ಅನಗತ್ಯ ಹೆರಿಗೆ ಶಸ್ತ್ರ ಚಿಕಿತ್ಸೆ ಕಡಿವಾಣಕ್ಕೆ ಸೂಚನೆ
ಹಾಸನ

ಅನಗತ್ಯ ಹೆರಿಗೆ ಶಸ್ತ್ರ ಚಿಕಿತ್ಸೆ ಕಡಿವಾಣಕ್ಕೆ ಸೂಚನೆ

August 8, 2018

ಹಾಸನ: ಜಿಲ್ಲೆಯಲ್ಲಿ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಯಲ್ಲಿ ನಡೆಯುವ ಅನಗತ್ಯ ಹೆರಿಗೆ ಶಸ್ತ್ರಚಿಕಿತ್ಸೆಗಳು ಸಂಪೂರ್ಣ ನಿಯಂತ್ರಣಗೊಳ್ಳಬೇಕಿದ್ದು, ಕನಿಷ್ಠ ಶೇ.50ರಷ್ಟು ಶಿಶುಗಳು ಸಹಜ ಜನನವಾಗಬೇಕು ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೂಚಿಸಿದರು.

ತಮ್ಮ ಕಚೇರಿ ಸಭಾಂಗಣದಲ್ಲಿಂದು ನಡೆದ ಜಿಲ್ಲಾ ಆರೋಗ್ಯ ಅಭಿಯಾನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸರ್ಕಾರಿ ಆಸ್ಪತ್ರೆಗಳಲ್ಲಿ ಶೇ.45-50 ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಶೇ.67ರಷ್ಟು ಹೆರಿಗೆಗಳು ಶಸ್ತ್ರ ಚಿಕಿತ್ಸೆ ಮೂಲಕವೇ ಆಗುತ್ತಿವೆ. ಎಲ್ಲಾ ವೈದ್ಯರೂ ಆದಷ್ಟು ಸಹಜ ಹೆರಿಗೆಗೆ ಗಮನ ಹರಿಸಬೇಕು. ಈ ಬಗ್ಗೆ ಎಲ್ಲಾ ಆಸ್ಪತ್ರೆಗಳಲ್ಲಿ ಸುತ್ತೋಲೆ ಹೊರಡಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಅನಿವಾರ್ಯ ಸಂದರ್ಭಗಳಲ್ಲಿ ಶಸ್ತ್ರ ಚಿಕಿತ್ಸೆ ಮಾಡಬಹುದು. ಆದರೆ ಮುಕ್ಕಾಲು ಭಾಗದಷ್ಟು ಹೆರಿಗೆಗಳು ಶಸ್ತ್ರ ಚಿಕಿತ್ಸೆ ಮೂಲಕವೇ ನಡೆಸಿದರೆ ಸಹಜ ಜನನ ಪ್ರಕ್ರಿಯೆ ನಿರ್ಲಕ್ಷಿಸಿದಂತಾಗುತ್ತದೆ. ಎಲ್ಲಾ ಆಸ್ಪತ್ರೆಗಳು ಇದನ್ನು ಪಾಲಿಸಬೇಕು. ಉದ್ದೇಶ ಪೂರ್ವಕವಾಗಿ ನಿಯಮ ಉಲ್ಲಂಘಿಸಿದರೆ ಕಾನೂನು ಕ್ರಮ ಜರುಗಿಸಲಾಗುವುದು. ಅಲ್ಲದೆ ಗರಿಷ್ಠ ಪ್ರಮಾಣದ ಸಿಜೇರಿಯನ್ ನಡೆಸುತ್ತಿರುವ ಖಾಸಗಿ ಆಸ್ಪತ್ರೆಗಳಿಗೆ ಕಾರಣ ಕೇಳಿ ನೋಟೀಸ್ ಜಾರಿ ಮಾಡುವಂತೆ ತಿಳಿಸಿದರು.

ವೈದ್ಯರ ಲಿಖಿತ ಔಷಧ ಸೂಚನೆ ಪತ್ರವಿಲ್ಲದೆ ಗರ್ಭಪಾತದ ಮಾತ್ರೆಗಳನ್ನು ನೀಡುತ್ತಿರುವುದು ಅನೇಕ ಸಾವು ನೋವು, ವೈದಕೀಯ ಸಮಸ್ಯೆಗಳಿಗೆ ಕಾರಣವಾಗುತ್ತಿದೆ. ಇನ್ನು ಮುಂದೆ ಜಿಲ್ಲೆಯ ಯಾವುದೇ ಮೆಡಿಕಲ್ ಶಾಪ್‍ಗಳಲ್ಲಿ ವೈದ್ಯರ ಪತ್ರವಿಲ್ಲದೆ ಅಂತಹ ಹೆಚ್.ಎನ್.ಶೆಡ್ಯೂಲ್‍ಗೆ ಸೇರಿದ ಯಾವುದೇ ಮಾತ್ರೆ ಔಷಧ ಮಾರಾಟ ಮಾಡುವಂತಿಲ್ಲ. ಒಂದು ವೇಳೆ ಅಂತಹ ಪ್ರಕರಣಗಳು ಕಂಡು ಬಂದಲ್ಲಿ ತಕ್ಷಣ ಪರವಾನಗಿ ರದ್ದು ಪಡಿಸಲಾಗುವುದು. ಈ ಬಗ್ಗೆ ಎಲ್ಲಾ ಮೆಡಿಕಲ್ ಶಾಪ್‍ಗಳಿಗೆ ಸಾಮಾನ್ಯ ತಿಳುವಳಿಕೆ ಪತ್ರ ರವಾನಿಸು ವಂತೆ ಸೂಚಿಸಿದರು.

ಮಾತೃ ಪೂರ್ಣ ಯೋಜನೆಯಡಿ ಪೌಷ್ಟಿಕ ಆಹಾರ ವಿತರಣೆಯಾಗುತ್ತಿದ್ದರೂ ಅಪೌಷ್ಟಿಕತೆಯಿಂದ ತಾಯಿ, ಮಕ್ಕಳ ಮರಣ ಪ್ರಮಾಣ ಸಂಪೂರ್ಣ ಕಡಿಮೆ ಮಾಡಲು ಸಾಧ್ಯವಾಗಿಲ್ಲ. ಕಡಿಮೆ ತೂಕದ ಕಾರಣ ಹುಟ್ಟುವಾಗಲೇ ನವಜಾತ ಶಿಶು ಗಳು ಸಾವನಪ್ಪುತ್ತಿವೆ. ಹಾಗಾಗಿ ಈಗಿರುವ ವ್ಯವಸ್ಥೆಯಲ್ಲಿ ಮಾರ್ಪಾಡು ಅಗತ್ಯವಿದೆ. ಅಂಗನವಾಡಿಗಳು ದೂರ ಎನ್ನುವ ಅಥವಾ ಇನ್ನಾವುದೋ ಕಾರಣಕ್ಕೆ ಶೇ.40ರಷ್ಟು ಗರ್ಭಿಣಿ, ಬಾಣಂತಿಯರು ಅಂಗನವಾಡಿ ಗಳಿಗೆ ಆಗಮಿಸುತ್ತಿಲ್ಲ. ಹೀಗಾಗಿ ಮಾತೃ ಪೂರ್ಣ ಯೋಜನೆ ಶೇ.100ರಷ್ಟು ಗುರಿ ಸಾಧನೆ ಸಾಧ್ಯವಾಗಿಲ್ಲ. ಇದರಿಂದ ತಾಯಾಂ ದಿರು ಮನೆಯಲ್ಲಿಯೇ ಹಾಲು ಅಥವಾ ನೀರಿನೊಂದಿಗೆ ಬೆರೆಸಿ ಕುಡಿಯು ಬಹು ದಾದ ಪೂರಕ ಪೌಷ್ಟಿಕ ಆಹಾರ ಸಿದ್ಧಪಡಿಸಿ ವಿತರಿಸಬೇಕಿದೆ. ಜಿಲ್ಲೆಯಲ್ಲಿಯೇ ಇದನ್ನು ಪ್ರಾಯೋಗಿಕವಾಗಿ ಪ್ರಾರಂಭಿಸ ಬೇಕಾ ಗಿದ್ದು, ಮುಂದಿನ 15 ದಿನಗಳೊಳಗೆ ಈ ಆಹಾರ ಸಿದ್ಧವಾಗಬೇಕು. ಸಿಎಫ್‍ಡಿ ಆರ್‍ಐ ಸೇರಿದಂತೆ ಇದಕ್ಕಾಗಿ ತಜ್ಞರ ಸಮಿತಿ ರಚಿಸಿ ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ಜಿಪಂ ಸಿಇಓ ಜಿ.ಜಗದೀಶ್ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಆಶಾ ಕಾರ್ಯ ಕರ್ತೆಯರ ಸೇವೆ ತೃಪಿಕರವಾಗಿಲ್ಲ. ಎಲ್ಲರೂ ಕಡ್ಡಾಯವಾಗಿ ಗರ್ಭಿಣಿ, ಬಾಣಂತಿ ಯರೊಂದಿಗೆ ನಿರಂತರ ಸಂರ್ಪಕದಲ್ಲಿದ್ದು, ಮಾಹಿತಿ ನೀಡಬೇಕು. ಅದೇ ರೀತಿ 108 ಅಂಬುಲೆನ್ಸ್ ಸೇವೆ ಕೂಡ ಸರಿಯಾಗಿ ದೊರೆ ಯುತ್ತಿಲ್ಲ. ಈ ಬಗ್ಗೆ ಆರೋಗ್ಯ ಇಲಾಖೆ ಅಧಿಕಾರಿಗಳು ಹೆಚ್ಚಿನ ಗಮನ ಹರಿಸಿ ಕೂಡಲೇ ವ್ಯವಸ್ಥೆ ಸರಿಪಡಿಸಬೇಕಿದೆ ಎಂದು ಸೂಚಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಶಂಕರ್, ಜಿಲ್ಲಾ ಆರ್‍ಸಿಹೆಚ್ ಅಧಿಕಾರಿ ಡಾ.ಜನಾರ್ಧನ್, ಜಿಲ್ಲಾ ಕ್ಷಯ ರೋಗ ನಿಯಂತ್ರಣಾಧಿಕಾರಿ ಡಾ.ನಾಗೇಶ್ ಆರಾಧ್ಯ, ಜಿಲ್ಲಾ ಮಲೇ ರಿಯಾ ನಿಯಂ ತ್ರಣಾಧಿಕಾರಿ ಡಾ.ರಾಜ್ ಗೋಪಾಲ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಪದ್ಮಾ ಸೇರಿದಂತೆ ವಿವಿಧ ತಾಲೂಕು ವೈದ್ಯಾಧಿಕಾರಿಗಳು, ಇಲಾಖಾಧಿಕಾರಿಗಳು, ವಿವಿಧ ಕಾರ್ಯಕ್ರಮ ಮೇಲ್ವಿಚಾರಣಾಧಿಕಾರಿಗಳು ಸಭೆಯಲ್ಲಿದ್ದರು.

Translate »