ಯುವ ಸಂಭ್ರಮ ಹಿನ್ನೆಲೆ ಪರೀಕ್ಷೆಗಳ ನಡೆಸದಂತೆ ಸೂಚನೆ
ಮೈಸೂರು

ಯುವ ಸಂಭ್ರಮ ಹಿನ್ನೆಲೆ ಪರೀಕ್ಷೆಗಳ ನಡೆಸದಂತೆ ಸೂಚನೆ

September 30, 2018

ಮೈಸೂರು: ದಸರಾ ಮಹೋತ್ಸವದ ಅಂಗವಾಗಿ ಸೆ.30 ರಿಂದ ಯುವ ಸಂಭ್ರಮದ ಕಾರ್ಯಕ್ರಮಗಳು ಆರಂಭಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನರಹಿತ ಪದವಿಪೂರ್ವ ಕಾಲೇಜುಗಳಲ್ಲಿ ಯಾವುದೇ ಪರೀಕ್ಷೆಗಳನ್ನು ನಡೆಸದಂತೆ ಪದವಿಪೂರ್ವ ಶಿಕ್ಷಣ ಇಲಾಖೆಯ ಜಿಲ್ಲಾ ಉಪ ನಿರ್ದೇಶಕ ಡಾ.ದಯಾನಂದ ಸೂಚನೆ ನೀಡಿದ್ದಾರೆ.

ಯುವ ಸಂಭ್ರಮ ಹಾಗೂ ಯುವ ದಸರಾ ಕಾರ್ಯಕ್ರಮಗಳ ಅವಧಿಯಲ್ಲಿ ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನರಹಿತ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರು ತಮ್ಮ ಹಂತದ ಯಾವುದೇ ಪರೀಕ್ಷೆಗಳನ್ನು ನಡೆಸಬಾರದು ಎಂದು ಸೂಚನೆ ನೀಡಿರುವ ಉಪನಿರ್ದೇಶಕರು, ಒಂದು ವೇಳೆ ಈಗಾಗಲೇ ಪರೀಕ್ಷೆಗಳನ್ನು ನಿಗದಿಗೊಳಿಸಿದ್ದಲ್ಲಿ ತಕ್ಷಣವೇ ಸ್ಥಗಿತಗೊಳಿಸುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Translate »