ನೂಪುರ್ ಶರ್ಮಾ ಬೆಂಬಲಿಸಿದ ವ್ಯಕ್ತಿಯ ಶಿರಚ್ಛೇದಿಸಿ, ಪ್ರಧಾನಿ ಮೋದಿಗೂ ಬೆದರಿಕೆ: ದುಷ್ಕರ್ಮಿಗಳ ಬಂಧನ
News

ನೂಪುರ್ ಶರ್ಮಾ ಬೆಂಬಲಿಸಿದ ವ್ಯಕ್ತಿಯ ಶಿರಚ್ಛೇದಿಸಿ, ಪ್ರಧಾನಿ ಮೋದಿಗೂ ಬೆದರಿಕೆ: ದುಷ್ಕರ್ಮಿಗಳ ಬಂಧನ

June 29, 2022

ಉದಯಪುರ: ಇಡೀ ದೇಶವನ್ನೇ ಬೆಚ್ಚಿ ಬೀಳಿಸಿರುವ ರಾಜಸ್ಥಾನದ ಉದಯಪುರದ ಟೈಲರ್ ಹತ್ಯೆಯ ಹಂತಕರನ್ನು ಪೆÇಲೀಸರು ಬಂಧಿಸಿ ದ್ದಾರೆ. ಮಾಲ್ದಾಸ್ ಸ್ಟ್ರೀಟ್ ಪ್ರದೇಶ ದಲ್ಲಿ ಟೈಲರ್ ಶಿರಚ್ಛೇದ ಮಾಡಿ, ಬಳಿಕ ವಿಡಿಯೋವೊಂದನ್ನು ಸಾಮಾ ಜಿಕ ಮಾಧ್ಯಮಗಳಲ್ಲಿ ಹಂಚಿಕೊಂ ಡಿದ್ದ ಆರೋಪಿಗಳು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಹತ್ಯೆ ಮಾಡುವ ಬೆದರಿಕೆ ಹಾಕಿದ್ದರು. ಈ ಇಬ್ಬರೂ ದುಷ್ಕರ್ಮಿಗಳನ್ನು ರಾಜ ಸಮಂದ್‍ನಲ್ಲಿ ಬಂಧಿಸಲಾಗಿದೆ.
ಈ ಪ್ರಕರಣದ ತನಿಖೆಯನ್ನು ತ್ವರಿ ತಗತಿಯಲ್ಲಿ ಕೈಗೊಳ್ಳುವ ಮೂಲಕ ಅಪರಾಧಿಗಳಿಗೆ ನ್ಯಾಯಾಲಯದಲ್ಲಿ ಕಠಿಣ ಶಿಕ್ಷೆ ವಿಧಿಸಲಾಗುವುದು ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.

ಸೋಮವಾರ ಉದಯ್‍ಪುರ ದಲ್ಲಿ ಇಬ್ಬರು ವ್ಯಕ್ತಿಗಳು ಟೈಲರ್‍ನ ಕತ್ತು ಸೀಳಿ ಹತ್ಯೆ ಮಾಡಿದ್ದರು. ಬಳಿಕ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದ ಆರೋಪಿಗಳುಇಸ್ಲಾಂ ಧರ್ಮವನ್ನು ಅವಮಾನಿಸಿದ್ದಕ್ಕಾಗಿ ಪ್ರತೀಕಾರವಾಗಿ ಈ ಕೃತ್ಯ ನಡೆಸಿರುವುದಾಗಿ ಹೇಳಿದ್ದಾರೆ. ಇದರಿಂದಾಗಿ ರಾಜಸ್ಥಾನದಲ್ಲಿ ಕೋಮು ಉದ್ವಿಗ್ನತೆ ಉಂಟಾಗಿದೆ.

ಆನ್‍ಲೈನ್‍ನಲ್ಲಿ ಪೆÇೀಸ್ಟ್ ಮಾಡಿದ ವೀಡಿಯೊ ಕ್ಲಿಪ್‍ನಲ್ಲಿ ದುಷ್ಕರ್ಮಿಯೊಬ್ಬ, ಟೈಲರ್ ನೊಬ್ಬನನ್ನು ಶಿರಚ್ಚೇದ ಮಾಡಿರುವುದಾಗಿ ಹೇಳಿರುವುದಲ್ಲದೇ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೊಲ್ಲುವುದಾಗಿ ಹೇಳಿದ್ದಾನೆ.

ಉದಯಪುರಕ್ಕೆ ಎನ್‍ಐಎ ತಂಡ: ರಾಜಸ್ಥಾನದ ಉದಯ್‍ಪುರದಲ್ಲಿ ನೂಪುರ್ ಶರ್ಮಾ ಪರ ಫೆÇೀಸ್ಟ್ ಹಾಕಿದ್ದ ಟೈಲರ್‍ನನ್ನು ಹತ್ಯೆ ಮಾಡಿದ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವಾಲಯ ಮಂಗಳವಾರ ರಾತ್ರಿ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‍ಐಎ) ತನಿಖಾಧಿಕಾರಿ ಗಳ ತಂಡವನ್ನು ಉದಯಪುರಕ್ಕೆ ರವಾನಿಸಿದೆ. ರಾಷ್ಟ್ರೀಯ ತನಿಖಾ ಸಂಸ್ಥೆಯ ತಂಡವನ್ನು ಉದಯಪುರಕ್ಕೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಕಟ್ಟುನಿಟ್ಟಾದ ಭಯೋತ್ಪಾದನಾ ವಿರೋಧಿ ಕಾನೂನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿದ ನಂತರ ಪ್ರಕರಣವನ್ನು ಎನ್‍ಐಎಗೆ ಹಸ್ತಾಂತರಿಸುವ ಸಾಧ್ಯತೆಯಿದೆ.
ಮೇಲ್ನೋಟಕ್ಕೆ ಇದು ಭಯೋತ್ಪಾದಕ ದಾಳಿಯಂತೆ ತೋರುತ್ತಿದೆ ಎಂದು ಅನಾಮ ಧೇಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ನೂಪುರ್ ಶರ್ಮಾ ಅವರನ್ನು ಬೆಂಬಲಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪೆÇೀಸ್ಟ್ ಹಾಕಿದ್ದ ವ್ಯಕ್ತಿಯನ್ನು ಇಬ್ಬರು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಈ ಸಂಪೂರ್ಣ ದಾಳಿಯ ವಿಡಿಯೋ ಕೂಡ ಮಾಡಲಾಗಿದೆ. ಅಷ್ಟೇ ಅಲ್ಲ, ಘಟನೆಯ ನಂತರ ಸಾಮಾಜಿಕ ಜಾಲತಾಣಗಳಲ್ಲಿ ಪೆÇೀಸ್ಟ್ ಹಾಕುವ ಮೂಲಕ ಆರೋಪಿಗಳು ಕೊಲೆಯ ಹೊಣೆಯನ್ನೂ ಹೊತ್ತುಕೊಂಡಿದ್ದಾರೆ.

ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ: ಉದಯಪುರದ 7 ಪೆÇಲೀಸ್ ಠಾಣೆ ಪ್ರದೇಶಗಳಲ್ಲಿ ಕರ್ಫ್ಯೂ ವಿಧಿಸಲಾಗಿದೆ. ಇಡೀ ರಾಜಸ್ಥಾನದಲ್ಲಿ ಸೆಕ್ಷನ್ 144 ಜಾರಿ ಗೊಳಿಸಲಾಗಿದೆ. ಆರೋಪಿಗಳು ವಿಡಿಯೋ ಮೂಲಕ ಪ್ರಧಾನಿ ನರೇಂದ್ರ ಮೋದಿಯ ವರಿಗೂ ಬೆದರಿಕೆ ಹಾಕಿದ್ದಾರೆ. ಆರೋಪಿಗಳಾದ ರಿಯಾಜ್ ಅನ್ಸಾರಿ ಮತ್ತು ಮೊಹಮ್ಮದ್ ಗೌಸ್ ಅವರನ್ನು ರಾತ್ರಿ 7 ಗಂಟೆಗೆ ರಾಜ್‍ಸಮಂದ್‍ನ ಭೀಮ್‍ನಲ್ಲಿ ಬಂಧಿಸಲಾಗಿದೆ. ಈ ಇಬ್ಬರೂ ಉದಯಪುರದ ಸೂರಜ್ಪೋಲ್ ಪ್ರದೇಶದ ನಿವಾಸಿಗಳು.

ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಇಡೀ ರಾಜ್ಯದಲ್ಲಿ 24 ಗಂಟೆಗಳ ಕಾಲ ಇಂಟರ್ನೆಟ್ ಬಂದ್ ಮಾಡಲಾಗಿದೆ. ಇಡೀ ರಾಜಸ್ಥಾನದಲ್ಲಿ ತೀವ್ರ ಎಚ್ಚರಿಕೆ ವಹಿಸಲಾಗಿದೆ. ಶವ ಇನ್ನೂ ಅಂಗಡಿಯ ಹೊರಗೆ ಬಿದ್ದಿದೆ. ಮೃತರ ಕುಟುಂಬಸ್ಥರು 50 ಲಕ್ಷ ರೂಪಾಯಿ ಹಾಗೂ ಸರ್ಕಾರಿ ಉದ್ಯೋಗ ನೀಡುವಂತೆ ಒತ್ತಾಯಿಸಿದ್ದಾರೆ. ಈ ಬಗ್ಗೆ ಸರ್ಕಾರ ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ.

ಅಳತೆ ನೀಡುವ ನೆಪದಲ್ಲಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳು: 40 ವರ್ಷದ ಟೈಲರ್ ಕನ್ಹಯ್ಯಾಲಾಲ್ ತೇಲಿ ಅವರು, ಧನ್ಮಂಡಿಯ ಭೂತಮಹಲ್ ಬಳಿ ಸುಪ್ರೀಂ ಟೈಲರ್ಸ್ ಎಂಬ ಅಂಗಡಿ ಇಟ್ಟುಕೊಂಡಿದ್ದರು. ಮಂಗಳವಾರ ಮಧ್ಯಾಹ್ನ 2.30ರ ಸುಮಾರಿಗೆ ಬೈಕ್‍ನಲ್ಲಿ ಇಬ್ಬರು ದುಷ್ಕರ್ಮಿಗಳು ಬಂದಿದ್ದಾರೆ. ಬಟ್ಟೆಯ ಅಳತೆ ಕೊಡುವ ನೆಪದಲ್ಲಿ ಅಂಗಡಿ ಪ್ರವೇಶಿಸಿದ್ದಾರೆ. ಕನ್ಹಯ್ಯಲಾಲ್‍ಗೆ ಏನೋ ಅರ್ಥವಾಗುವಷ್ಟರಲ್ಲಿ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ತೇಲಿ ಮೇಲೆ ಕತ್ತಿಯಿಂದ ಹಲವಾರು ಬಾರಿ ಇರಿದಿದ್ದಾರೆ. ಇದರಿಂದ ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

Translate »