ಬೆಂಬಲ ಬೆಲೆ ಯೋಜನೆಯಡಿ ಖರೀದಿ ಕೇಂದ್ರ ತೆರೆಯಲು ಸೂಚನೆ
ಹಾಸನ

ಬೆಂಬಲ ಬೆಲೆ ಯೋಜನೆಯಡಿ ಖರೀದಿ ಕೇಂದ್ರ ತೆರೆಯಲು ಸೂಚನೆ

September 7, 2018

ಹಾಸನ:ಕೇಂದ್ರ ಸರ್ಕಾರ ಬೆಂಬಲ ಬೆಲೆ ಯೋಜನೆಯಡಿ ಮುಂಗಾರು ಹಂಗಾಮಿನಡಿ 14 ದವಸ-ಧಾನ್ಯಗಳು, ಎಣ್ಣೆ ಕಾಳುಗಳು, ದ್ವಿದಳ ಧಾನ್ಯಗಳಿಗೆ ಬೆಂಬಲ ಬೆಲೆ ಘೋಷಿಸಿದ್ದು, ಜಿಲ್ಲೆಯಲ್ಲಿ ಖರೀದಿ ಕೇಂದ್ರ ತೆರೆಯಲು ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಆರ್.ಪೂರ್ಣಿಮ ಸೂಚಿಸಿದರು.

ನಗರದ ಜಿಲ್ಲಾಡಳಿತ ಭವನದಲ್ಲಿ ಗುರುವಾರ ಖರೀದಿ ಕೇಂದ್ರಗಳು ಸ್ಥಾಪನೆ ಕುರಿತಂತೆ ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು. ಸರ್ಕಾರ ನಿಗದಿ ಪಡಿಸಿರುವ ದವಸ ಧಾನ್ಯಗಳ ಪೈಕಿ ಜಿಲ್ಲೆಯಲ್ಲಿ ಭತ್ತ, ರಾಗಿ ಮತ್ತು ಮೆಕ್ಕೆ ಜೋಳ ಬೆಲೆಗಳ ಖರೀದಿಗೆ ಕೇಂದ್ರಗಳನ್ನು ತೆರೆಯಲು ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದರು.
ಖರೀದಿ ಕೇಂದ್ರವನ್ನು ಅಕ್ಟೋಬರ್‍ನಿಂದ ಭತ್ತವನ್ನು ಪ್ರತಿ ಕ್ವಿಂಟಾಲ್‍ಗೆ 1,750 ರೂ., ಮೆಕ್ಕೆಜೋಳ 1,700 ರೂ. ಹಾಗೂ ರಾಗಿಯನ್ನು 2,897 ರೂ. ಬೆಂಬಲ ಬೆಲೆಯೊಂದಿಗೆ ಖರೀದಿಸಲು ಕೇಂದ್ರಗಳನ್ನು ತೆರೆಯಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಕೃಷಿ ಉತ್ಪನ್ನ ಮಾರುಕಟ್ಟೆ ಇಲಾಖೆ ಉಪ ನಿರ್ದೇಶಕ ಶ್ರೀಹರಿ ಹಾಗೂ ಜಂಟಿ ಕೃಷಿ ನಿರ್ದೇಶಕ ಕೆ.ಮದುಸೂಧನ್ ಅವರಿಗೆ ತಿಳಿಸಿದ್ದಾರೆ.

Translate »