋರೆಂಟ್, ಬಸ್, ರೈಲು ನಿಲ್ದಾಣ, ಬೇಕರಿ, ಟೀ ಸ್ಟಾಲ್, ಹೋಟೆಲ್ ಮತ್ತಿತರ ಸಾರ್ವಜನಿಕ ಪ್ರದೇಶಗಳಲ್ಲಿ ಧೂಮ ಪಾನ ನಿಷೇಧ ಆದೇಶವನ್ನು ಉಲ್ಲಂಘಿಸಿ ದಲ್ಲಿ ದಂಡ ವಸೂಲಿ ಮಾಡಬೇಕು. ಇದರ ಕುರಿತು ವ್ಯಾಪಕವಾಗಿ ಜಾಗೃತಿ ಮೂಡಿ ಸುವ ಕೆಲಸ ನಡೆಯಬೇಕು ಎಂದರು.

ಸಾರ್ವಜನಿಕ ಸ್ಥಳದಲ್ಲಿ ಧೂಮಪಾನ ಮಾಡುವುದು ಅಪರಾಧವೆಂಬ ಅರಿವು ಮೂಡಿಸುವ ಫಲಕಗಳನ್ನು ಪ್ರದರ್ಶಿಸ ಬೇಕು. ಧೂಮಪಾನ ಆದೇಶ ಉಲ್ಲಂಘನೆ ಯಾದಲ್ಲಿ ವಿಧಿಸಲಾಗುವ ದಂಡ ಹಾಗೂ ಯಾರಿಗೆ ದೂರು ಸಲ್ಲಿಸಬೇಕೆಂಬ ಮಾಹಿತಿ ಯನ್ನು ಫಲಕಗಳಲ್ಲಿ ನಮೂದಾಗಿರಬೇಕು. ಈ ಕುರಿತು ಮಾದರಿ ಪ್ರಕಟಣಾ ಫಲಕಗಳ ಬಗ್ಗೆಯೂ ತಿಳಿಸುವಂತಾಗ ಬೇಕು ಎಂದು ತಿಳಿಸಿದರು.

ತಂಬಾಕು ಉತ್ಪನ್ನಗಳ ನೇರ, ಪರೋಕ್ಷ ಜಾಹೀರಾತು ಉತ್ತೇಜನ, ಪ್ರಾಯೋಜಕತ್ವ ಮಾಡುವುದನ್ನು ಅಧಿನಿಯಮದ ಸೆಕ್ಷನ್ 5ರ ಪ್ರಕಾರ ನಿಷೇಧಿಸಲಾಗಿದೆ. ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವ ಅಂಗಡಿಗಳಲ್ಲೂ, ತಂಬಾಕು ಉತ್ಪನ್ನಗಳನ್ನು ಪ್ರದರ್ಶನ ಮಾಡುವಂತಿಲ್ಲ. ಅಪ್ರಾಪ್ತರಿಗೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವಂತಿಲ್ಲ. ತಪ್ಪಿದ್ದಲ್ಲಿ ದಂಡನೆಗೆ ಗುರಿ ಯಾಗಬೇಕಾಗುತ್ತದೆ. ಈ ಬಗ್ಗೆ ಹೆಚ್ಚಿನ ಅರಿವು ಮೂಡಿಸಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.

ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳ ಹೊರ ಆವರಣದ ನೂರು ಗಜಗಳ ಅಂತರ ದಲ್ಲಿ ತಂಬಾಕು ಉತ್ಪನ್ನಗಳ ಮಾರಾಟ, ಸೇವನೆ ಮಾಡದಂತೆ ಹಾಗೂ ಕೋಟ್ಪಾ-2003ರ ಅನುಷ್ಠಾನ ಕಟ್ಟುನಿಟ್ಟಾಗಿ ಜಾರಿಯಾಗುವಂತೆ ಕ್ರಮ ತೆಗೆದುಕೊಳ್ಳ ಬೇಕು. ಶಾಲಾ ತಂಬಾಕು ನಿಷೇಧ ಸಮಿತಿ ವತಿಯಿಂದ ತಿಂಗಳ ಮೊದಲನೇ ಶನಿವಾರ ದಂದು ಜಾಥಾ ಕಾರ್ಯಕ್ರಮ ಏರ್ಪಡಿಸಿ, ಕಾಯ್ದೆ ಕುರಿತು ತಿಳಿವಳಿಕೆ ನೀಡಬೇಕೆಂದು ಹೆಚ್ಚುವರಿ ಜಿಲ್ಲಾಧಿಕಾರಿ ಹೇಳಿದರು.

ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಅಧಿಕಾರಿಯಾಗಿರುವ ಜಿಲ್ಲಾ ಸರ್ವೇಲೆನ್ಸ್ ಅಧಿಕಾರಿ ಡಾ. ನಾಗರಾಜು, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಪಿ. ಮಂಜು ನಾಥ್, ಪೊಲೀಸ್ ಇನ್‍ಸ್ಪೆಕ್ಟರ್ ಮೋಹನ್ ಕುಮಾರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

Translate »