ಟ್ರಾಮಾ ಕೇರ್ ಸೆಂಟರ್‍ನಲ್ಲಿ ಈಗ ಕೊರೊನಾ ಸೋಂಕಿತರಿಗೆ ಚಿಕಿತ್ಸೆ
ಮೈಸೂರು

ಟ್ರಾಮಾ ಕೇರ್ ಸೆಂಟರ್‍ನಲ್ಲಿ ಈಗ ಕೊರೊನಾ ಸೋಂಕಿತರಿಗೆ ಚಿಕಿತ್ಸೆ

April 21, 2021

ಮೈಸೂರು,ಏ.20(ಆರ್‍ಕೆ)- ಮೈಸೂ ರಿನ ಕೆಆರ್‍ಎಸ್ ರಸ್ತೆಯ ಪಿಕೆಟಿಬಿ ಆಸ್ಪತ್ರೆ ಆವರಣದಲ್ಲಿರುವ ಟ್ರಾಮಾ ಕೇರ್ ಸೆಂಟರ್ ನಲ್ಲಿ ನಾಳೆ (ಏ.21)ಯಿಂದ ಕೊರೊನಾ ಸೋಂಕಿ ತರಿಗೆ ಚಿಕಿತ್ಸಾ ವ್ಯವಸ್ಥೆ ಆರಂಭವಾಗಲಿದೆ.

ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮ ಶೇಖರ್, ಮಂಗಳವಾರ ಸಂಸದ ಪ್ರತಾಪ್ ಸಿಂಹ, ಮುಡಾ ಅಧ್ಯಕ್ಷ ಹೆಚ್.ವಿ. ರಾಜೀವ್ ಅವರೊಂದಿಗೆ ಟ್ರಾಮಾ ಕೇರ್ ಸೆಂಟರ್‍ಗೆ ಭೇಟಿ ನೀಡಿ, ಸಿದ್ಧತೆಯನ್ನು ಪರಿಶೀಲಿಸಿದರು. ಕಟ್ಟಡದ ಎರಡನೇ ಮಹಡಿಯ 5 ವಾರ್ಡ್‍ಗಳಲ್ಲಿ ಕೋವಿಡ್ ಸೋಂಕಿತರಿಗಾಗಿ 100 ಹಾಸಿಗೆಗಳ, ಸೆಂಟ್ರಲ್ ಆಕ್ಸಿಜನ್ ಸಿಸ್ಟಂನೊಂದಿಗೆ ಸಜ್ಜು ಗೊಳಿಸಿದ್ದು, ಸಚಿವರು ವೀಕ್ಷಿಸಿದರು.

ಪ್ರತೀ ದಿನ ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಈಗಾಗಲೇ ಮೇಟಗಳ್ಳಿ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಹಾಸಿಗೆ ಗಳು ಭರ್ತಿಯಾಗಿವೆ. ಈಗ ಟ್ರಾಮಾ ಕೇರ್ ಸೆಂಟರ್ ಕಟ್ಟಡದಲ್ಲಿ ಆರಂಭಿಕ 100 ಹಾಸಿಗೆ ಗಳಲ್ಲಿ ಕೊರೊನಾ ಸೋಂಕಿತರ ಚಿಕಿತ್ಸೆಗೆ ಪರ್ಯಾಯ ವ್ಯವಸ್ಥೆ ಮಾಡಿದ್ದೇವೆ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಜಿಲ್ಲಾ ಉಸ್ತುವಾರಿ ಸಚಿವರಿಗೆ ವಿವರಿಸಿದರು.

ಇಲ್ಲಿನ ನೆಲಮಹಡಿಯಲ್ಲಿ ನಡೆಯುತ್ತಿದ್ದ ಕೊರೊನಾ ಲಸಿಕೆ ನೀಡುವ ಪ್ರಕ್ರಿಯೆಯನ್ನು ಇದರ ಎದುರುಗಡೆ, ಬೃಂದಾವನ ಬಡಾ ವಣೆಯ ಸರ್ಕಾರಿ ಆಯುರ್ವೇದ ಪಂಚ ಕರ್ಮ ಹೈಟೆಕ್ ಆಸ್ಪತ್ರೆಗೆ ಸ್ಥಳಾಂತರಿಸ ಲಾಗುವುದು ಎಂದು ಜಿಲ್ಲಾಧಿಕಾರಿಗಳು, ಸಚಿವರಿಗೆ ವಿವರಿಸಿದರು.

ಕೊರೊನಾ ಲಸಿಕೆಗೆ ನೋಂದಣಿ ಮಾಡು ತ್ತಿರುವ ಪ್ರಕ್ರಿಯೆ, ಲಸಿಕೆ ನೀಡುವ ಸ್ಥಳ, ವಿಶ್ರಾಂತಿ ಕೊಠಡಿ, ಐಸಿಯು ವಾರ್ಡ್, ಆಕ್ಸಿಜನ್ ಸಿಲಿಂಡರ್ ದಾಸ್ತಾನು ವ್ಯವಸ್ಥೆ, ವೈದ್ಯರು, ಸಿಬ್ಬಂದಿಗಳ ಕಾರ್ಯಶೈಲಿ ಬಗ್ಗೆಯೂ ಇಂದು ಖುದ್ದು ಭೇಟಿ ನೀಡಿ ಸಚಿವರು ಪರಿಶೀಲನೆ ನಡೆಸಿದರು.
ಆರಂಭದಲ್ಲಿ 100 ಹಾಸಿಗೆ ಸಾಮಥ್ರ್ಯದ ಕೊರೊನಾ ಸೋಂಕಿತರ ಚಿಕಿತ್ಸಾ ವಾರ್ಡ್ ವ್ಯವಸ್ಥೆ ಮಾಡಲಾಗಿದೆ. ಅಗತ್ಯ ಬಿದ್ದಲ್ಲಿ ನೆಲ ಮತ್ತು ಮೊದಲ ಮಹಡಿಯಲ್ಲೂ ಚಿಕಿತ್ಸಾ ಸೌಲಭ್ಯ ಕಲ್ಪಿಸುತ್ತೇವೆ ಎಂದು ಜಿಲ್ಲಾಧಿಕಾರಿ ಗಳು ಸಚಿವರಿಗೆ ತಿಳಿಸಿದರು. ಮೈಸೂರು ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ನಿರ್ದೇಶಕ ಡಾ.ಸಿ.ಪಿ.ನಂಜರಾಜ, ಟ್ರಾಮಾ ಕೇರ್ ಸೆಂಟರ್‍ನಲ್ಲಿ ವ್ಯವಸ್ಥೆ ಕಲ್ಪಿಸಿ ನಿರ್ವಹಿಸುತ್ತಿರುವ ಪಿಕೆಟಿಬಿ ಆಸ್ಪತ್ರೆ ವೈದ್ಯ ಕೀಯ ಅಧೀಕ್ಷಕ ಡಾ.ವಿರೂಪಾಕ್ಷ, ಸ್ಥಾನಿಕ ವೈದ್ಯಾಧಿಕಾರಿ ಡಾ.ಜಯಶೇಖರ್, ಮೈಸೂರು ಮೆಡಿಕಲ್ ಮತ್ತು ಸಂಶೋಧನಾ ಸಂಸ್ಥೆ ಸಹ ಪ್ರಾಧ್ಯಾಪಕ ಡಾ.ಪ್ರಶಾಂತ್ ಸೇರಿ ದಂತೆ ಹಲವು ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Translate »