ಕೈಗಾರಿಕೆಗಳÀಲ್ಲಿರುವ ಆಮ್ಲಜನಕ ಸಿಲಿಂಡರ್ ವಶಕ್ಕೆ ಸೂಚನೆ
ಮೈಸೂರು

ಕೈಗಾರಿಕೆಗಳÀಲ್ಲಿರುವ ಆಮ್ಲಜನಕ ಸಿಲಿಂಡರ್ ವಶಕ್ಕೆ ಸೂಚನೆ

May 4, 2021

ನಂಜನಗೂಡು, ಮೇ 3- ಕೋವಿಡ್ ಸೋಂಕಿ ತರಿಗೆ ಆಮ್ಲಜನಕ ಕೊರತೆ ಉಂಟಾಗಿರುವ ಹಿನ್ನೆಲೆಯಲ್ಲಿ ತಾಲೂಕಿನ ಕೈಗಾರಿಕಾ ಪ್ರದೇಶದ ಕಾರ್ಖಾನೆಗಳಲ್ಲಿರುವ ಆಮ್ಲಜನಕ ಸಿಲಿಂಡರ್‍ಗಳನ್ನು ವಿಪತ್ತು ಕಾಯ್ದೆ ಯನ್ವಯ ವಶಕ್ಕೆ ಪಡೆಯುವಂತೆ ತಹ ಶೀಲ್ದಾರ್ ಅವರಿಗೆ ಸೂಚಿಸಲಾಗಿದೆ ಎಂದು ಶಾಸಕ ಬಿ.ಹರ್ಷವರ್ಧನ್ ತಿಳಿಸಿದರು.

ನಗರದ ಶ್ರೀಕಂಠೇಶ್ವರ ದೇವಾಲಯದ ದಾಸೋಹ ಭವನಕ್ಕೆ ಸೋಮವಾರ ಭೇಟಿ ನೀಡಿ, ಕೋವಿಡ್ ಕೇರ್ ಕೇಂದ್ರ ಹಾಗೂ ಕೊರೊನಾ ವಾರಿಯರ್ಸ್‍ಗಳಿಗೆ ಆಹಾರ ವಿತರಣೆ ಸಂಬಂಧ ಪರಿಶೀಲನೆ ನಡೆಸಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ತಾಲೂಕಿನ ಸರ್ಕಾರಿ ಆಸ್ಪತ್ರೆ ಹಾಗೂ ಕೋವಿಡ್ ಕೇರ್ ಕೇಂದ್ರಗಳಲ್ಲಿ ತುರ್ತು ಸಂದರ್ಭಗಳಲ್ಲಿ ರೋಗಿಗಳಿಗೆ ನೀಡಲು ಆಮ್ಲಜನಕ ಕೊರತೆ ಉಂಟಾಗಿದೆ. ಪ್ರಸ್ತುತ 20 ಸಿಲಿಂಡರ್‍ಗಳ ಅವಶ್ಯಕತೆ ಇದೆ. ಖಾಲಿ ಸಿಲಿಂಡರ್‍ಗಳು ಸಿಗುತ್ತಿಲ್ಲ. ಹೀಗಾಗಿ ತಾಲೂಕಿನ ನಂಜನಗೂಡು, ತಾಂಡ್ಯ ಹಾಗೂ ಅಡಕನಹಳ್ಳಿ ಕೈಗಾರಿಕಾ ಪ್ರದೇಶದ ಕೈಗಾರಿಕೆಗಳ ಸಂಬಂಧ ಪಟ್ಟವರಿಗೆ ಮನವಿ ಮಾಡಿ, ಸಹಕಾರ ನೀಡದಿದ್ದರೆ ದಾಳಿ ಮಾಡಿ ಆಮ್ಲಜನಕ ಸಿಲಿಂಡರ್‍ಗಳನ್ನು ವಶಕ್ಕೆ ಪಡೆಯುವಂತೆ ಸೂಚನೆ ನೀಡಲಾಗಿದೆ. ಜಿಲ್ಲಾಧಿಕಾರಿಗಳು ಕೊರೊನಾ ಸೋಂಕಿತರಿಗೆ ತಾಲೂಕು ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಿ ಮೈಸೂರಿಗೆ ಕಳುಹಿಸಬೇಡಿ ಎಂದಿದ್ದಾರೆ. ಹೀಗಾದರೆ ತುರ್ತು ಸಂದರ್ಭಗಳಲ್ಲಿ ಜಿಲ್ಲೆಯ ಸುತ್ತ ಮುತ್ತಲ ತಾಲೂಕಿನವರು ಎಲ್ಲಿಗೆ ಹೋಗಬೇಕು. ನಮ್ಮಲ್ಲಿ ತಜ್ಞ ವೈದ್ಯರು ಹಾಗೂ ದಾದಿಯರ ಕೊರತೆ ಇದೆ. ಆದ್ದರಿಂದ ಈ ರೀತಿಯ ಸೂಚನೆ ನೀಡ ಬಾರದು ಎಂದು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿಕೊಳ್ಳುತ್ತೇನೆ. ಕಳೆದ ವರ್ಷ ಕೋವಿಡ್ ಸಂದರ್ಭದಲ್ಲಿ ಆಗಿನ ಜಿಲ್ಲಾಧಿಕಾರಿ ಅಭಿರಾಮ್ ಶಂಕರ್ ಉತ್ತಮ ರೀತಿಯಲ್ಲಿ ಸೋಂಕಿತರಿಗೆ ಚಿಕಿತ್ಸೆ ದೊರೆಯುವಂತೆ ಮಾಡಿದ್ದರು. ಅವರ ಕಾರ್ಯವೈಖರಿಯ ಬಗ್ಗೆ ಜಿಲ್ಲಾಧಿ ಕಾರಿಗಳು ಮಾಹಿತಿ ಪಡೆಯಬೇಕು. ಅವರ ಮೇಲೆ ಯಾವುದೇ ದೂರು ಗಳಿರಲಿಲ್ಲ ಎಂದರು. ತಾಲೂಕಿನಲ್ಲಿ ಸೋಂಕು ಹೆಚ್ಚಾಗುತ್ತಿರುವುದರಿಂದ ಮುದ್ದಹಳ್ಳಿ ಹಾಗೂ ಹುರ ಗ್ರಾಮದ ವಸತಿ ಶಾಲೆಗಳನ್ನು ಕೋವಿಡ್ ಕೇರ್ ಕೇಂದ್ರಗಳನ್ನಾಗಿ ಪರಿವರ್ತಿಸಲು ಕ್ರಮ ಕೈಗೊಳ್ಳಲಾಗಿದೆ. ಕೋವಿಡ್ ಕೇರ್ ಕೇಂದ್ರಗಳಿಗೆ ದಾಸೋಹ ಭವನದಲ್ಲಿ ಆಹಾರ ತಯಾರಿಸಿ ಸರಬರಾಜು ಮಾಡಲು ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.

Translate »