ಲೋಕಸಭಾ ಚುನಾವಣೆ ವ್ಯವಸ್ಥಿತ ನಿರ್ವಹಣೆಗೆ ನಿರ್ದೇಶನ
ಕೊಡಗು

ಲೋಕಸಭಾ ಚುನಾವಣೆ ವ್ಯವಸ್ಥಿತ ನಿರ್ವಹಣೆಗೆ ನಿರ್ದೇಶನ

March 9, 2019

ಮಡಿಕೇರಿ: ಲೋಕಸಭಾ ಚುನಾ ವಣೆ ದಿನಾಂಕ ಶೀಘ್ರವೇ ಪ್ರಕಟವಾಗ ಲಿದ್ದು, ಚುನಾವಣೆ ಸಂಬಂಧ ಈಗಾಗಲೇ ನೋಡೆಲ್ ಅಧಿಕಾರಿಗಳನ್ನು ನಿಯೋಜಿಸ ಲಾಗಿದೆ. ಆ ದಿಸೆಯಲ್ಲಿ ನೋಡಲ್ ಅಧಿ ಕಾರಿಗಳು ತಮ್ಮ ತಮ್ಮ ಕಾರ್ಯವ್ಯಾಪ್ತಿ ತಿಳಿದು ಕರ್ತವ್ಯ ಪ್ರಜ್ಞೆಯಿಂದ ವ್ಯವಸ್ಥಿತವಾಗಿ ಕಾರ್ಯ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಸೂಚನೆ ನೀಡಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂ ಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿ, ಜಿಲ್ಲೆಯಲ್ಲಿ 543 ಮತಗಟ್ಟೆ ಕೇಂದ್ರಗಳಿದ್ದು, ಈ ಮತಗಟ್ಟೆ ಕೇಂದ್ರಗಳ ಸುಸ್ಥಿತಿ ಸಂಬಂ ಧಿಸಿದಂತೆ ಈಗಾಗಲೇ ಸೆಕ್ಟರ್ ಅಧಿಕಾರಿ ಗಳು ವರದಿ ನೀಡಿದ್ದಾರೆ. ಇನ್ನೂ ಐದಾರು ಮತಗಟ್ಟೆ ಕೇಂದ್ರಗಳಲ್ಲಿ ವಿದ್ಯುತ್ ಸಂಪರ್ಕ, ರ್ಯಾಂಪ್, ಕುಡಿಯುವ ನೀರು ಮತ್ತಿತರ ಮೂಲ ಸೌಲಭ್ಯ ಕಲ್ಪಿಸಲು ಬಾಕಿ ಇರುವ ಬಗ್ಗೆ ಮಾಹಿತಿ ನೀಡಿದ್ದು, ಕೂಡಲೇ ಅಗತ್ಯ ಕ್ರಮಕೈಗೊಳ್ಳುವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.

ಪ್ರತಿಯೊಂದು ಇಲಾಖೆಗಳ ಸಿಬ್ಬಂದಿಯ ಮಾಹಿತಿ ವಿವರವನ್ನು ಕಡ್ಡಾಯವಾಗಿ ಸಲ್ಲಿಸ ಬೇಕು. ಯಾರನ್ನೂ ಸಹ ಕೈಬಿಡದೆ ಮಾಹಿತಿ ಒದಗಿಸಬೇಕು. ಜೊತೆಗೆ ಸಿಬ್ಬಂದಿಗಳ ಬ್ಯಾಂಕ್ ಖಾತೆ ಹಾಗೂ ಎಪಿಕ್ ಕಾರ್ಡ್ ಮಾಹಿತಿ ಒದಗಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು.

ಚುನಾವಣಾ ದಿನಾಂಕ ಪ್ರಕಟವಾದ ನಂತರ ಜಿಲ್ಲೆಯ ಹೆದ್ದಾರಿ ಫಲಕಗಳ ವಿನೈಲ್ ಸೇರಿ ದಂತೆ ಎಲ್ಲಾ ರೀತಿಯ ಪೋಸ್ಟರ್, ಬ್ಯಾನರ್ ತೆರವುಗೊಳಿಸುವ ಕಾರ್ಯವನ್ನು ಸ್ಥಳೀಯ ಸಂಸ್ಥೆಗಳು ನಿರ್ವಹಿಸುವಂತೆ ಜಿಲ್ಲಾಧಿಕಾರಿ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಯುವ ಹಾಗೂ ವಿಕಲಚೇತನ ಮತದಾ ರರ ಬಗ್ಗೆ ನಿಖರ ಮಾಹಿತಿ ಒದಗಿಸಬೇಕು. ಮತಗಟ್ಟೆ ಸಿಬ್ಬಂದಿಗಳಿಗೆ ತರಬೇತಿ ನೀಡು ವುದು, ಮತ್ತಿತರ ಬಗ್ಗೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ನಿರ್ದೇಶನ ನೀಡಿದರು.

ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ಜಿಪಂ ಸಿಇಒ ಕೆ.ಲಕ್ಷ್ಮಿಪ್ರಿಯ ಅವರು ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿ ವತಿ ಯಿಂದ ಜಿಲ್ಲಾ, ತಾಲೂಕು, ಹೋಬಳಿ ಮತ್ತು ಗ್ರಾಪಂ ಮಟ್ಟದಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗು ವುದು ಎಂದು ಮಾಹಿತಿ ನೀಡಿದರು.

ಈಗಾಗಲೇ ಮತದಾರರ ಜಾಗೃತಿ ಸಂಬಂ ಧಿಸಿದಂತೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಹಲವು ಗಮನ ಸೆಳೆಯುವ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗು ವುದು ಎಂದು ತಿಳಿಸಿದರು.

ನೋಡೆಲ್ ಅಧಿಕಾರಿಗಳು ಒಂದು ತಂಡ ವಾಗಿ ಕಾರ್ಯನಿರ್ವಹಿಸಬೇಕು. ಆ ನಿಟ್ಟಿ ನಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳು ವಂತೆ ಜಿಪಂ ಸಿಇಒ ಹೇಳಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಟಿ.ಯೋಗೇಶ್ ಮಾತನಾಡಿ, ನೋಡೆಲ್ ಅಧಿಕಾರಿಗಳು ತಮ್ಮ ಜವಾಬ್ದಾರಿಯನ್ನು ಅರಿತು ಕಾರ್ಯ ನಿರ್ವಹಿಸಬೇಕು. ಚುನಾವಣಾ ಆಯೋಗ ದಿಂದ ಬರುವ ಆದೇಶಗಳನ್ನು ಪಾಲಿಸ ಬೇಕು. ಚುನಾವಣಾ ಆಯೋಗದಿಂದ ಬರುವ ನಿರ್ದೇಶನಗಳಿಗೆ ಸಂಬಂಧಿಸಿದಂತೆ ಪ್ರತಿ ನಿತ್ಯ ಮಾಹಿತಿ ಪಡೆಯುವಂತಾಗಬೇಕು ಎಂದು ತಿಳಿಸಿದರು.

ಮಾದರಿ ನೀತಿ ಸಂಹಿತೆ ಉಲ್ಲಂಘನೆ ಯಾಗದಂತೆ ನೋಡಿಕೊಳ್ಳಬೇಕು. ಆ ನಿಟ್ಟಿ ನಲ್ಲಿ ಚುನಾವಣೆಗೆ ನಿಯೋಜಿಸಿರುವ ಎಲ್ಲಾ ಹಂತದ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸಬೇಕು ಎಂದು ಹೆಚ್ಚು ವರಿ ಜಿಲ್ಲಾಧಿಕಾರಿ ಸೂಚಿಸಿದರು.

ಜಿಪಂ ಉಪ ಕಾರ್ಯದರ್ಶಿ ಗುಡೂರು ಭೀಮಸೇನ, ಭೂ ದಾಖಲೆಗಳ ಉಪ ನಿರ್ದೇಶಕ ಶ್ರೀನಿವಾಸ್, ಕೃಷಿ ಇಲಾಖೆಯ ಉಪ ನಿರ್ದೇಶಕ ರಾಜು, ಲೋಕೋಪ ಯೋಗಿ ಇಲಾಖೆ ಇಇ ಇಬ್ರಾಹಿಂ, ಡಯಟ್ ಪ್ರಾಂಶುಪಾಲ ವಾಲ್ಟರ್ ಡೆಮೆಲ್ಲೋ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಮಚ್ಚಾಡೋ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇ ಶಕ ಕೆಂಚಪ್ಪ, ಆಹಾರ ಇಲಾಖೆಯ ಸಹಾಯಕ ನಿರ್ದೇಶಕ ಗೌರವ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಅರುಂಧತಿ, ತಹಶೀಲ್ದಾರ ರಾದ ಗೋವಿಂದ ರಾಜು, ಭೂ ದಾಖ ಲೆಗಳ ಸಹಾಯಕ ನಿರ್ದೇಶಕ ಷಂಶು ದ್ದೀನ್, ನೋಂದಣಿ ಇಲಾಖೆಯ ಅಧಿ ಕಾರಿ ಸಿದ್ದೇಶ್, ಪಶುಪಾಲನಾ ಇಲಾಖೆ ಉಪ ನಿರ್ದೇಶಕ ತಮ್ಮಯ್ಯ, ರಾಷ್ಟ್ರೀಯ ಮಾಹಿತಿ ಕೇಂದ್ರದ(ಎನ್‍ಐಸಿ) ಅಜೀತ್, ನಂದ, ಕ್ಷೇತ್ರ ಶಿಕ್ಷಣಾಧಿಕಾರಿ ಗಾಯತ್ರಿ, ವಿಕಲಚೇತನರ ಇಲಾಖೆ ಅಧಿಕಾರಿ ದೇವರಾಜು ಇತರರು ಇದ್ದರು.

Translate »