ಅಕ್ರಮ ಮರಳು ಸಾಗಾಣಿಕೆ ನಿಯಂತ್ರಣಕ್ಕೆ ಸೂಚನೆ
ಹಾಸನ

ಅಕ್ರಮ ಮರಳು ಸಾಗಾಣಿಕೆ ನಿಯಂತ್ರಣಕ್ಕೆ ಸೂಚನೆ

May 7, 2019

ಜಿಪಿಎಸ್ ದುರ್ಬಳಕೆ ಮಾಡಿಕೊಂಡವರನ್ನು ಕಪ್ಪು ಪಟ್ಟಿಗೆ ಸೇರಿಸಿ: ಜಿಲ್ಲಾಧಿಕಾರಿ
ಹಾಸನ: ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಣಿಕೆಯನ್ನು ಇನ್ನಷ್ಟು ಪರಿ ಣಾಮಕಾರಿಯಾಗಿ ನಿಯಂತ್ರಿಸಲು ಚೆಕ್ ಪೋಸ್ಟ್‍ಗಳನ್ನು ಬಲಗೊಳಿಸುವುದರ ಜೊತೆಗೆ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ವಿಶೇಷ ನಿಗಾವಹಿಸಲು ನಿಯೋಜಿಸ ಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂ ಗಣದಲ್ಲಿ ನಡೆದ ಜಿಲ್ಲಾ ಮರಳು ಉಸ್ತು ವಾರಿ ಸಮಿತಿ, ಜಿಲ್ಲಾ ಟಾಸ್ಕ್ ಪೋರ್ಸ್ ಸಮಿತಿ ಹಾಗೂ ಜಿಲ್ಲಾ ಕ್ರಷರ್ ಲೈಸೆ ನ್ಸಿಂಗ್ ಮತ್ತು ನಿಯಂತ್ರಣಾ ಪ್ರಾಧಿಕಾರ ಸಭೆಯಲ್ಲಿ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಖನಿಜ ಸಂಪನ್ಮೂಲ ಗಳ ಅಕ್ರಮ ಸಾಗಾಟ ಮತ್ತು ಬಳಕೆ ಸಂಪೂರ್ಣ ನಿಯಂತ್ರಣಗೊಳ್ಳಲು ಎಲ್ಲಾ ರೀತಿಯ ಅಗತ್ಯ ಕ್ರಮಗಳನ್ನು ಸಂಬಂಧ ಪಟ್ಟ ಇಲಾಖೆಗಳು ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.

ಜಿಲ್ಲೆಯಲ್ಲಿ ಈವರೆಗೆ ಪರವಾನಗಿ ಪಡೆದಿರುವ ಮರಳು ನಿಕ್ಷೇಪಗಳಲ್ಲಿ ಆಗಿ ರುವ ನಿಯಮ
ಉಲ್ಲಂಘನೆಗಳ ವಿರುದ್ದ ಕ್ರಮ ಕೈಗೊಳ್ಳಬೇಕು. ಒಂದೇ ಪರವಾನಗಿ ಬಳಸಿ ಹಲವು ಟ್ರಿಪ್‍ಗಳ ಸಾಗಾಟ, ಜಿಪಿ ಎಸ್ ದುರ್ಬಳಕೆ ಪ್ರಕರಣಗಳನ್ನು ಪಟ್ಟಿ ಮಾಡಿ ಉದ್ದೇಶ ಪೂರ್ವಕ ತಪ್ಪು ಎಸಗಿ ರುವವರ ವಾಹನಗಳನ್ನು ಕಪ್ಪು ಪಟ್ಟಿಗೆ ಸೇರಿಸಿ ಸಾರಿಗೆ ಇಲಾಖೆಗೆ ವರದಿ ನೀಡಿ ಅಲ್ಲಿಯೂ ನಿಯಮಾನುಸಾರ ಪ್ರಕರಣ ದಾಖಲಿಸಿ ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಎಲ್ಲಾ ಮರಳು ನಿಕ್ಷೇಪ ಮಾಲೀಕರು ನಿಯಮ ಪಾಲನೆ ಮಾಡಬೇಕು. ಅಕ್ರಮಕ್ಕೆ ಪ್ರೋತ್ಸಾಹ ನೀಡಿದರೆ ಅವರ ಪರವಾನಗಿ ರದ್ದು ಪಡಿಸಬೇಕಾಗುತ್ತದೆ. ಅದೇ ರೀತಿ ಮರಳು ಸಾಗಾಟ ಪರ್ಮಿಟ್ ವಿತರಣೆ ವೇಳೆ ತಪ್ಪುಗಳಾಗದಂತೆ ಎಚ್ಚರವಹಿಸಿ ಎಂದು ತಿಳಿಸಿದರು.
ಇದೇ ರೀತಿ ಅಕ್ರಮ ಕಲ್ಲು ಗಣಿಗಾರಿಕೆ ನಿಯಮಬಾಹಿರ ಸಾಗಾಟ ನಡೆಯಬಾ ರದು. ಸರ್ಕಾರಕ್ಕೆ ಸಲ್ಲಿಸಬೇಕಾಗಿರುವ ರಾಜಧನ ಮತ್ತಿತರ ತೆರಿಗೆ ಹಣ ಸಮರ್ಪಕ ವಾಗಿ ಪಾವತಿಯಾಗಬೇಕು. ಇದಕ್ಕೆ ಲೋಕೋಪಯೋಗಿ ಇಲಾಖೆ, ಗ್ರಾಮೀಣಾ ಭಿವೃದ್ಧಿ ಇಲಾಖೆ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿಶ್ವೇಶ್ವರಯ್ಯ ಜಲನಿಗಮದ ಅಧಿಕಾರಿಗಳು ಸಹಕಾರ ನೀಡಬೇಕು. ಬೇರೆ ಜಿಲ್ಲೆಗಳಿಂದ ಸರಬರಾಜಾಗುತ್ತಿರುವ ಜಿಲ್ಲೆ ಸಾಗಾಣಿಕೆ ವೇಳೆ ಹೆಚ್ಚುವರಿ ಬಾರದ ಸಾಮಗ್ರಿ ಸಾಗಾಟವಾಗುತ್ತಿದ್ದು, ಅದಕ್ಕೆ ಇಲಾಖೆಗಳು ರಾಜಧನಗಳ 5 ಪಟ್ಟು ಹೆಚ್ಚು ದಂಡವನ್ನು ಕಡಿತಗೊಳಿಸಿ ಸರ್ಕಾರಕ್ಕೆ ಪಾವತಿಯಾಗು ವವರೆಗೆ ಸಹಕಾರ ನೀಡಬೇಕು ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚೇತನ್ ಸಿಂಗ್ ರಾಥೋಡ್ ಮಾತನಾಡಿ, ಜಿಲ್ಲೆಯಲ್ಲಿ ಯಾವುದೇ ಅಕ್ರಮಗಳು ಮರಳು ಸಾಗಾ ಣಿಕೆ ನಡೆಯದಂತೆ ಎಚ್ಚರವಹಿಸಿ ಒಂದು ವೇಳೆ ಮರಳು ಸಾಗಾಣಿಕೆಯಲ್ಲಿ ಅಕ್ರಮ ಗಳು ಕಂಡುಬಂದಲ್ಲಿ ಸೂಕ್ತ ಕ್ರಮ ಕೈಗೊಳ್ಳ ಬೇಕು. ಪೊಲೀಸ್ ಇಲಾಖೆಯಿಂದ ಎಲ್ಲಾ ನೆರವು ಒದಗಿಸಲಾಗುವುದು ಎಂದು ತಿಳಿಸಿದರು.
ಜಿಪಿಎಸ್ ಪರವಾನಿಗೆ ನಿಯಮಾನುಸಾರ ಜಿಪಿಎಸ್ ಅಳವಡಿಸದೇ ಇರುವ ವಾಹನ ಗಳಿಗೆ ಪರವಾನಗಿ ನೀಡಿರುವ ಹಾಗೂ ಜಿಪಿ ಎಸ್ ಸಾಧನದ ಸಂಪರ್ಕವನ್ನು ಕಡಿತ ಗೊಳಿಸಿರುವ ಬಗ್ಗೆ ಮತ್ತು ಮರಳು ಪರ ವಾನಗಿ ಪಡೆಯದೇ ಮರಳು ದಾಸ್ತಾನು ಪ್ರದೇಶದಲ್ಲಿ ಸಂಚರಿಸುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪನಿರ್ದೇಶಕ ಶ್ರೀನಿವಾಸ್ ಅವರು ಮರಳು ನಿಕ್ಷೇಪ ಹಾಗೂ ಕ್ರಷರ್ ಲೈಸ ನ್ಸಿಂಗ್‍ನ ಬಗ್ಗೆ ವಿವರ ನೀಡಿದರು.

ಸಭೆಯಲ್ಲಿ ಉಪ ಅರಣ್ಯ ಸಂರಕ್ಷಣಾ ಧಿಕಾರಿ ಶಿವರಾಂ ಬಾಬು, ಪ್ರೊಬೆಷನರಿ ಐಎಎಸ್ ಅಧಿಕಾರಿ ಪ್ರಿಯಾಂಗ, ಉಪ ವಿಭಾಗಾಧಿಕಾರಿಗಳಾದ ಡಾ.ಹೆಚ್.ಎಲ್. ನಾಗರಾಜು, ಕವಿತಾ ರಾಜರಾಂ, ಜಿಲ್ಲಾ ಪಂಚಾಯಿತಿ ಯೋಜನಾಧಿಕಾರಿ ಪರಪ್ಪ ಸ್ವಾಮಿ ಇತರರು ಹಾಜರಿದ್ದರು.

ಅಕ್ರಮ ತಡೆಗೆ 17 ಚೆಕ್‍ಪೋಸ್ಟ್
ಅನಧಿಕೃತ ಮರಳು ಗಣಿಗಾರಿಕೆ, ಸಂಗ್ರಹಣೆ, ಸಾಗಾಣಿಕೆ ತಡೆಗಟ್ಟುವ ನಿಟ್ಟಿನಲ್ಲಿ 17 ಚೆಕ್‍ಪೋಸ್ಟ್‍ಗಳನ್ನು ಸ್ಥಾಪಿಸಲಾಗಿದೆ. ಚಾಲಿತ ದಳದ ಪ್ರತ್ಯೇಕ ತಂಡಗಳನ್ನಾಗಿ ಮಾಡಿಕೊಂಡು ಕ್ರಮ ಕೈಗೊಳ್ಳಲು ಜಿಲ್ಲಾಮಟ್ಟದ ಸ್ಕ್ವಾಡ್‍ಗಳು, ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಸಮಿತಿ ರಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ತಿಳಿಸಿದರು.

ಸಭೆಯಲ್ಲಿ ಮಾತನಾಡಿದ ಅವರು, ಬೇಲೂರು, ಸಕಲೇಶ ಪುರ ತಾಲೂಕುಗಳ ವ್ಯಾಪ್ತಿಯಲ್ಲಿ ಅಕ್ರಮ ಮರಳು ಗಣಿಗಾರಿಕೆ ಹಾಗೂ ಸಾಗಾಣಿಕೆ ತಡೆಗಟ್ಟಲು ಸಿಬ್ಬಂದಿಗಳಿಗೆ ಓಡಾಡಲು ವಾಹನ, ಚೆಕ್‍ಪೋಸ್ಟ್‍ಗಳಿಗೆ ಸಿಸಿಟಿವಿ, ಟೇಬಲ್, ಕುರ್ಚಿ ಮತ್ತಿತರ ಸಾಮಾಗ್ರಿಗಳನ್ನು ನೀಡಬೇಕು ಎಂದರು.

ಪೊಲೀಸ್ ಹಾಗೂ ಗೃಹರಕ್ಷಕ ದಳದ ಸಿಬ್ಬಂದಿಗಳನ್ನು ಚೆಕ್ ಪೋಸ್ಟ್ ಸೇವೆಗೆ ಒದಗಿಸಲಾಗುವುದು. ಜಿಲ್ಲೆಯಲ್ಲಿ ಕೈಗೊಳ್ಳಲಾಗಿ ರುವ ಎಲ್ಲಾ ಸರ್ಕಾರಿ ಕಾಮಗಾರಿಗಳಿಗೆ ಉಪಯೋಗಿಸುತ್ತಿರುವ ಉಪಖನಿಜಗಳಾದ ಕಟ್ಟಡಕಲ್ಲು, ಜಲ್ಲಿ, ಎಂ.ಸ್ಯಾಂಡ್, ಮಣ್ಣು ಇನ್ನಿತ್ಯಾದಿ ಉಪಖನಿಜಗಳನ್ನು ಕಲ್ಲುಗಣಿ ಗುತ್ತಿಗೆ, ಕ್ರಷರ್ ಘಟಕ ದಾರರಿಂದ ಪರವಾನಗಿ ಪಡೆದು ಸಾಗಾಣಿಕೆ ಮಾಡಿಕೊಳ್ಳಲು ಷರತ್ತು ವಿಧಿಸುವುದು ತಪ್ಪಿದ್ದಲ್ಲಿ ಆರ್ಥಿಕ ನಷ್ಟ ಅಂದರೆ ಡಿಎಂಎಫ್, ಟಿಸಿಎಸ್ ಇತರೆ ಶುಲ್ಕಗಳಿಗೆ ಕಾಮಗಾರಿ ಗುತ್ತಿಗೆ ನೀಡಿರುವ ಇಲಾಖೆ ಮುಖ್ಯಸ್ಥರೇ ಹೊಣೆಗಾರನ್ನಾಗಿ ಮಾಡಲಾಗುವುದು ಎಂದು ಹೇಳಿದರು.

Translate »