ನ.26, ಕನಕದಾಸರ ಜಯಂತಿ ಆಚರಿಸಲು ನಿರ್ಧಾರ
ಚಾಮರಾಜನಗರ

ನ.26, ಕನಕದಾಸರ ಜಯಂತಿ ಆಚರಿಸಲು ನಿರ್ಧಾರ

November 19, 2018

ಚಾಮರಾಜನಗರ: ಜಿಲ್ಲಾಡಳಿತ ಹಾಗೂ ವಿವಿಧ ಇಲಾಖೆಗಳು ಸೇರಿದಂತೆ ಎಲ್ಲರ ಸಹಕಾರದೊಂದಿಗೆ ನ. 26ರಂದು ಭಕ್ತಶ್ರೇಷ್ಠ ಕನಕದಾಸರ ಜಯಂತಿ ಕಾರ್ಯಕ್ರಮ ನಗರದ ಪೇಟೆ ಪ್ರೈಮರಿ ಶಾಲಾ ಆವರಣದಲ್ಲಿ ಅರ್ಥಪೂರ್ಣ ವಾಗಿ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ.ಗಾಯತ್ರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕನಕದಾಸರ ಜಯಂತಿ ಆಚರಣೆ ಸಂಬಂಧ ನಡೆದ ಪೂರ್ವಭಾವಿ ಸಭೆಯಲ್ಲಿ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜನೆ ಮಾಡಲು ತೀರ್ಮಾನಿಸಲಾಯಿತು.

ಜಯಂತಿ ಕಾರ್ಯಕ್ರಮ ಆಯೋಜನೆ ಸಂಬಂಧ ಸಮುದಾ ಯದ ಮುಖಂಡರು ಹಾಗೂ ವಿವಿಧ ಸಂಘಸಂಸ್ಥೆಗಳ ಸಲಹೆ ಗಳನ್ನು ಆಲಿಸಿದ ನಂತರ ಮಾತನಾಡಿದ ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ.ಗಾಯತ್ರಿ ಅವರು ವಿವಿಧ ಇಲಾಖೆಗಳನ್ನೊಳಗೊಂಡ ಮೆರವಣಿಗೆ, ಸ್ವಾಗತ, ಅತಿಥ್ಯ ಸೇರಿದಂತೆ ಹಿಂದಿನ ಸಮಿತಿಗಳನ್ನು ಈ ಬಾರಿಯೂ ಸಹ ಮುಂದುವರೆಸಲಾಗಿದೆ ಎಂದು ತಿಳಿಸಿದರು.ಸಮುದಾಯದ ಮುಖಂಡರು ಸೇರಿದಂತೆ ಎಲ್ಲರ ಸಲಹೆ ಹಾಗೂ ಸಹಕಾರ ಪಡೆದು ಜಯಂತಿ ಕಾರ್ಯಕ್ರಮ ಏರ್ಪ ಡಿಸಬೇಕಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಕನಕದಾಸರ ಕೀರ್ತನೆಗಳು, ಅವರ ವಿಚಾ ರಗಳ ಕುರಿತು ಉಪನ್ಯಾಸ ನೀಡಲು ಸೂಕ್ತ ಮುಖ್ಯ ಭಾಷಣ ಕಾರರನ್ನು ಆಯ್ಕೆ ಮಾಡುವ ಸಂಬಂಧ ನೀಡುವ ಸಲಹೆಗಳನ್ನು ಪರಿಗಣಿಸಲಾಗುವುದು. ಅಂತಿಮವಾಗಿ ಎಲ್ಲರ ಒಪ್ಪಿಗೆ ಅನುಸಾರ ಆಯ್ಕೆ ನಡೆಸಿ ಕಾರ್ಯಕ್ರಮ ನಡೆಸಲಾಗುವುದು. ಕಾರ್ಯಕ್ರಮಕ್ಕೆ ಬೇಕಿರುವ ಸಿದ್ಧತೆಗಳನ್ನು ಅಚ್ಚುಕಟ್ಟಾಗಿ ಅಧಿಕಾರಿಗಳು ಸುಸೂತ್ರವಾಗಿ ವಹಿಸಬೇಕು ಎಂದು ತಿಳಿಸಿದರು.

ಆಹ್ವಾನ ಪತ್ರಿಕೆ, ಮುದ್ರಣ, ವಿತರಣೆಯಂತಹ ಕೆಲಸಗಳನ್ನು ಸಮರ್ಪಕವಾಗಿ ಕೈಗೊಳ್ಳಬೇಕು. ವೇದಿಕೆ ಸಿದ್ಧತೆಗೆ ಸಹ ಅಗತ್ಯ ಅನುಸಾರ ಕಾರ್ಯೋನ್ಮುಖರಾಗಬೇಕು. ಶಿಷ್ಟಾಚಾರ ಪ್ರಕಾರ ಕಾರ್ಯಕ್ರಮ ಅರ್ಥಪೂರ್ಣವಾಗಿ ಆಯೋಜಿಸಲು ಅಧಿಕಾರಿಗಳು ಎಲ್ಲ ಕ್ರಮಗಳಿಗೆ ಮುಂದಾಗಬೇಕು ಎಂದು ನಿರ್ದೇಶನ ನೀಡಿದರು. ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಬಾಲರಾಜು, ಹೆಚ್ಚುವರಿ ಜಿಲ್ಲಾ ಪೊಲೀಸ್ ಅಧಿಕಾರಿ ಗೀತಾ ಪ್ರಸನ್ನ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಎಚ್.ಚೆನ್ನಪ್ಪ, ಕನಕ ಸಮಾಜದ ಅಧ್ಯಕ್ಷ ರಾಜಶೇಖರ್, ಮುಖಂಡರಾದ ಜನ್ನೂರು ಮಹದೇವ್, ಕೆ.ಬಿ.ಮಹದೇವೇ ಗೌಡ, ನಂಜುಂಡೇಗೌಡ, ಬಸಪ್ಪನಪಾಳ್ಯ ನಟರಾಜು, ಶಿವ ರಾಮು, ಹೇಮಂತ್ ಕುಮಾರ್, ಚಿನ್ನಸ್ವಾಮಿ, ಲಿಂಗಣ್ಣ, ಸೋಮಣ್ಣ, ಆಲೂರು ನಾಗೇಂದ್ರ, ಬ್ಯಾಡಮೂಡ್ಲು ಬಸವಣ್ಣ, ಕೆ.ಎಂ.ನಾಗರಾಜು, ಅಂಬರೀಷ ಕದಂಬ, ಪುರುಷೋತ್ತಮ್, ನಿಜಧÀನಿ ಗೋವಿಂದರಾಜು, ಪರ್ವತರಾಜು, ಜಯಕುಮಾರ್, ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Translate »