ಪ್ರಕೃತಿ ವಿಕೋಪ ಕಾಮಗಾರಿ ಪೂರ್ಣಗೊಳಿಸಲು ಸೂಚನೆ

ಮಡಿಕೇರಿ: ಇನ್ನೆರಡು ತಿಂಗ ಳಲ್ಲಿ ಮುಂಗಾರು ಮಳೆ ಆರಂಭವಾಗ ಲಿದ್ದು, ಪ್ರಕೃತಿ ವಿಕೋಪ ಸಂಬಂಧ ಈಗಾ ಗಲೇ ಕೈಗೊಳ್ಳಲಾಗಿರುವ ಮನೆ ಸೇರಿದಂತೆ ರಸ್ತೆ, ಸೇತುವೆ, ತಡೆಗೋಡೆ ಮತ್ತಿತರ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣ ಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅನ್ಬುಕುಮಾರ್ ಸ್ಪಷ್ಟ ಸೂಚನೆ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಲೋಕೋಪಯೋಗಿ, ಪಂಚಾಯತ್ ರಾಜ್, ನಗರಾಭಿವೃದ್ಧಿ, ಸಣ್ಣ ನೀರಾವರಿ ಹೀಗೆ ನಾನಾ ಇಲಾಖೆಗಳ ಮೂಲಕ ಕೈಗೊಳ್ಳಲಾಗಿರುವ ಕಾಮಗಾರಿಗಳನ್ನು ಒಂದು ತಿಂಗಳಲ್ಲಿ ಪೂರ್ಣಗೊಳಿಸು ವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ನಿರ್ದೇಶನ ನೀಡಿದರು.

ಪ್ರಕೃತಿ ವಿಕೋಪದಿಂದ ಮನೆ ಕಳೆದು ಕೊಂಡವರಿಗೆ ಮಾದಾಪುರ, ಮದೆ ಮತ್ತು ಕರ್ಣಂಗೇರಿಗಳಲ್ಲಿ ಮನೆ ನಿರ್ಮಿಸುವ ಕಾರ್ಯ ನಡೆಯುತ್ತಿದೆ. ಮನೆ ನಿರ್ಮಾಣ ಕಾರ್ಯವನ್ನು ಇನ್ನಷ್ಟು ಚುರುಕುಗೊಳಿಸ ಲಾಗಿದೆ. ಮನೆ ನಿರ್ಮಾಣ ಸಂದರ್ಭ ದಲ್ಲಿ ನಿರಂತರ ವಿದ್ಯುತ್ ಪೂರೈಕೆ ಮಾಡು ವಂತೆ ಸೆಸ್ಕ್ ಇಲಾಖೆ ಅಧಿಕಾರಿಗಳಿಗೆ ತಿಳಿ ಸಿದರು. ಸಂತ್ರಸ್ತರಿಗೆ ಮನೆ ಹಾಗೂ ಬೆಳೆ ಹಾನಿಯ ಪರಿಹಾರ ತಲುಪಿದೆಯೇ ಎಂಬ ಬಗ್ಗೆ ಪರಿಶೀಲಿಸಿಕೊಳ್ಳುವಂತೆ ಸಂಬಂಧ ಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಸಂತ್ರಸ್ತರ ಖಾತೆಗೆ ಪರಿಹಾರದ ಮೊತ್ತ ಜಮೆಯಾ ಗಿಲ್ಲ ಎಂಬುದು ಕೇಳಿ ಬಂದಿದೆ. ಆದ್ದ ರಿಂದ ಈ ಬಗ್ಗೆ ಬ್ಯಾಂಕ್‍ಗಳಿಂದ ಮಾಹಿತಿ ಪಡೆದು ಸಲ್ಲಿಸುವಂತೆ ಸೂಚಿಸಿದರು.

ಸಂತ್ರಸ್ತರು ವಾಸಿಸುತ್ತಿರುವ ಹತ್ತಿರದ ಪ್ರದೇಶಗಳಲ್ಲಿ ಉದ್ಯೋಗ, ಕೃಷಿ ಮತ್ತಿತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತಾ ಗಲು 10 ಸಾವಿರ ರೂ. ಮನೆ ಬಾಡಿಗೆ ಭತ್ಯೆ ಯನ್ನು ಭರಿಸುತ್ತಿರುವುದು ಇಡೀ ದೇಶದ ಲ್ಲಿಯೇ ಮೊದಲು. ಆದ್ದರಿಂದ ಸರ್ಕಾ ರದ ಕಾರ್ಯಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ದೊರೆಯುವಂತಾಗಲು ಜಿಲ್ಲಾ ವೆಬ್‍ಸೈಟ್‍ನಲ್ಲಿ ವಿವಿಧ ಕಾಮಗಾರಿಗಳು, ಪರಿಹಾರ ಮತ್ತಿತರ ಮಾಹಿತಿ ಅಪ್‍ಡೇಟ್ ಮಾಡುವಂತಾಗಬೇಕು ಎಂದು ಜಿಲ್ಲಾ ಉಸ್ತು ವಾರಿ ಕಾರ್ಯದರ್ಶಿ ಸಲಹೆ ಮಾಡಿದರು.
ಇನ್ಫೋಸಿಸ್ ಸಂಸ್ಥೆಯವರು ಸಹ 200 ಮನೆಗಳನ್ನು ನಿರ್ಮಿಸಲು ಮುಂದೆ ಬಂದಿದ್ದು, ಅವರಿಗೆ ಸೂಕ್ತ ಜಾಗವನ್ನು ಒದಗಿಸು ವಂತೆ ಜಿಲ್ಲಾಧಿಕಾರಿ ಅವರಿಗೆ ಉಸ್ತುವಾರಿ ಕಾರ್ಯದರ್ಶಿ ಸಲಹೆ ಮಾಡಿದರು.

ಮಡಿಕೇರಿ ನಗರದಲ್ಲಿ ಹಳೇ ಖಾಸಗಿ ಬಸ್ ನಿಲ್ದಾಣ ಹಾಗೂ ಜಿಲ್ಲಾಡಳಿತ ಭವ ನದ ಬಳಿ ತಡೆಗೋಡೆ ನಿರ್ಮಾಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿ ಕಾರಿಗಳಿಗೆ ಅನ್ಬುಕುಮಾರ್ ಸೂಚಿಸಿದರು.

ದಿಡ್ಡಳ್ಳಿಯಲ್ಲಿ ಗಿರಿಜನರಿಗಾಗಿ ಮನೆ ನಿರ್ಮಿ ಸಲಾಗಿದೆ. ಆದರೆ ಇದುವರೆಗೂ ಗಿರಿಜನ ರಿಗೆ ಮನೆಗಳನ್ನು ಏಕೆ ಹಸ್ತಾಂತರ ಮಾಡಿಲ್ಲ ಎಂದು ಅತೃಪ್ತಿ ವ್ಯಕ್ತಪಡಿಸಿದ ಜಿಲ್ಲಾ ಉಸ್ತು ವಾರಿ ಕಾರ್ಯದರ್ಶಿ, ಕಾಮಗಾರಿ ಪೂರ್ಣಗೊಂಡಿರುವ ಮನೆಗಳನ್ನಾದರೂ ಹಸ್ತಾಂತರಿಸಿಲ್ಲವೇಕೆ ಎಂದು ಪ್ರಶ್ನಿಸಿದರು. ಮುಂದಿನ ತಿಂಗಳು ಲೋಕಸಭಾ ಚುನಾ ವಣೆಯ ನೀತಿ ಸಂಹಿತೆ ಜಾರಿಗೆ ಬರ ಲಿದೆ. ಜೊತೆಗೆ ಮಳೆ ಆರಂಭವಾಗಲಿದೆ. ಆದ್ದರಿಂದ ಕೂಡಲೇ ಮನೆ ಹಸ್ತಾಂತರ ಮಾಡುವಂತೆ ಜಿಲ್ಲಾ ಉಸ್ತುವಾರಿ ಕಾರ್ಯ ದರ್ಶಿ ಹೇಳಿದರು.

ಸಮಾಜ ಕಲ್ಯಾಣ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ಅರ್ಹರಿಗೆ ಸೌಲ ಭ್ಯಗಳು ತಲುಪಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಅನ್ಬುಕುಮಾರ್ ಅವರು ನಿರ್ದೇಶನ ನೀಡಿದರು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಿಂದುಳಿದ ವರ್ಗದ ವರಿಗೆ ಬಿಡುಗಡೆಯಾಗಿರುವ ಅನುದಾನ ವನ್ನು ಖರ್ಚು ಮಾಡಬೇಕು. ಸಮಾಜದ ಅಭಿವೃದ್ಧಿಗಾಗಿ ಬಿಡುಗಡೆಯಾಗಿರುವ ಅನು ದಾನವನ್ನು ವಿನಿಯೋಗಿಸುವಂತೆ ಅನ್ಬು ಕುಮಾರ್ ಸೂಚನೆ ನೀಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಶ್ರೀನಿವಾಸ್, 3,916 ವಾಸದ ಮನೆ ಹಾನಿಗೆ 1,060 ಲಕ್ಷ ರೂ. ಪರಿಹಾರ ವಿತರಿಸಲಾಗಿದೆ. ಗೃಹೋಪಯೋಗಿ ವಸ್ತುಗಳನ್ನು ಕಳೆದು ಕೊಂಡ ಸಂತ್ರಸ್ತರಿಗೆ ಮುಖ್ಯಮಂತ್ರಿ ಅವರ ಪರಿಹಾರ ನಿಧಿಯಡಿ 510 ಲಕ್ಷ ರೂ. ಬಿಡುಗಡೆಯಾಗಿದೆ. ಮನೆ ಕಳೆದುಕೊಂಡ ಅರ್ಹ ಸಂತ್ರಸ್ತರಿಗೆ ನವೆಂಬರ್ ಮಾಹೆ ಯಿಂದ 10 ಸಾವಿರ ರೂ. ಭತ್ಯೆ ನೀಡಲಾ ಗುತ್ತಿದೆ. ಈ ಸಂಬಂಧ 48 ಲಕ್ಷ ರೂ. ಬಿಡು ಗಡೆಯಾಗಿದೆ ಎಂದು ಮಾಹಿತಿ ನೀಡಿದರು.

ಲೋಕೋಪಯೋಗಿ ಇಲಾಖೆ ಕಾರ್ಯ ಪಾಲಕ ಎಂಜಿನಿಯರ್ ಇಬ್ರಾಹಿಂ, ಪಂಚಾ ಯತ್ ರಾಜ್ ಕಾರ್ಯಪಾಲಕ ಎಂಜಿನಿ ಯರ್ ರೇವಣ್ಣವರ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಮಂಜುನಾಥ್, ಕೃಷಿ ಇಲಾಖೆ ಜಂಟಿ ನಿರ್ದೇಶಕ ರಾಜು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾ ಧಿಕಾರಿ ಡಾ.ಕೆ. ಜಗದೀಶ್, ಜಿಪಂ ಸಹಾ ಯಕ ಕಾರ್ಯದರ್ಶಿ ಬಾಬು, ಭೂ ದಾಖಲೆಗಳ ಸಹಾಯಕ ನಿರ್ದೇಶಕ ಷಂಶುದ್ದೀನ್, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕ ಗೋಪಾ ಲಕೃಷ್ಣ, ಪೌರಾಯುಕ್ತ ರಮೇಶ್, ಸಹಾ ಯಕ ಕಾರ್ಯಪಾಲಕ ಎಂಜಿನಿಯರ್ ಹೇಮಂತ್ ಕುಮಾರ್, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕg ಕೆಂಚಪ್ಪ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಮಚ್ಚಾಡೋ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪ ನಿರ್ದೇಶಕಿ ರಾಧ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಭಾರತಿ, ಐಟಿಡಿಪಿ ಇಲಾಖಾ ಅಧಿಕಾರಿ ಶಿವ ಕುಮಾರ್, ಬಿಸಿಎಂ ಇಲಾಖಾ ಅಧಿಕಾರಿ ಅವೀನ್, ಅಂಬೇಡ್ಕರ್ ಅಭಿವೃದ್ಧಿ ನಿಗ ಮದ ವ್ಯವ ಸ್ಥಾಪಕ ಕುಮಾರ ಇತರರು ಹಲವು ಮಾಹಿತಿ ನೀಡಿದರು.