ಅಂಗನವಾಡಿ ಕಟ್ಟಡಗಳ ಕಾಮಗಾರಿ ಪೂರ್ಣಗೊಳಿಸಲು ಸೂಚನೆ
ಮಂಡ್ಯ

ಅಂಗನವಾಡಿ ಕಟ್ಟಡಗಳ ಕಾಮಗಾರಿ ಪೂರ್ಣಗೊಳಿಸಲು ಸೂಚನೆ

July 17, 2018

ಮಂಡ್ಯ:  ಜಿಲ್ಲೆಯ ವಿವಿಧೆಡೆ ಅಂಗನವಾಡಿ ಮಕ್ಕಳಿಗೆ ಸ್ವಂತ ಕಟ್ಟಡ ಗಳಿಲ್ಲದೇ ಬಾಡಿಗೆ ಕಟ್ಟಡ ಹಾಗೂ ಸೂಕ್ತ ವಿಲ್ಲದ ಕಟ್ಟಡಗಳಲ್ಲಿ ಪಾಠ ಕಲಿಯುವಂತಾ ಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ಪ್ರಗತಿ ಯಲ್ಲಿರುವ ಅಂಗನವಾಗಿ ಕಟ್ಟಡಗಳನ್ನು ಶೀಘ್ರ ಪೂರ್ಣಗೊಳಿಸುವ ಜೊತೆಗೆ, ಇನ್ನೂ ಆರಂಭಿಸದಿರುವ ಕಟ್ಟಡದ ಕಾಮಗಾರಿ ಕೈಗೆತ್ತಿಕೊಂಡು ಪೂರ್ಣಗೊಳಿಸಬೇಕು ಎಂದು ಜಿಪಂ ಅಧ್ಯಕ್ಷೆ ನಾಗರತ್ನ ತಿಳಿಸಿದರು.

ಸೋಮವಾರ ಜಿಪಂ ಕಾವೇರಿ ಸಭಾಂಗಣದಲ್ಲಿ ನಡೆದ ಜಿಪಂ ಮಾಸಿಕ ಕೆಡಿಪಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಅಂಗನವಾಡಿ ಕಟ್ಟಡಗಳ ಕಾಮಗಾರಿ ಬಹಳ ನಿಧಾನ ವಾಗಿ ನಡೆಯುತ್ತಿದ್ದು, ಮಂಜೂರಾಗಿರುವ ಎಲ್ಲಾ ಅಂಗನವಾಡಿ ಕಾಮಗಾರಿ ಆ.15 ರೊಳಗೆ ಪೂರ್ಣಗಳಿಸುವ ಮೂಲಕ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲ ಮಾಡಿಕೊಡ ಬೇಕು ಎಂದರು.

ಎಸ್‍ಎಸ್‍ಎಲ್‍ಸಿ ಪರೀಕ್ಷೆ ಫಲಿತಾಂಶ ದಲ್ಲಿ ಇತರೆ ಜಿಲ್ಲೆಗಳಿಗೆ ಹೋಲಿಸಿದರೆ ಮಂಡ್ಯ ಜಿಲ್ಲೆ ಬಹಳ ಹಿಂದೆ ಉಳಿದಿದ್ದು, ಈ ನಿಟ್ಟಿನಲ್ಲಿ ಮಕ್ಕಳಿಗೆ ಶಾಲೆಗಳಲ್ಲಿ ಉತ್ತಮ ತರಬೇತಿ ನೀಡುವ ಜೊತೆಗೆ ಶಿಕ್ಷಕರಿಗೆ ಬೇಸಿಗೆ ರಜೆಯಲ್ಲಿ ಮಕ್ಕಳಿಗೆ ನೀಡಬೇಕಾದ ಶಿಕ್ಷಣದ ಗುಣಮಟ್ಟ ಹೆಚ್ಚು ಸುವುದರ ಕುರಿತು 15 ದಿನಗಳ ವಿಶೇಷ ತರಬೇತಿ ಆಯೋಜಿ ಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಅಗತ್ಯ ಕ್ರಮವಹಿಸ ಬಹುದು ಎಂದರು.

ಜಿಪಂ ಸಿಇಓ ಬಿ.ಶರತ್ ಮಾತನಾಡಿ, ಪ್ರಸಕ್ತ ವರ್ಷ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ರೋಗ-ರುಜಿನಗಳು ಹೆಚ್ಚಾಗುವ ಸಾಧ್ಯತೆಗಳಿವೆ. ಆರೋಗ್ಯ ಇಲಾಖೆ ಈ ನಿಟ್ಟಿನಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ನಗರ ಹಾಗೂ ಗ್ರಾಮೀಣ ಸಾರ್ವಜನಿಕರಲ್ಲಿ ಸ್ವಚ್ಛತೆ ಬಗ್ಗೆ ಅರಿವು ಮೂಡಿಸಬೇಕು. ಕಳೆದ ವರ್ಷ ಈ ಹೊತ್ತಿಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಕ್ರಮ ಕೈಗೊಳ್ಳ ಲಾಗಿತ್ತು. ವಿಷಯದ ಗಂಭೀರತೆ ಅರಿತು ಆರೋಗ್ಯ ಇಲಾಖೆ ಕ್ರಮವಹಿಸಲು ಮುಂದಾಗಬೇಕು ಎಂದರು.

ಕೃಷಿ ಜಂಟಿ ನಿರ್ದೇಶಕಿ ರಾಜಾ ಸುಲೋಚನಾ ಮಾತನಾಡಿ, ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗೆ ಪೂರಕ ವಾದ ವ್ಯವಸ್ಥೆ ಮಾಡಿಕೊಳ್ಳಲಾಗಿದ್ದು, ಜಿಲ್ಲೆಯ 23 ಸಾವಿರ ಹೆಕ್ಟೇರ್ ಪ್ರದೇಶ ದಲ್ಲಿ ಬಿತ್ತನೆ ಕಾರ್ಯ ನಡೆದು ಶೇ.11.4 ರಷ್ಟು ಸಾಧನೆ ಮಾಡಲಾಗಿದೆ. ಈಗಾಗಲೇ ಗೋದಾಮಿನಲ್ಲಿ 14,130 ಕ್ವಿಂಟಾಲ್ ಬತ್ತದ ಬಿತ್ತನೆ ಬೀಜ ದಾಸ್ತಾನು ಇದ್ದು, 1076 ಕ್ವಿಂಟಾಲ್ ಭತ್ತದ ಬಿತ್ತನೆ ಬೀಜ ಗಳನ್ನು ರೈತರಿಗೆ ವಿತರಿಸಲಾಗಿದೆ. ಇತರೆ ಬೆಳೆಗಳನ್ನೊಳಗೊಂಡ ಬಿತ್ತನೆ ಬೀಜಗಳ ದಾಸ್ತಾನು 14,905 ಕ್ವಿಂಟಾಲ್ ಇದ್ದು, 1247 ಕ್ವಿಂಟಾಲ್ ಬಿತ್ತನೆ ಬೀಜಗಳನ್ನು ವಿತರಿಸಲಾಗಿದೆ ಎಂದು ತಿಳಿಸಿದರು. ಸಭೆಯಲ್ಲಿ ಉಪಾಧ್ಯಕ್ಷೆ ಪಿ.ಕೆ.ಗಾಯಿತ್ರಿ, ಉಪ ಕಾರ್ಯದರ್ಶಿ ಪ್ರೇಮಕುಮಾರ್, ಮುಖ್ಯ ಲೆಕ್ಕಾಧಿಕಾರಿ ರವಿಕುಮಾರ್, ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಭಾಗವಹಿಸಿದರು.

Translate »